Advertisement
ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮಗಳೊಂದಿಗೆ ಮಾತ ನಾಡಿ, ನಾನು ಬಡವರ ಪರ ವಾಗಿರುವವನು. ಸರಕಾರಿ ವೈದ್ಯರು ಖಾಸಗಿ ಕ್ಲಿನಿಕ್ ನಡೆಸುವುದರಿಂದ ಬಡ ಜನರಿಗೆ ತೊಂದರೆ ಆಗುತ್ತಿದೆ. ಹೀಗಾಗಿ ಸರಕಾರಿ ವೈದ್ಯರು ಖಾಸಗಿ ಕ್ಲಿನಿಕ್ ತೆರೆಯುವುದು ಮತ್ತು ಖಾಸಗಿ ನರ್ಸಿಂಗ್ ಹೋಂಗಳಲ್ಲಿ ಸೇವೆ ಸಲ್ಲಿಸಿದರೆ ವಜಾಗೊಳಿಸಲಾಗುವುದು ಎಂದು ಎಚ್ಚರಿಸಿದರು.
ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಜನರಿಗೆ ಸೂಕ್ತ ಮೂಲ ಸೌಕರ್ಯ ಇದೆಯೇ ಇಲ್ಲವೇ ಎನ್ನುವುದನ್ನು ಪರಿಶೀಲಿಸಲು ಪ್ರಾಥ ಮಿಕ ಆರೋಗ್ಯ ಕೇಂದ್ರ ಗಳಲ್ಲಿಯೇ ವಾಸ್ತವ್ಯ ಹೂಡಲು ತೀರ್ಮಾನಿಸಿದ್ದೇನೆ. ಕೆಲವು ಆಸ್ಪತ್ರೆಗಳನ್ನು ಪಟ್ಟಿ ಮಾಡಲಾಗಿದ್ದು, ಅಲ್ಲಿನ ಸ್ಥಿತಿಗತಿ, ಸಿಬಂದಿ ಕೊರತೆ, ರೋಗಿಗಳ ಸಮಸ್ಯೆ ಗಳನ್ನು ಆಲಿಸುತ್ತೇನೆ. ಶಾಸಕರೂ ಜತೆ ಸೇರುವಂತೆ ಮನವಿ ಮಾಡುವುದಾಗಿ ತಿಳಿಸಿದರು. ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುತ್ತಿಲ್ಲ ಎಂಬ ಆರೋಪಕ್ಕೆ ಪ್ರತಿ ಕ್ರಿಯಿಸಿದ ಅವರು, ಸರಕಾರದಲ್ಲಿ ಯಾವುದೇ ರೀತಿಯ ಹಣಕಾಸಿನ ತೊಂದರೆಯಿಲ್ಲ. ನೆರೆ ಸಂತ್ರಸ್ತರಿಗೆ ಸರಕಾರ ಸೂಕ್ತ ಪರಿಹಾರ ನೀಡುತ್ತಿದೆ ಎಂದರು.
Related Articles
Advertisement