Advertisement

ಸರಕಾರಿ ನೌಕರರು ರಾಜಕೀಯ ಚಟುವಟಿಕೆಗಳಲ್ಲಿ ಪಾಲ್ಗೊಂಡರೆ ಕ್ರಮ: ಇಲಾಖೆ

08:23 AM Aug 05, 2017 | Team Udayavani |

ಮಂಗಳೂರು/ಉಡುಪಿ: ಸರಕಾರಿ ನೌಕರರು ಮತ್ತು ಶಿಕ್ಷಕರು ಯಾವುದೇ ರಾಜಕೀಯ ಚಟುವಟಿಕೆಗಳಲ್ಲಿ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಭಾಗವಹಿಸುವಂತಿಲ್ಲ. ಅವರು ತಮ್ಮ ಕರ್ತವ್ಯ ನಿರ್ವಹಣೆ ಸಂದರ್ಭದಲ್ಲಿ ಪಕ್ಷಾತೀತವಾಗಿ ವರ್ತಿಸಿ ತಮ್ಮ ಜವಾಬ್ದಾರಿಗಳನ್ನು ನಿರ್ವಹಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

Advertisement

ಚುನಾವಣೆಗಳು ಸಮೀಪಿಸುತ್ತಿದ್ದಂತೆ ಸರಕಾರಿ ನೌಕರರು ಮತ್ತು ಶಿಕ್ಷಕರು ರಾಜಕೀಯ ಪಕ್ಷಗಳೊಂದಿಗೆ ಶಾಮಿಲಾಗಿ ರಾಜಕೀಯ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿರುವ ಬಗ್ಗೆ ದೂರುಗಳು ಮತ್ತು ಪತ್ರಗಳು ಇಲಾಖೆಗೆ ಬರುತ್ತಿರುವುದು ಗಮನಕ್ಕೆ ಬಂದಿದೆ ಎಂದು ಸುತ್ತೋಲೆ ವಿವರಿಸಿದೆ.

ಸರಕಾರಿ ಕಚೇರಿಗಳಲ್ಲಿ ಅಥವಾ ಸರಕಾರಿ ಶಾಲೆಗಳ ಆವರಣದಲ್ಲಿ ಯಾವುದೇ ರಾಜಕೀಯ ಪ್ರೇರಿತ ಮತ್ತು ರಾಜಕೀಯ ನಾಯಕರ ಭಾವಚಿತ್ರಗಳಿರುವ ಪುಸ್ತಕ, ಬ್ಯಾನರ್‌, ಗೋಡೆ ಬರಹ, ಭಿತ್ತಿಚಿತ್ರಗಳ ಪ್ರದರ್ಶನಕ್ಕೆ ಹಾಗೂ ಶಾಲಾ ವಿದ್ಯಾರ್ಥಿಗಳನ್ನು ಇಂತಹ ವಿಷಯಗಳಲ್ಲಿ ಬಳಸಿಕೊಳ್ಳುವುದಕ್ಕೆ ಅವಕಾಶ ನೀಡುವಂತಿಲ್ಲ. ಇಂತಹ ಅಶಿಸ್ತಿನ ನಡವಳಿಕೆಗಳು ಕಂಡು ಬಂದಲ್ಲಿ ಸಂಬಂಧಪಟ್ಟ ನೌಕರರ/ ಶಿಕ್ಷಕರ ಮೇಲೆ ಕರ್ನಾಟಕ ನಾಗರಿಕ ಸೇವಾ ನಿಯಮ ಪ್ರಕಾರ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ಸುತ್ತೋಲೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next