Advertisement
ರಾಜ್ಯ ಸರಕಾರಿ ನೌಕರರ ಸಂಘ ಅರಮನೆ ಮೈದಾನದಲ್ಲಿ 7ನೇ ವೇತನ ಆಯೋಗ ಶಿಫಾರಸುಗಳನ್ನು ಜಾರಿಗೊಳಿಸಿದ ಹಿನ್ನೆಲೆಯಲ್ಲಿ ಶನಿವಾರ ಆಯೋಜಿಸಿದ್ದ “ನಮ್ಮಭಿಮಾನದ ಅಭಿನಂದನೆ’ ಸಮಾರಂಭದಲ್ಲಿ ಮಾತನಾಡಿ, ಒಪಿಎಸ್ ಜಾರಿಗೆ ಸಂಬಂಧಪಟ್ಟಂತೆ ಅಧ್ಯಯನ ನಡೆಸಲು ಈಗಾಗಲೇ ಸಮಿತಿ ರಚಿಸಲಾಗಿದೆ. ಅದಷ್ಟು ಬೇಗ ವರದಿ ನೀಡುವಂತೆ ಸೂಚಿಸಲಾಗಿದೆ. ಸರಕಾರಕ್ಕೆ ಸಮಿತಿ ವರದಿ ನೀಡಿದ ಬಳಿಕ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು. ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಕಾರ್ಯರೂಪಕ್ಕೆ ತರುವ ಬಗ್ಗೆ ಈಗಾಗಲೇ ಆದೇಶ ಹೊರಡಿಸಲಾಗಿದೆ ಎಂದರು.
ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹ್ಮದ್, ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ಮೊದಲಾದವರಿದ್ದರು.
Related Articles
ಭಾಷಣ ಮುಗಿಸಿ ವೇದಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಳಿತುಕೊಂಡಿದ್ದಾಗ ಯುವಕನೊಬ್ಬ ವೇದಿಕೆ ಮುಂಭಾಗದಿಂದ ಓಡಾಡಿ ಒಂದು ಶಾಲು ಹೊದೆಸಲು ಪ್ರಯತ್ನಿಸಿದನು. ಕೂಡಲೇ ಪೊಲೀಸರು, ಅಕ್ಕಪಕ್ಕದವರು ಆತನನ್ನು ತಡೆದರು. ಆತ ಸರಕಾರಿ ನೌಕರನಲ್ಲ ಎಂದು ತಿಳಿದು ಬಂದಿದೆ. ಹೆಚ್ಚಿನ ವಿಚಾರಣೆಗೆ ಸದಾಶಿವನಗರ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
Advertisement
ಪ್ರಾಥಮಿಕ ಶಿಕ್ಷಕರ ನೇಮಕಾತಿಯಲ್ಲಿ ಆಗಿರುವ ಅನ್ಯಾಯ ಸರಿಪಡಿಸಲು ನಮ್ಮ ಸರಕಾರ ಬದ್ಧವಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಸ್ಯೆ ಈಡೇರಿಸಲು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಶಿಕ್ಷಣ ಇಲಾಖೆಯಲ್ಲಿರುವ ಸಮಸ್ಯೆ ಪರಿಹರಿಸಲು ಮುಂದಾಗಿದ್ದೇವೆ. – ಮಧು ಬಂಗಾರಪ್ಪ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ
ಸರಕಾರಿ ನೌಕರರ ಸಂಘದ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸುವ ಕೆಲಸವನ್ನು ರಾಜ್ಯ ಸರಕಾರ ಮಾಡುತ್ತಿದೆ. ಅದಷ್ಟೂ ಬೇಗ ಹಳೆ ಪಿಂಚಣಿ ಯೋಜನೆ ಜಾರಿಗೆ ಬಂದರೆ ಲಕ್ಷಾಂತರ ನೌಕರರಿಗೆ ಅನುಕೂಲವಾಗಲಿದೆ. ಆರೋಗ್ಯ ಸಂಜೀವಿನಿ ಯೋಜನೆ ಕಾರ್ಯರೂಪಕ್ಕೆ ತರಲು ಸರಕಾರ ಸ್ಪಂದಿಸಿದೆ. – ಸಿ.ಎಸ್. ಷಡಾಕ್ಷರಿ, ಅಧ್ಯಕ್ಷ, ರಾಜ್ಯ ಸರಕಾರಿ ನೌಕರರ ಸಂಘ