Advertisement
ಸಭೆ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಸದ್ಯ 10 ಸಾವಿರ ಸಹಾಯಧನ ಕೊಡಲಾಗುತ್ತಿದ್ದು, ಈ ವರ್ಷದಿಂದ 5 ಸಾವಿರ ರೂ. ಹೆಚ್ಚಿಸಲಾಗುವುದು. ಈ ಸಂಬಂಧ ತತ್‌ಕ್ಷಣ ಆದೇಶ ಹೊರಡಿಸಲಾಗುವುದು. ದಿಲ್ಲಿ ಹಾಸ್ಟೆಲ್‌ನಲ್ಲಿ ಹೈಟೆಕ್ ಲೈಬ್ರರಿ ಮಾಡಲಾಗುವುದು. ಅಲ್ಲಿ ಎಲ್ಲ ರೀತಿಯ ಪುಸ್ತಕಗಳು ಸಿಗುವ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದರು.
ಈ ವರ್ಷ ಶೇ. 100 ಸಾಧನೆ ಆಗಬೇಕು. ಇದರಲ್ಲಿ ನಿರ್ಲಕ್ಷ್ಯ ಮಾಡಿದವರ ಮೇಲೆ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ. ಕಾಯ್ದೆಯಲ್ಲಿದ್ದ 7ಇ ರದ್ದು ಮಾಡಿದ ರೀತಿಯಲ್ಲಿ 7ಡಿ ಕೂಡ ರದ್ದು ಮಾಡಬೇಕು ಎಂದು ಶಾಸಕ ನರೇಂದ್ರಸ್ವಾಮಿ ಸಲಹೆ ನೀಡಿದ್ದಾರೆ. ಈ ಸಲಹೆಯ ಸಾಧಕ ಬಾಧಕಗಳನ್ನು ಪರಿಶೀಲಿಸಲಾಗುವುದು ಎಂದರು.
Related Articles
Advertisement
ಯೋಜನೆಯ ಮೌಲ್ಯಮಾಪನಕಳೆದ 10 ವರ್ಷದಲ್ಲಿ ಈ ಯೋಜನೆಯಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದ ಮೇಲೆ ಬೀರಿರುವ ಪರಿಣಾಮಗಳ ಬಗ್ಗೆ ಈ ವರ್ಷ ಮನೆ-ಮನೆಗೆ ಭೇಟಿ ನೀಡಿ ಅಧ್ಯಯನ ನಡೆಸಲಾಗುವುದು. ಸಮುದಾಯದ ಮೇಲೆ ಬೀರಿರುವ ಪರಿಣಾಮ, ಸಮುದಾಯಕ್ಕೆ ಯೋಜನೆ ತಲುಪಿರುವ ಪ್ರಮಾಣದ ಬಗ್ಗೆ, ಹಾಗೂ ಅವರ ಆರ್ಥಿಕ ಸ್ಥಿತಿ ಪ್ರಗತಿ ಆಗಿರುವ ಬಗ್ಗೆ ಮೌಲ್ಯಮಾಪನ ಮಾಡಲಾಗುವುದು. ಕಳೆದ ವರ್ಷ ಯಾದ್ರಚ್ಛಿಕವಾಗಿ ಅಧ್ಯಯನ ನಡೆಸಿದ್ದು ಶೇ. 65ರಷ್ಟು ಯಶಸ್ಸು ಕಂಡು ಬಂದಿದೆ. ಈ ವರ್ಷ ಸಂಪೂರ್ಣ ಅಧ್ಯಯನ ಹಾಗೂ ಮೌಲ್ಯಮಾಪನ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಲ್ಯಾಪ್‌ಟಾಪ್‌ಗೆ 300 ಕೋಟಿ ರೂ?
ಪರಿಶಿಷ್ಟ ಜಾತಿ ಹಾಗೂ ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ನೀಡುವಂತೆ ಶಾಸಕ ನರೇಂದ್ರಸ್ವಾಮಿ ಸಲಹೆ ನೀಡಿದ್ದು, ಇದಕ್ಕೆ ಸುಮಾರು 300 ಕೋಟಿ ರೂ. ವೆಚ್ಚವಾಗಬಹುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಪಿಜಿ ವಿದ್ಯಾರ್ಥಿಗಳಿಗೂ ಲ್ಯಾಪ್‌ಟಾಪ್ ನೀಡಬೇಕೆಂಬ ಪ್ರಸ್ತಾವ ಇದೆ. ಇದಕ್ಕೆ ಹೆಚ್ಚುವರಿಯಾಗಿ 90 ಕೋಟಿ ರೂ. ಬೇಕು. ಈ ಬಗ್ಗೆ ಪರಿಶೀಲನೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಹೇಳಿದರು.