Advertisement

ಸವಿತಾ ಸಮಾಜ ಅಭಿವೃದ್ಧಿಗೆ ಸರ್ಕಾರ ಬದ್ಧ: ಪಾಟೀಲ

02:50 PM Jun 27, 2017 | |

ಕಲಬುರಗಿ: ಕಾಯಕ ಜೀವಿಗಳಾದ ಸವಿತಾ ಸಮಾಜದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಹೇಳಿದರು. ನಗರದ ವಿಶ್ವೇಶ್ವರಯ್ಯ ಭವನದಲ್ಲಿ ಸವಿತಾ ಸಮಾಜ  ಸರ್ಕಾರಿ, ಅರೆ ಸರ್ಕಾರಿ ನೌಕರರ ಸಂಘ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.

Advertisement

ಸವಿತಾ ಸಮಾಜದಲ್ಲಿ ಅನೇಕರು ಪ್ರತಿಭಾವಂತರಿದ್ದಾರೆ. ಸಮಾಜದ ಸರ್ವಾಂಗೀಣ ಪ್ರಗತಿಗೆ ಕೌಶಲ ಅಭಿವೃದ್ಧಿ ರೂಢಿಸಿಕೊಳ್ಳಬೇಕು ಎಂದು ಸಲಹೆ  ನೀಡಿದರು. ಸಾನ್ನಿಧ್ಯ ವಹಿಸಿದ್ದ ಕೊಂಚೂರು ಸವಿತಾ ಪೀಠದ ಶ್ರೀಧರಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡಿ, ಸವಿತಾ ಸಮಾಜದ ಯುವ ಜನರಿಗೆ ಕೌಶಲ ತರಬೇತಿ ಕೇಂದ್ರ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. 

ಪ್ರಗತಿಯತ್ತ ಸಾಗಬೇಕಾದರೆ ಕಾಲಕ್ಕೆ ತಕ್ಕಂತಹ ಕೌಶಲ ಕಲಿಯಬಯಬೇಕಾಗುತ್ತದೆ. ಈ ದಿಸೆಯಲ್ಲಿ ಪ್ರಯತ್ನಗಳು ನಡೆದಿವೆ  ಎಂದು ಹೇಳಿದರು. ಸವಿತಾ ಸಮಾಜ ಸರ್ಕಾರಿ, ಅರೆಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನಾಗಪ್ಪ ಟಿ.ಗೋಗಿ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕಿ ಅರುಣಾ ಸಿ. ಪಾಟೀಲ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. 

ಚಿಂತಕರಾದ ಡಾ| ಟಿ.ಎಸ್‌.ವಿವೇಕಾಂದ, ಸವಿತಾ ಸಮಾಜ ಸರ್ಕಾರಿ, ಅರೆ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಡಾ|  ಶಿವಮೂರ್ತಿ ಜಿ., ಮಹಾನಗರ ಪಾಲಿಕೆ ಸದಸ್ಯ ಪರಶುರಾಮ ನಸಲವಾಯಿ, ಗುಲಬರ್ಗಾ ವಿಶ್ವವಿದ್ಯಾಲಯದ ಸಿಂಡಿಕೇಟ್‌ ಸದಸ್ಯ ವಿಜಯಭಸ್ಕರ್‌ ಇಟಗಿ, ಜಿಲ್ಲಾ ಸವಿತಾ  ಸಮಾಜದ ಅಧ್ಯಕ್ಷ ನರಸಿಂಗ್‌ ಮೋತಕಪಲ್ಲಿ, ಗೌರವಾಧ್ಯಕ್ಷ ದತ್ತಾತ್ರೇಯ ಚೌಧರಿ ಇದ್ದರು.

ಸವಿತಾ ಸಮಾಜದ ಸರ್ಕಾರಿ, ಅರೆ ಸರ್ಕಾರಿ ನೌಕರರ ಸಂಘದಿಂದ  ಎಸ್‌ಎಸ್‌ಎಲ್‌ಸಿ, ಪಿಯುಸಿ, ಸ್ನಾತಕ, ಸ್ನಾತಕೊತ್ತರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ಸಾಧಕರಿಗೆ ಪುರಸ್ಕಾರ ನೀಡಿ ಗೌರವಿಸಲಾಯಿತು. ರಾಯಚೂರು, ಬೀದರ, ಯಾದಗಿರಿ ಹಾಗೂ ವಿವಿಧ ಜಿಲ್ಲೆಯ ಸವಿತಾ ಸಮಾಜ ಸರ್ಕಾರಿ, ಅರೆಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಹಾಗೂ ಸಮಾಜದ ಮುಖಂಡರು ಭಾಗವಹಿಸಿದ್ದರು.  

Advertisement

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಮಹಾಂತೇಶ ಹಡಗಿಲರಿಂದ ಸುಗಮ ಸಂಗೀತ, ಎಂ.ವೈ. ಸುರಪುರ ಅವರಿಂದ ಶಾಸ್ತ್ರೀಯ ಸಂಗೀತ ಏರ್ಪಡಿಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next