Advertisement
ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಜಿಲ್ಲಾಡಳಿತ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹಾವೇರಿ ಜಿಲ್ಲಾ ಶಾಖೆ ಸಹಯೋಗದಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ, ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.
Related Articles
Advertisement
ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಅಮೃತಗೌಡ ಪಾಟೀಲ ಮಾತನಾಡಿ, ಜಿಲ್ಲಾ ಸರ್ಕಾರಿ ನೌಕರರ ಭವನ ನಿರ್ಮಾಣಕ್ಕೆ ಐದು ಎಕರೆ ನಿವೇಶನ ಮಂಜೂರು ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿಕೊಂಡರು.
ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರದ ಮಾದರಿಯಲ್ಲಿ ಸಮಾನ ವೇತನಕ್ಕಾಗಿ ನೌಕರರ ಸಂಘದ ಕೋರಿಕೆಯಂತೆ ವೇತನಕ್ಕೆ ಆಯೋಗ ರಚನೆಗೆ ಘೋಷಣೆ ಮಾಡಿದೆ ಹಾಗೂ ಸರ್ವೋತ್ತಮ ಸೇವಾ ಪ್ರಶಸ್ತಿ ಮೊತ್ತವನ್ನು 25 ಸಾವಿರ ರೂ.ಗೆ ಹೆಚ್ಚಳ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹಾಗೂ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ಅವರಿಗೆ ಧನ್ಯವಾದಗಳನ್ನು ತಿಳಿಸಿದರು.
ರಾಜ್ಯ ಮಟ್ಟದ ಸರ್ವೋತ್ತಮ ಪ್ರಶಸ್ತಿ ಪ್ರದಾನ: 2020-21ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ಸವಣೂರು ಉಪವಿಭಾಗಾಧಿಕಾರಿ ಅನ್ನಪೂರ್ಣ ಮುದಕಮ್ಮನವರ, ಬ್ಯಾಡಗಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎನ್.ತಿಮ್ಮಾರಡ್ಡಿ, ದೇವಗಿರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ|ಮಂಜುನಾಥ ಜನಗೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಸೂಪರಿಂಟೆಂಡೆಂಟ್ ರಮೇಶ ಹರಿಜನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೂಪರಿಂಟೆಂಡೆಂಟ್ ಯಲ್ಲಪ್ಪ ಪೂಜಾರ, ರಾಣಿಬೆನ್ನೂರ ತಹಶೀಲ್ದಾರ್ ಕಚೇರಿ ಗ್ರಾಮಲೆಕ್ಕಾಧಿಕಾರಿ ಅಶೋಕ ಅರಳೇಶ್ವರ, ಹಾವೇರಿ ಸಹಾಯಕ ಪೊಲೀಸ್ ಅಧೀಕ್ಷಕರ ಕಚೇರಿ ಪ್ರಥಮ ದರ್ಜೆ ಸಹಾಯಕ ಅನ್ವರಸಾಬ ಬುಡ್ನೆಸಾಬನವರ, ಜಿಲ್ಲಾಧಿಕಾರಿ ಕಚೇರಿಯ ಡಿ ಗ್ರೂಪ್ ನೌಕರ ನಾಗರಾಜ ಸೋಮಕ್ಕಳವರ ಹಾಗೂ ಹಿರೇಕೆರೂರು ತಹಶೀಲ್ದಾರ್ ಕಚೇರಿ ಡಿ ಗ್ರೂಪ್ ನೌಕರ ಜಿ.ಆರ್.ಕಿಳ್ಳಿ ಅವರಿಗೆ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಪ್ರಶಸ್ತಿ ಪ್ರದಾನ ಮಾಡಿದರು.
2021-22ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ಹಾನಗಲ್ಲ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸುನೀಲ್‌ಕುಮಾರ ಬಿ., ಹಿರೇಕೆರೂರು ತಾಲೂಕು ಪಂಚಾಯಿತಿಯ ಜೆ.ಜಿ. ಪರಶುರಾಮ ಎಚ್ .ನಾಗರಾಳ, ಜಿಲ್ಲಾಧಿಕಾರಿಗಳ ಕಚೇರಿ ಶಿರಸ್ತೇದಾರ್ ಸಿ.ಎಸ್.ಜಾಧವ, ಹೂವಿನಶಿಗ್ಲಿ ಗ್ರಾಪಂ ಪಿಡಿಒ ರಮೇಶ ಹುಲಸೋಗಿ, ಆರೋಗ್ಯ ಇಲಾಖೆ ವಾಹನ ಚಾಲಕ ಪುಂಡಲಿಕ ಬುಲುಬಲೆ, ಹಿರೇಕೆರೂರು ತಹಶೀಲ್ದಾರ್ ಕಚೇರಿ ಗ್ರಾಮ ಲೆಕ್ಕಾಧಿಕಾರಿ ಸುಮಾ ಕೆಂಚಿಕೊಪ್ಪ, ಜಿಲ್ಲಾಧಿಕಾರಿ ಕಚೇರಿ ಡಿ ಗ್ರೂಪ್ ನೌಕರಾದ ಲಲಿತಾ ದುಗಲದ ಹಾಗೂ ಹಾವೇರಿ ತಹಶೀಲ್ದಾರ್ ಕಚೇರಿ ಡಿ ಗ್ರೂಪ್ ನೌಕರ ಜಾಫರಸಾಬ್ ಹುಬ್ಬಳ್ಳಿ ಅವರಿಗೆ ನಗದು ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.
ಇದೇ ಸಂದರ್ಭದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಅಬಕಾರಿ ಇಲಾಖೆ, ಕಂದಾಯ ಇಲಾಖೆ ಅಧಿಕಾರಿಗಳನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಪಂ ಸಿಇಒ ಮಹಮ್ಮದ ರೋಷನ್, ಅಪರ ಜಿಲ್ಲಾಧಿಕಾರಿ ಡಾ|ಎನ್.ತಿಪ್ಪೇಸ್ವಾಮಿ, ಸವಣೂರ ಉಪವಿಭಾಗಾಧಿಕಾರಿ ಅನ್ನಪೂರ್ಣ ಮುದಕಮ್ಮನವರ, ಅಬಕಾರಿ ಆಯುಕ್ತರಾದ ಶೈಲಜಾ, ಡಿಎಚ್‌ಒ ಡಾ|ಎಚ್.ಎಸ್.ರಾಘವೇಂದ್ರಸ್ವಾಮಿ, ಯುವಜನ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಗೀತಾ, ಬ್ಯಾಡಗಿ ತಹಶೀಲ್ದಾರ್ ರವಿ ಕೊರವರ, ಸಂಘದ ಪದಾಧಿಕಾರಿಗಳು ಇದ್ದರು.