Advertisement

ತುರ್ತು ಪರಿಸ್ಥಿತಿ ನಿರ್ವಹಣೆಗೆ ಸರ್ಕಾರ ಬದ್ಧ : ಜೊಲ್ಲೆ

02:12 PM Aug 08, 2020 | Suhan S |

ಚಿಕ್ಕೋಡಿ: ಕೊಂಕಣ ಭಾಗದಲ್ಲಿ ಅತಿಯಾದ ಮಳೆಯಿಂದ ಉಂಟಾಗುವ ಪ್ರವಾಹ ನಿಯಂತ್ರಿಸಲು ಜಿಲ್ಲಾಡಳಿತ ಎಲ್ಲ ವ್ಯವಸ್ಥೆ ಮಾಡಿಕೊಂಡಿದೆ. ಶೀಘ್ರ ಕೊಲ್ಲಾಪುರ ಜಿಲ್ಲೆಯ ನೀರಾವರಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಹಾರಾಷ್ಟ್ರದ ಜಲಾಶಯಗಳಿಂದ ಬೀಡುವ ನೀರಿನ ಪ್ರಮಾಣದ ಕುರಿತು ಮಾಹಿತಿ ಪಡೆಯಲಾಗುತ್ತದೆ ಎಂದು ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು.

Advertisement

ಶುಕ್ರವಾರ ಸದಲಗಾ ಪಟ್ಟಣದ ದೂಧಗಂಗಾ ನದಿಯ ಸಂಭವನೀಯ ಪ್ರವಾಹ ಅವಲೋಕಿಸಿ ಮಾತನಾಡಿ, ಉಕ್ಕಿ ಹರಿಯುತ್ತಿರುವ ದೂಧಗಂಗಾ ನದಿ ನೀರಿನಿಂದ ಜನಸಾಮಾನ್ಯರಿಗೆ ಯಾವುದೇ ರೀತಿಯ ಅನಾಹುತವಾಗದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದರು.

ಪ್ರವಾಹ ಪರಿಸ್ಥಿತಿ ಕೈಮೀರಿದಾಗ ಜನ ಸಾಮಾನ್ಯರ ರಕ್ಷಣೆಗೆ ಬೋಟ್‌ ಗಳ ವ್ಯವಸ್ಥೆ ಪಡೆಯಬೇಕು. ದಿನೇ ದಿನೇ ಸುರಿಯುತ್ತಿರುವ ಮಳೆಯಿಂದಾಗಿ ಪ್ರವಾಹದ ತೀವ್ರತೆ ಹೆಚ್ಚಾಗುತ್ತಿರುವುದರಿಂದ ನದಿ ತೀರದ ಜನರು ಆದಷ್ಟು ಬೇಗ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳಬೇಕೆಂದು ಮನವಿ ಮಾಡಿದರು.

ಈ ವೇಳೆ ಹಾಲಸಿದ್ದನಾಥ ಸಕ್ಕರೆ ಕಾರ್ಖಾನೆ ನಿರ್ದೇಶಕ ರಾಮಗೊಂಡಾ ಪಾಟೀಲ, ಚಿಕ್ಕೋಡಿ ಸದಲಗಾ ಬಿಜೆಪಿ ಮಂಡಳ ಅಧ್ಯಕ್ಷ ಸಂಜಯ ಪಾಟೀಲ, ಪುರಸಭೆ ಸದಸ್ಯರಾದ ಆನಂದ ಪಾಟೀಲ, ಅಭಿನಂದನ ಪಾಟೀಲ, ಹೇಮಂತ ಶಿಂಗೆ, ಲಕ್ಷ್ಮೀಕಾಂತ ಹಾಲಪ್ಪನ್ನವರ, ಭರತ ಬೋರಗಾಂವೆ, ಕೇತನ ಪಾಟೀಲ, ಅನಿರುದ್ದ ಪಾಟೀಲ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next