Advertisement

ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಸಿದ್ಧತೆ

03:01 PM Oct 06, 2021 | Team Udayavani |

ದಾವಣಗೆರೆ: ಜಿಲ್ಲೆಯಲ್ಲಿ ಅ. 21, 22 ಮತ್ತು23ರಂದು ನಡೆಯಲಿರುವ ರಾಜ್ಯ ಮಟ್ಟದಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಎಂಟು ಸಾವಿರಕ್ರೀಡಾಪಟುಗಳು ಆಗಮಿಸಲಿದ್ದು, ಸಕಲ ಸಿದ್ಧತೆಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.

Advertisement

ಮಂಗಳವಾರ ಜಿಲ್ಲಾಡಳಿತ ಭವನದ ತುಂಗಭದ್ರಾಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌,ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿರುವ ರಾಜ್ಯಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟಹಾಗೂ ಸಾಂಸ್ಕೃತಿಕ ಸ್ಪರ್ಧೆ-2021ರ ಪೂರ್ವಭಾವಿಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಜ್ಯ ಮಟ್ಟದ ಕ್ರೀಡಾಕೂಟವನ್ನು ಯಶಸ್ವಿಯಾಗಿ ನಡೆಸಿಕೊಡಲು ಈಗಾಗಲೇ ಜಿಲ್ಲಾ ಮತ್ತು ತಾಲೂಕುಮಟ್ಟದ ಅಧಿಕಾರಿಗಳು ಸ್ವಯಂಪ್ರೇರಿತರಾಗಿ ಮುಂದೆಬಂದಿದ್ದಾರೆ. ಸಾರಿಗೆ, ವಸತಿ, ಊಟೋಪಚಾರ,ಸ್ವತ್ಛತೆ ಸೇರಿದಂತೆ ಎಲ್ಲ ಸವಲತ್ತುಗಳನ್ನು ಅಚ್ಚುಕಟ್ಟಾಗಿಮಾಡಲಾಗುವುದು ಎಂದರು.

ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷಸಿ.ಎಸ್‌. ಷಡಕ್ಷರಿ ಮಾತನಾಡಿ, ಮೂರು ದಿನಗಳಕಾಲ ನಡೆಯಲಿರುವ ರಾಜ್ಯ ಮಟ್ಟದ ಸರ್ಕಾರಿನೌಕರರ ಕ್ರೀಡಾಕೂಟದಲ್ಲಿ 5600 ಪುರುಷರು,2600 ಮಹಿಳೆಯರು ಸೇರಿದಂತೆ ಒಟ್ಟು8,200 ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದಾರೆ.53 ಸ್ಪರ್ಧೆಗಳನ್ನು ನಡೆಸಲಾಗುವುದು.ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು 18ಸಮಿತಿಗಳನ್ನು ರಚಿಸಲಾಗಿದೆ.

ಕಾರ್ಯಕ್ರಮದಲ್ಲಿಭಾಗವಹಿಸುವ ಎಲ್ಲ ಕ್ರೀಡಾಪಟುಗಳಿಗೂ ಕ್ಯಾಪ್‌,ಟ್ರಾÂಕ್‌ಸೂಟ್‌ ಸೇರಿದಂತೆ ವಸತಿ, ಊಟದ ವ್ಯವಸ್ಥೆಮಾಡಲಾಗುವುದು ಎಂದು ತಿಳಿಸಿದರು.ಕಾರ್ಯಕ್ರಮದ ಉದ್ಘಾಟನೆಯನ್ನುಮುಖ್ಯಮಂತ್ರಿ ಹಾಗೂ ವಿವಿಧ ಇಲಾಖೆಗಳಸಚಿವರು ನೆರವೇರಿಸುವರು. ಅ. 21ರಂದು ಸಂಜೆಉದ್ಘಾಟನಾ ಕಾರ್ಯಕ್ರಮವಿದೆ. ಅ. 23 ರಂದುಮಧ್ಯಾಹ್ನ 3 ಗಂಟೆಗೆ ವಿಜೇತ ತಂಡಗಳಿಗೆ ಹಾಗೂಕ್ರೀಡಾಪಟುಗಳಿಗೆ ಬಹುಮಾನ ವಿತರಿಸುವ ಮೂಲಕಕ್ರೀಡಾಕೂಟ ಮುಕ್ತಾಯಗೊಳ್ಳಲಿದೆ ಎಂದರು.

Advertisement

ರಾಜ್ಯ ಸರ್ಕಾರ ಈ ಕಾರ್ಯಕ್ರಮಕ್ಕಾಗಿ ಸುಮಾರುಎರಡು ಕೋಟಿ ರೂ. ಅನುದಾನ ನೀಡಲಿದ್ದುಯಾವುದೇ ಹಣ ಕಾಸಿನ ತೊಂದರೆಯಾಗುವುದಿಲ್ಲ.ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ.ಖ್ಯಾತ ಸಂಗೀತ ಕಲಾವಿದ ವಿಜಯಪ್ರಕಾಶ್‌ ಹಾಗೂಅವರ ತಂಡ ಜಿಲ್ಲಾ ಕ್ರೀಡಾಂಗಣದಲ್ಲಿ ಸಂಗೀತಕಾರ್ಯಕ್ರಮ ನೀಡಲಿದೆ ಎಂದರು.

ರಾಜ್ಯಾದ್ಯಂತ ಸುಮಾರು 10 ಸಾವಿರಕ್ಕೂಹೆಚ್ಚು ಜನರು ಜಿಲ್ಲೆಗೆ ಆಗಮಿಸಲಿದ್ದು, ಅವರುಉಳಿದುಕೊಳ್ಳಲು ಬೇಕಾಗುವ ವಸತಿ, ಸಾರಿಗೆ,ಊಟದ ವ್ಯವಸ್ಥೆಗಳನ್ನು ಮಾಡಿಕೊಡಬೇಕು ಎಂದುಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.

ಇದಕ್ಕೆಸ್ಪಂದಿಸಿದ ಜಿಲ್ಲಾಧಿಕಾರಿಗಳು, ಜಿಲ್ಲೆಯಲ್ಲಿರುವ ಹಾಸ್ಟೆಲ್‌, ಮದುವೆ ಮಂಟಪ, ಕೊಂಡಜ್ಜಿಯಲ್ಲಿರುವಪೊಲೀಸ್‌ ಪಬ್ಲಿಕ್‌ ಸ್ಕೂಲ್‌, ಸ್ಕೌಟ್‌ ಆ್ಯಂಡ್‌ಗೈಡ್‌ ಹಾಸ್ಟೆಲ್‌, ಕೋವಿಡ್‌ ಕೇರ್‌ ಸೆಂಟರ್‌ಗಳನ್ನು ಸಜ್ಜುಗೊಳಿಸಲು ಸಮಾಜ ಕಲ್ಯಾಣಇಲಾಖೆ ಉಪನಿರ್ದೇಶಕಿ ಕೌಸರ್‌ ರೇಷ್ಮಾ ಅವರಿಗೆ ಸೂಚಿಸಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಸ್‌.ಬಿ.ರಿಷ್ಯಂತ್‌, ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥಪಿ.ಮುದಜ್ಜಿ, ಎಎಸ್‌ಪಿ ಕನಿಖಾ ಶುಕ್ರವಾಲ್‌,ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್‌,ತಹಶೀಲ್ದಾರ್‌ ಗಿರೀಶ್‌, ದೂಡಾ ಆಯುಕ್ತಕುಮಾರಸ್ವಾಮಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ|ನಾಗರಾಜ್‌, ಜಿಲ್ಲಾ ಸರ್ಜನ್‌ ಜಯಪ್ರಕಾಶ್‌, ರಾಜ್ಯಸರ್ಕಾರಿ ನೌಕರರ ಸಂಘದ ಉಪಕಾರ್ಯದರ್ಶಿಆನಂದ್‌, ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next