Advertisement

26ರಂದು ಸರ್ಕಾರಿ ನೌಕರರ ದಿನಾಚರಣೆ: ಡಿಸಿ ಗುರುಕರ್‌

11:09 AM Apr 24, 2022 | Team Udayavani |

ಕಲಬುರಗಿ: ನಗರದಲ್ಲಿ ಏ. 26ರಂದು ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯ ಜಿಲ್ಲಾ ಮಟ್ಟದ ಕಾರ್ಯಕ್ರಮ ಆಚರಿಸಲು ಡಿ.ಸಿ. ಯಶವಂತ ವಿ. ಗುರುಕರ್‌ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಯಿತು.

Advertisement

ಡಿಸಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಏ.26ರಂದು ನಗರದ ಡಾ| ಎಸ್‌.ಎಂ.ಪಂಡಿತ್‌ ರಂಗಮಂದಿರದಲ್ಲಿ ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ಆಯೋಜನೆಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಅಂದು ನಡೆಯುವ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ ಉತ್ತಮವಾಗಿ ಸೇವೆ ಸಲ್ಲಿಸಿದ ಅಧಿಕಾರಿ-ನೌಕರರುಗಳನ್ನು ಸರ್ವೋತ್ತಮ ನಾಗರಿಕ ಸೇವಾ ಪ್ರಶಸ್ತಿ ನೀಡಿ ಗೌರವಿಸಲು ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಯಿತು. ಸಭೆಯಲ್ಲಿ ಜಿಲ್ಲಾ ಪಂಚಾಯತ್‌ ಸಿಇಒ ಡಾ| ದಿಲೀಷ ಸಾಸಿ, ಅಪರ ಡಿಸಿ ಭೀಮಾಶಂಕರ ತೆಗ್ಗೆಳ್ಳಿ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ರಾಜು ಲೇಂಗಟಿ, ಪ್ರಧಾನ ಕಾರ್ಯದರ್ಶಿ ಸಿದ್ಧಲಿಂಗಯ್ಯ ಮಠಪತಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next