ನವದೆಹಲಿ: ಕೋವಿಡ್ ನಿಂದಾಗಿ ಕುಸಿದಿರುವ ದೇಶದ ಆರ್ಥಿಕತೆಯನ್ನು ಮೇಲೆತ್ತಲು ಬೇಕಾದ ಎಲ್ಲಾ ಕ್ರಮಗಳನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ನವದೆಹಲಿಯಲ್ಲಿ ನಡೆಯುತ್ತಿರುವ ಭಾರತೀಯ ಕೈಗಾರಿಕೆಗಳ ಒಕ್ಕೂಟದ (ಸಿಐಐ) ವಾರ್ಷಿಕ ಸಮ್ಮೇಳನದಲ್ಲಿ ಮಾತನಾಡಿದ ಅವರು, “ಹಲವಾರು ರಾಜ್ಯಗಳು ಕೋವಿಡ್ ನಿರ್ಬಂಧಗಳನ್ನು ತೆರವು ಮಾಡಿರುವ ಹಿನ್ನೆಲೆಯಲ್ಲಿ ಹಣಕಾಸು ಪರಿಸ್ಥಿತಿ ನಿಧಾನವಾಗಿ ಸಹಜತೆಯತ್ತ ಮರಳುತ್ತಿದೆ.
ನೇರ ಬಂಡವಾಳ ಹೂಡಿಕೆಯಲ್ಲಿ ಶೇ. 37ರಷ್ಟು ವೃದ್ಧಿಯಾಗಿದೆ. ಜುಲೈ ಹೊತ್ತಿಗೆ ವಿದೇಶಿ ವಿನಿಮಯ ಮೀಸಲು ನಿಧಿ 46 ಲಕ್ಷ ಕೋಟಿ ರೂ.ಗಳಿಗೆ ಏರಿದೆ.
ಇದನ್ನೂ ಓದಿ:ಮೂರು ಮಹಾನಗರ ಪಾಲಿಕೆ ಚುನಾವಣೆಗೆ ಕಾಂಗ್ರೆಸ್ ರಣತಂತ್ರ
ಹಾಗಾಗಿ, ವಿವಿಧ ಕ್ಷೇತ್ರಗಳಲ್ಲಿ ಹೆಚ್ಚೆಚ್ಚು ಹೂಡಿಕೆ ಮಾಡುವುದರಿಂದ ಭಾರತದ ಅಭಿವೃದ್ಧಿಗೆ ಕಾರ್ಪೊರೇಟ್ ಸಂಸ್ಥೆಗಳು ಕೈ ಜೋಡಿಸಬೇಕು” ಎಂದು ಅವರು ಹೇಳಿದ್ದಾರೆ.