Advertisement
ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು ರವೀಂದ್ರ ಕಲಾಕ್ಷೇತ್ರದಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಾಧಕರಿಗೆ “ಕರ್ನಾಟಕ ಕಲಾಶ್ರೀ’ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ಅಕಾಡೆಮಿ ಮತ್ತು ಪ್ರಾಧಿಕಾರಗಳಿಗೆ ಅನುದಾನ ನೀಡಲು ಯಾವುದೇ ಹಣಕಾಸಿನ ಕೊರತೆ ಇಲ್ಲ. ಪ್ರತಿಯೊಂದು ಅಕಾಡೆಮಿ ಮತ್ತು ಪ್ರಾಧಿಕಾರಗಳಿಗೂ ಚಟುವಟಿಕೆಗಳನ್ನು ನಡೆಸುವ ಸಲುವಾಗಿ 1 ಕೋಟಿ ರೂ. ವರೆಗೂ ಅನುದಾನ ಒದಗಿಸಲಾಗುತ್ತಿದೆ. ಕಾರ್ಯಕ್ರಮದ ಕುರಿತು ಪ್ರಸ್ತಾವನೆ ಸಲ್ಲಿಸಿದರೆ, ಅದಕ್ಕೆ ಬೇಕಾದ ಅಗತ್ಯದ ಅನುದಾನ ನೀಡಲಾಗುತ್ತಿದೆ ಎಂದರು.
ಕರ್ನಾಟಕದಲ್ಲಿ ವ್ಯಾಪಾರ, ವ್ಯವಹಾರ ಮಾಡುತ್ತಿದ್ದೀರಿ ಎಂದರೆ ಶೇ. 60 ಕನ್ನಡ ನಾಮಫಲಕ ಅಳವಡಿಸಬೇಕು ಎಂದು ಸ್ಪಷ್ಟವಾಗಿ ಕೋರ್ಟ್ ಹೇಳಿದೆ. ಶೇ. 60ರಷ್ಟು ಕನ್ನಡ ಬಳಕೆ ಮಾಡಬೇಕೆಂಬ ಪ್ರಶ್ನಿಸಿ ಕೆಲ ವಾಣಿಜ್ಯ ಸಂಸ್ಥೆಗಳು ಕೋರ್ಟ್ ಮೆಟ್ಟಿಲೇರಿದ್ದವು. ಆದರೆ ನ್ಯಾಯಾಲಯ ನೀವು ಕರ್ನಾಟಕದಲ್ಲಿದ್ದ ಮೇಲೆ ಸೂಚನಾ ಫಲಕಗಳನ್ನು ಕನ್ನಡದಲ್ಲಿ ಪ್ರದರ್ಶಿಸಬೇಕು ಎಂದು ಹೇಳಿರುವುದು ನಿಜಕ್ಕೂ ಶ್ಲಾಘನೀಯ ಎಂದು ಹೇಳಿದರು.
Related Articles
ಬಿಜೆಪಿ ಸರಕಾರದ ಅವಧಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯ ಅಕಾಡೆಮಿಗಳು ಮತ್ತು ಪ್ರಾಧಿಕಾರಗಳು ಸಂಪೂರ್ಣ ನಿಷ್ಕ್ರಿಯವಾಗಿದ್ದವು. ಆದರೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಅನಂತರ 14 ಅಕಾಡೆಮಿ ಮತ್ತು 4 ಪ್ರಾಧಿಕಾರಗಳಿಗೆ ಅಧ್ಯಕ್ಷರನ್ನು ನೇಮಿಸುವ ಮೂಲಕ ನಾಡಿನ ಸಾಂಸ್ಕೃತಿಕ ಚಟುವಟಿಕೆಗಳಿಗೆ ಹೆಚ್ಚಿನ ವೇಗ ನೀಡಲಾಗಿದೆ ಎಂದು ತಿಳಿಸಿದರು.
Advertisement