Advertisement

ಶೈಕ್ಷಣಿಕ ಅಭಿವೃದ್ಧಿಗೆ ಸರ್ಕಾರ ಬದ್ಧ: ರೇಣು

05:35 PM Mar 23, 2021 | Team Udayavani |

ಹೊನ್ನಾಳಿ: ರಾಜ್ಯ ಬಿಜೆಪಿ ಸರ್ಕಾರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದ್ದು, ಶಾಲಾ- ಕಾಲೇಜುಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸುತ್ತಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು.

Advertisement

ತಾಲೂಕಿನ ಹೊಳೆಹರಳಹಳ್ಳಿ ಗ್ರಾಮದಲ್ಲಿ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಗೆ ಹಾಗೂ ಸರ್ಕಾರಿ ಉರ್ದು ಕಿರಿಯ ಶಾಲೆಗೆ ನಿರ್ಮಿಸಿರುವ ನೂತನ ಕೊಠಡಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾಮಾಂತರ ಪ್ರದೇಶಗಳಲ್ಲಿ ಮಕ್ಕಳು ಶಾಲೆ ಬಿಟ್ಟು ಹೊಲ, ಗದ್ದೆಗಳಲ್ಲಿ ಕೆಲಸ ಮಾಡುವುದು ಸಾಮಾನ್ಯ. ಶಿಕ್ಷಕರು ಪೋಷಕರ ಮನವೊಲಿಸಿ ಮಕ್ಕಳನ್ನು ಶಾಲೆಗೆ ಬರುವಂತೆ ಪ್ರೇರೇಪಿಸಬೇಕು. ಒಂದು ಕಾಲದಲ್ಲಿ “ದುಡ್ಡೇ ದೊಡ್ಡಪ್ಪ’ಎನ್ನುತ್ತಿದ್ದರು. ಈಗ ಕಾಲ ಬದಲಾಗಿದ್ದು “ದುಡ್ಡು ದೊಡ್ಡಪ್ಪ ವಿದ್ಯೆ ಅದರಪ್ಪ’ ಎನ್ನಲಾಗುತ್ತಿದೆ. ಹಾಗಾಗಿ ಶಿಕ್ಷಣ ಮಹತ್ವ ಪಡೆದಿದೆ ಎಂದು ತಿಳಿಸಿದರು.

ಗ್ರಾಮಕ್ಕೆ ವಿವಿಧ ಕಾಮಗಾರಿಗಳ ಅಡಿ 104 ಕೋಟಿ ರೂ.ಗಳಿಗಿಂತ ಹೆಚ್ಚಿನ ಅನುದಾನ ತಂದು ಸಮಗ್ರ ಅಭಿವೃದ್ಧಿಪಡಿಸಲಾಗಿದೆ. ಗ್ರಾಮಕ್ಕೆ ಈಗಾಗಲೇ 100 ಮನೆಗಳನ್ನು ಮಂಜೂರು ಮಾಡಲಾಗಿದ್ದು, ಗ್ರಾಮದ ಮುಖಂಡರುಗಳು ಇನ್ನು ಹೆಚ್ಚುವರಿಯಾಗಿ 72 ಮನೆಗಳ ಬೇಡಿಕೆ ಇಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಮಂಜೂರು ಮಾಡಲಾಗುವುದು. ಹೊಳೆಹರಳಹಳ್ಳಿ, ಕೊನಾಯ್ಕನಹಳ್ಳಿ, ಬಳ್ಳೇಶ್ವರ ಸೇರಿದಂತೆ ಏಳು ಹಳ್ಳಿಗಳಿಗೆ ತುಂಗಭದ್ರಾ ನದಿಯಿಂದ 7.5 ಕೋಟಿ ರೂ. ಅನುದಾನದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ ಎಂದರು.

ಗ್ರಾಪಂ ಅಧ್ಯಕ್ಷೆ ಬಸಮ್ಮ ನಾಗರಾಜ್‌, ಉಪಾಧ್ಯಕ್ಷೆ ಶೃತಿ ಮಂಜುನಾಥ್‌, ಎಸ್‌ ಡಿಎಂಸಿ ಅಧ್ಯಕ್ಷ ಫಕ್ಕೀರಪ್ಪ, ಉರ್ದು ಶಾಲೆ ಎಸ್‌ಡಿಎಂಸಿ ಅಧ್ಯಕ್ಷ ನಜೀರ್‌ ಸಾಬ್‌, ಸದಸ್ಯ ಹನುಮಂತಪ್ಪ, ಗ್ರಾಪಂ ಸದಸ್ಯರಾದ ಸುಭಾಷ್‌, ಮಂಜುನಾಥ್‌ ಸೇರಿದಂತೆ ಗ್ರಾಮದ ಮುಖಂಡರು ಇದ್ದರು. ಶಿಕ್ಷಕ ಪರಮೇಶ್ವರಪ್ಪ ಸ್ವಾಗತಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next