Advertisement

ಹಿಂದುಳಿದ ವರ್ಗಗಳಿಗೆ ಸರ್ಕಾರಿ ಸೌಲಭ್ಯ

04:08 PM Mar 26, 2021 | Team Udayavani |

ಚಿಕ್ಕಬಳ್ಳಾಪುರ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಜಾರಿಗೊಳಿಸುತ್ತಿರುವ ಯೋಜನೆಗಳನ್ನು ಅರ್ಹ ಫಲಾನುಭವಿಗೆ ತಲುಪಿಸುವಮೂಲಕ ಪಕ್ಷ ಸಂಘಟನೆಗೆ ಆದ್ಯತೆ ನೀಡಲಾಗುವುದು ಎಂದು ಚಿಕ್ಕಬಳ್ಳಾಪುರ ನಗರ ಬಿಜೆಪಿ ಒಬಿಸಿ ಮೋರ್ಚಾದ ಅಧ್ಯಕ್ಷ ಎನ್‌. ಬಾಲಕೃಷ್ಣ ತಿಳಿಸಿದರು.

Advertisement

ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್‌ ಅವರ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ಕೇಂದ್ರ ಮತ್ತು ರಾಜ್ಯಸರ್ಕಾರಗಳ ಸೌಲಭ್ಯಗಳನ್ನು ಹಿಂದುಳಿದ ವರ್ಗಗಳ ಜನರಿಗೆ ಒದಗಿಸಿ, ಬಿಜೆಪಿ ಪಕ್ಷದ ಒಬಿಸಿಸಮಾಜವನ್ನು ಸೆಳೆಯುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದರು.

ಚಿಕ್ಕಬಳ್ಳಾಪುರ ನಗರ ಒಬಿಸಿ ಮೋರ್ಚಾ ಅಧ್ಯಕ್ಷರಾಗಿ ಸೇವೆಸಲ್ಲಿಸಲು ಅವಕಾಶ ಮಾಡಿಕೊಟ್ಟಸಿಎಂ ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌, ಚಿಕ್ಕಬಳ್ಳಾಪುರ ಜಿಲ್ಲಾಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್‌, ಚಿಕ್ಕಬಳ್ಳಾಪುರ ಜಿಲ್ಲಾಒಬಿಸಿ ಮೋರ್ಚಾದ ಅಧ್ಯಕ್ಷ ಮಂಜುನಾಥ್‌ ಹಾಗೂ ಪಕ್ಷದಹಿರಿಯ ಮುಖಂಡರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಚಿಕ್ಕಬಳ್ಳಾಪುರನಗರಸಭೆ ವ್ಯಾಪ್ತಿಯಲ್ಲಿ ಪಕ್ಷವನ್ನು ಮತ್ತಷ್ಟು ಪ್ರಬಲವಾಗಿ ಬೆಳೆಸಲು ಬಿಜೆಪಿ ಒಬಿಸಿ ಮೋರ್ಚಾದ ನೂತನಪದಾಧಿಕಾರಿಗಳ ನೇಮಕಾತಿಯಲ್ಲಿ ನಿಷ್ಠಾವಂತ ಕಾರ್ಯಕರ್ತರಿಗೆ ಸೂಕ್ತ ಸ್ಥಾನಮಾನ ಕಲ್ಪಿಸಲಾಗುವುದು ಎಂದರು.

ನಾಗನಾಥೇಶ್ವರ ಸ್ವಾಮಿ ಬ್ರಹ್ಮರಥೋತ್ಸವ :

ಚಿಂತಾಮಣಿ: ನಗರದ ಎನ್‌.ಎನ್‌.ಟಿ ರಸ್ತೆಯಲ್ಲಿ ನೆಲೆಸಿರುವ ಇತಿಹಾಸ ಪ್ರಸಿದ್ಧ ಆರಾಧ್ಯ ದೈವ ಶ್ರೀನಾಗನಾಥೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಕೋವಿಡ್ ಹಿನ್ನಲೆಯಲ್ಲಿ ಸರಳವಾಗಿ ನಡೆಯಿತು.

Advertisement

ಕೋವಿಡ್ ಹಿನ್ನಲೆಯಲ್ಲಿ ಪ್ರತಿವರ್ಷ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ನಡೆಯುತ್ತಿತ್ತು. ನಗರದ ಆರಾಧ್ಯ ದೈವ ಹಾಗೂ ಇತಿಹಾಸ ಪ್ರಸಿದ್ಧ ನಾಗನಾಥೇಶ್ವರಸ್ವಾಮಿ ಬ್ರಹ್ಮರಥೋñವ ‌Õ ಸರಳವಾಗಿ ನಡೆಯಿತು.

ಶ್ರೀನಾಗನಾಥೇಶ್ವರ ಸ್ವಾಮಿಗೆ ವಿಶೇಷ ಹೂವಿನ ಅಲಂಕಾರ, ಅಭಿಷೇಕ, ಹೋಮ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಗಳು ನಡೆಯಿತು. ನಾಗನಾಥೇಶ್ವರ ಸ್ವಾಮಿಯನ್ನು ಅಲಂಕಾರಗೊಳಿಸಿ, ರಥೋತ್ಸವಕ ವಿಶೇಷ ಪೂಜೆ ಸಲ್ಲಿಸುವ ಮೂಲಕ ಬ್ರಹ್ಮ ಥೋತ್ಸವಕ್ಕೆ ಚಾಲನೆ ನೀಡಿದರು. ಬೆಂಗಳೂರು, ಚಿಂತಾಮಣಿ ನಗರ ಹಾಗೂ ತಾಲೂಕಿನ ವಿವಿಧ ಭಕ್ತರುದೇವಾಲಯದಲ್ಲಿ ದೇವರ ದರ್ಶನ ಪಡೆದು, ಬ್ರಹ್ಮರಥೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next