Advertisement

ವಿದ್ಯಾರ್ಥಿಗಳ ಕೌಶಲ ಕಲಿಕೆಗೆ ಇನ್ಫೋಸಿಸ್‌ ಜತೆ ಸರಕಾರ ಒಪ್ಪಂದ

11:06 PM Sep 28, 2021 | Team Udayavani |

ಬೆಂಗಳೂರು: ವಿದ್ಯಾರ್ಥಿಗಳ ಕೌಶಲ ಕಲಿಕೆಗೆ ಒತ್ತು ನೀಡುವುದು ಸೇರಿದಂತೆ ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್‌ಇಪಿ) ಆಶಯಗಳನ್ನು ಅನುಷ್ಠಾನಗೊಳಿಸುವುದಕ್ಕೆ ಪೂರಕವಾಗಿ ಉನ್ನತ ಶಿಕ್ಷಣ ಇಲಾಖೆ ಹಾಗೂ ಇನ್ಫೋಸಿಸ್‌ ಕಂಪೆನಿ ಸದ್ಯದಲ್ಲೇ 3 ಮಹತ್ವದ ಒಡಂಬಡಿಕೆಗಳಿಗೆ ಸಹಿ ಹಾಕಲಿವೆ.

Advertisement

ಕೌಶಲ ಕಲಿಸುವ ಮೂರು ಸಾವಿರಕ್ಕೂ ಹೆಚ್ಚು ಕೋರ್ಸ್‌ ಗಳಿರುವ ಇನ್ಫೊಸಿಸ್‌ ಸ್ಪ್ರಿಂಗ್‌ ಬೋರ್ಡ್‌ ಬಳಕೆ, ಕಾಲೇಜು ಉಪನ್ಯಾಸಕರಿಗೆ ಡಿಜಿಟಲ್‌ ತರಬೇತಿ, ಉದ್ಯೋಗ ಸಂಬಂಧಿ ಮಾರ್ಗದರ್ಶಕ್ಕಾಗಿ ಕ್ಯಾಂಪಸ್‌ ಕನೆಕ್ಟ್ ಹಾಗೂ ಉನ್ನತ ಶಿಕ್ಷಣ ಕಾಲೇಜುಗಳಿಗೆ ಇನ್ಫೋಸಿಸ್‌ ವತಿಯಿಂದ 15,000 ಡಿಬಾಂಡೆಡ್‌ ಕಂಪ್ಯೂಟರುಗಳ ಕೊಡುಗೆಗೆ ಸಂಬಂಧಿಸಿ ಒಡಂಬಡಿಕೆ ಮಾಡಿಕೊಳ್ಳಲು ಉನ್ನತ ಶಿಕ್ಷಣ ಸಚಿವ ಡಾ| ಸಿ.ಎನ್‌.ಅಶ್ವತ್ಥನಾರಾಯಣ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ವಿಕಾಸಸೌಧದಲ್ಲಿ ನಡೆದ ಇನ್ಫೋಸಿಸ್‌ ಅಧಿಕಾರಿಗಳ ಸಭೆಯಲ್ಲಿ ನಿರ್ಧರಿಸಲಾಗಿದೆ.

ಇದನ್ನೂ ಓದಿ:ಭವಾನಿಪುರ ಸಮರಕ್ಕೆ ಕೋಲ್ಕತಾ ಹೈಕೋರ್ಟ್‌ ಒಪ್ಪಿಗೆ

Advertisement

Udayavani is now on Telegram. Click here to join our channel and stay updated with the latest news.

Next