Advertisement

ಶೈಕ್ಷಣಿಕ ಅಭಿವೃದ್ಧಿಗೆ ಸರಕಾರದ ಕೊಡುಗೆ ಅಪಾರ

05:32 PM Mar 02, 2018 | |

ಸುರಪುರ: ಶೈಕ್ಷಣಿಕ ಅಭಿವೃದ್ಧಿಗೆ ಕಾಂಗ್ರೆಸ್‌ ಸರಕಾರ ನೀಡಿದಷ್ಟು ಮಹತ್ವ ಬೇರಾವ ಸರಕಾರಗಳೂ ನೀಡಿಲ್ಲ. ಅದರಲ್ಲೂ ವಿಶೇಷವಾಗಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರಕಾರ ಶೈಕ್ಷಣಿಕ ಅಭಿವೃದ್ಧಿಗೆ ನೀಡಿದ ಕೊಡುಗೆ ಅವಿಸ್ಮರಣೀಯ ಎಂದು ಶಾಸಕ ರಾಜಾ ವೆಂಕಟಪ್ಪ ನಾಯಕ ಹೇಳಿದರು.

Advertisement

ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಗುರುವಾರ 6 ಕೋಟಿ ರೂ. ವೆಚ್ಚದ ವಿವಿಧ ಶೈಕ್ಷಣಿಕ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಕಾಳಜಿ ವಹಿಸಿ ಸಾಕಷ್ಟು ಅನುದಾನ ಒದಗಿಸಿ ಹಲವಾರು ಶೈಕ್ಷಣಿಕ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. 

ಶಾಲಾ, ಕಾಲೇಜು, ಹಾಸ್ಟೆಲ್‌ ಕಟ್ಟಡಗಳ ನಿರ್ಮಾಣದ ಜೊತೆಗೆ ಬಡ ವಿದ್ಯಾರ್ಥಿಗಳಿಗೆ ಬಟ್ಟೆ, ಶೂ, ಭಾಗ್ಯ, ನೋಟ್‌ ಬುಕ್‌, ವಿದ್ಯಾರ್ಥಿ ಜ್ಯೋತಿ, ವಿದ್ಯಾಸಿರಿ, ಉಚಿತ ಬಸ್‌ ಪಾಸ್‌ ವಿತರಣೆ, ಪ್ರೋತ್ಸಾಹ ಧನ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೆ ತಂದ ಶ್ರೇಯಸ್ಸು ಕಾಂಗ್ರೆಸ್‌ ಸರಕಾರಕ್ಕೆ ಸಲ್ಲುತ್ತದೆ ಎಂದರು. 2016-17 ಸಾಲಿನ ವಿಶೇಷ ಅಭಿವೃದ್ಧಿ ಯೋಜನೆಡಿಯಲ್ಲಿ ಸರಕಾರಿ ಪದವಿ ಕಾಲೇಜಿನಲ್ಲಿ 1 ಕೋಟಿ ವೆಚ್ಚದಲ್ಲಿ 5 ಹೆಚ್ಚುವರಿ ಕೊಣೆ ನಿರ್ಮಾಣ ಮಾಡಲಾಗುವುದು.

ಮೆಟ್ರಿಕ್‌ ನಂತರದ ಹಿಂದುಳಿದ ವರ್ಗಗಳ ಬಾಲಕರಿಗೆ 3 ಕೋಟಿ ವೆಚ್ಚದಲ್ಲಿ ವಸತಿ ನಿಲಯ ನಿರ್ಮಾಣ ಮತ್ತು ಸರಕಾರಿ ಪಾಲಟೆಕ್ನಿಕ್‌ ಕಾಲೇಜಿನ ವಿದ್ಯಾರ್ಥಿನಿಯರಿಗೆ 2 ಕೋಟಿ ರೂ. ವೆಚ್ಚದಲ್ಲಿ ಮಹಿಳಾ ವಸತಿ ನಿಲಯ ನಿರ್ಮಿಸಲಾಗುವುದು. ಇದರಿಂದ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲ ಆಗಲಿದೆ ಎಂದರು. ಕ್ಷೇತ್ರದಲ್ಲಿ ನಾನು ಶೈಕ್ಷಣಿಕ ವಲಯಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಿದ್ದೇನೆ. ತಾಲೂಕಿನಾದ್ಯಂತ ಶಾಲಾ-ಕಾಲೇಜುಗಳಲ್ಲಿ ಹೆಚ್ಚುವರಿ ಕೋಣೆಗಳ ನಿರ್ಮಾಣ, ಹೊಸ ಕಟ್ಟಡ, ಹೈಸ್ಕೂಲ್‌, ಮೊರಾರ್ಜಿ ವಸತಿ ಶಾಲೆ, ಕಾಲೇಜುಗಳಿಗೆ ಮಂಜೂರಾತಿ ದೊರಕಿಸಿಕೊಟ್ಟಿದ್ದೇನೆ. ಅನೇಕ ಕಡೆಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ಮಂಜೂರು ಮಾಡಿಸಿದ್ದೇನೆ. ಎಲ್ಲ ಸಮುದಾಯಗಳ ವಿದ್ಯಾರ್ಥಿಗಳ ಅನುಕೂಲಕ್ಕೆ ಕಾಳಜಿ ವಹಿಸಲಾಗಿದೆ. ವಿದ್ಯಾರ್ಥಿಗಳು ಸರಕಾರದ ಯೋಜನೆಗಳನ್ನು ಸದ್ಬಳೆಕೆ ಮಾಡಿಕೊಂಡು ಉತ್ತಮ ಫಲಿತಾಂಶ ಪಡೆದು ಕಾಲೇಜಿಗೂ ಮತ್ತು ತಾಲೂಕಿಗೆ ಕೀರ್ತಿ ತರಬೇಕು ಎಂದು ಸಲಹೆ ನೀಡಿದರು.

ಅಪೆಕ್ಸ್‌ ಬ್ಯಾಂಕ್‌ ರಾಜ್ಯ ನಿರ್ದೇಶಕ ವಿಠ್ಠಲ ಯಾದವ, ಸೂಲಪ್ಪ ಕಮತಗಿ, ವೆಂಕೋಬ ಸಾಹು ಮಂಗಳೂರು, ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ| ರಾಘವೇಂದ್ರ ಗುಡುಗುಂಟಿ, ಉಪನ್ಯಾಸಕ ಎಸ್‌.ಎಸ್‌.ರಾಂಪುರೆ, ಭೀಮಣ್ಣ ಮಾಲಿ ಪಾಟೀಲ್‌, ಸಿದ್ದಪ್ಪ ದಿಗ್ಗಿ, ಶರನಗೌಡ ಪಾಟೀಲ, ಸೇರಿದಂತೆ ಸರಕಾರಿ ಪಾಲಿಟೆಕ್ನಿಕ್‌ ಕಾಲೇಜಿನ ಉಪನ್ಯಾಸಕರು ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next