Advertisement

ಎಸ್ಸಿ, ಎಸ್ಟಿ ವರ್ಗಗಳ ಮೀಸಲಾತಿ ಹೆಚ್ಚಳಕ್ಕೆ ಸರಕಾರ ಬದ್ಧ: ಪ್ರಹ್ಲಾದ ಜೋಶಿ

12:44 PM Dec 11, 2022 | Team Udayavani |

ಹುಬ್ಬಳ್ಳಿ: ಅನೇಕ ರಾಜ್ಯಗಳಲ್ಲಿ ಮೀಸಲಾತಿ ಪ್ರಮಾಣ ಶೇ.50 ಕ್ಕಿಂತ ಹೆಚ್ಚಿದೆ. ಮೀಸಲಾತಿ ಶೇ.50 ಕ್ಕಿಂತ ಹೆಚ್ಚಳ ಅಸಾಧ್ಯ ಎಂದು ಕೇಂದ್ರ ಸರಕಾರ ಯಾವ ಹಿನ್ನೆಲೆಯಲ್ಲಿ ಲಿಖಿತ ಉತ್ತರ ನೀಡಿದೆ ಎಂಬುವುದನ್ನು ಪರಿಶೀಲಿಸುವೆ. ಎಸ್ಸಿ, ಎಸ್ಟಿ ವರ್ಗಗಳಿಗೆ ಮೀಸಲಾತಿ ಹೆಚ್ಚಳಕ್ಕೆ ರಾಜ್ಯ ಹಾಗೂ ಕೇಂದ್ರ ಸರಕಾರ ಬದ್ಧವಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು.

Advertisement

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೀಸಲಾತಿ ಹೆಚ್ಚಳದ ಕುರಿತು ರಾಜ್ಯ ಸರಕಾರ ನಿಯಮಬದ್ಧವಾಗಿ ಮಾಡಿದೆ. ಹೀಗಾಗಿ ಮೀಸಲಾತಿ ಹೆಚ್ಚಳ ಕೈಬಿಡಲಿದೆ ಎನ್ನುವ ಆತಂಕ ಬೇಡ. ಅವರ ಮೀಸಲಾತಿ ಹೆಚ್ಚಳ ಸರಕಾರ ಹಾಗೂ ನಮ್ಮ ಪಕ್ಷದ ಬದ್ಧತೆಯಾಗಿದೆ. ಆದರೆ ಕೇಂದ್ರ ಸರಕಾರದ ಲಿಖಿತವಾಗಿ ನೀಡಿರುವ ಉತ್ತರ ಯಾವ ಹಿನ್ನಲೆಯಲ್ಲಿ ಹೇಳಿದ್ದಾರೆ ಎನ್ನುವ ಮಾಹಿತಿ ಪಡೆದು ಸ್ಪಷ್ಟವಾಗಿ ತಿಳಿಸಲಾಗುವುದು ಎಂದರು.

ಇದನ್ನೂ ಓದಿ:ಕರ್ನಾಟಕ ತಂಡದಲ್ಲೂ ಸ್ಥಾನವಿಲ್ಲ… ಹತಾಶೆಯಿಂದ ಕರುಣ್ ನಾಯರ್ ಮಾಡಿದ ಟ್ವೀಟ್ ವೈರಲ್

ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬಿಟ್ಟಿರುವ ವಿಚಾರ. ಈ ಕುರಿತು ರಾಷ್ಟ್ರ ನಾಯಕರು ಯಾವ ಸೂಚನೆ ನೀಡುತ್ತಾರೋ ಅದರಂತೆ ಆಗಲಿದೆ. ದೆಹಲಿಗೆ ಇತರೆ ವಿಷಯಗಳ ಕುರಿತು ಹೋಗಿ ಬಂದಿದ್ದಾರೆ. ಸಚಿವ ಸಂಪುಟದ ವಿಚಾರ ಕುರಿತು ಅಲ್ಲ. ಅದು ಮಾಧ್ಯಮಗಳ ಸೃಷ್ಟಿಯಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next