Advertisement
ಕಾಂಗ್ರೆಸ್ ಪ್ರತಿಭಟನೆ ನಡುವೆಯೇ ಕೋವಿಡ್ ಕುರಿತ ಚರ್ಚೆಗೆ ಸರ್ಕಾರದ ಪರವಾಗಿ ಉತ್ತರ ಮಂಡಿಸಿದ ಅವರು, ಕೋವಿಡ್ ಅಂಕಿ ಅಂಶಗಳನ್ನು ಮುಚ್ಚಿಡುವ ಯಾವುದೇ ಅವಶ್ಯಕತೆ ಆಗಲಿ ಅಥವಾ ಉದ್ದೇಶ ಆಗಲಿ ನಮ್ಮ ಸರ್ಕಾರಕ್ಕೆ ಇಲ್ಲ. ಐಸಿಎಂಆರ್ ಮಾರ್ಗಸೂಚಿ ಪ್ರಕಾರವೇ ಎಲ್ಲ ಅಂಕಿ ಅಂಶಗಳು ದಾಖಲಾಗುತ್ತವೆ ಎಂದು ಹೇಳಿದರು.
ಕೋವಿಡ್ ಮೊದಲ ಅಲೆಗೆ ಮುನ್ನ ವೈದ್ಯಕೀಯ ಶಿಕ್ಷಣ ಇಲಾಖೆಯ ಆಸ್ಪತ್ರೆಗಳಲ್ಲಿ 413, ಆರೋಗ್ಯ ಇಲಾಖೆ ಆಸ್ಪತ್ರೆಗಳಲ್ಲಿ 312 ಸೇರಿ ಒಟ್ಟು 725 ಐಸಿಯು ಹಾಸಿಗೆ ಇತ್ತು. ಮೊದಲ ಅಲೆ ವೇಳೆಗೆ 858 ಹಾಗೂ ಎರಡನೇ ಅಲೆ ವೇಳೆಗೆ 1,961 ಕ್ಕೆ ಏರಿಸಿ ಆಗಸ್ಟ್ ವೇಳೆಗೆ 3,877 ಹಾಸಿಗೆ ಲಭ್ಯವಿದೆ. ಅದೇ ರೀತಿ ಆಕ್ಸಿಜನ್ ಹಾಸಿಗೆ, ಸಾಮಾನ್ಯ ಹಾಸಿಗೆ, ಆಕ್ಸಿಜನ್ ಸಿಲಿಂಡರ್, ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ ಪ್ರಮಾಣ ಸಹ ಹೆಚ್ಚಿಸಲಾಯಿತು ಎಂದು ಹೇಳಿದರು.
Related Articles
Advertisement
ರಾಜ್ಯದಲ್ಲಿ ಲಸಿಕೆ ದಾಖಳೆ ಪ್ರಮಾಣದಲ್ಲಿ ನೀಡಲಾಗಿದೆ. ಸೆಪ್ಟೆಂಬರ್ 24 ಕ್ಕೆ 5.39 ಕೋಟಿ ರೂ. ಡೋಸ್ ನೀಡಲಾಗಿದೆ. ರಾಜ್ಯ ಸರ್ಕಾರ 4.89 ಕೋಟಿ ಡೋಸ್ ಪಡೆದಿದೆ. ಈ ಪೈಕಿ ಕೇಂದ್ರ ಸರ್ಕಾರದಿಂದ 4.63 ಕೋಟಿ ಡೋಸ್ ಪೂರೈಕೆಯಾಗಿದೆ ಎಂದು ತಿಳಿಸಿದರು.
ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಯೋಜನೆಯಡಿ 2.75 ಲಕ್ಷ ಕೋವಿಡ್ ಸೋಂಕಿತರು ಉಚಿತ ಚಿಕಿತ್ಸೆ ಪಡೆದಿದ್ದಾರೆ ಎಂದು ಹೇಳಿದರು.
ಚಾಮರಾಜನಗರದಲ್ಲಿ ನಡೆದ ದುರಂತ ಸಂಬಂಧ ನ್ಯಾ. ಎ.ಬಿ. ಪಾಟೀಲ್ ಸಮಿತಿ ವರದಿ ನಿರೀಕ್ಷಿಸಲಾಗುತ್ತಿದ್ದು ವರದಿ ಬಂದ ತಕ್ಷಣ ಸೂಕ್ರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಕೋವಿಡ್ ನಿರ್ವಹಣೆ ಕುರಿತ ಚರ್ಚೆಗೆ ಸರ್ಕಾರದ ಉತ್ತರ ಕೇಳದೆ ಕಾಂಗ್ರೆಸ್ ಪಲಾಯನ ಮಾಡಿದೆ. ಜನರ ಆರೋಗ್ಯದ ಬಗ್ಗೆ ಆ ಪಕ್ಷಕ್ಕೆ ಇರುವ ಕಾಳಜಿ ಮತ್ತು ಬದ್ಧತೆ ಬಟಾ ಬಯಲು ಆಗಿದೆ.-ಡಾ.ಕೆ.ಸುಧಾಕರ್