Advertisement
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಶಿವಮೊಗ್ಗದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗೆಲ್ಲ ಹಿಂದೂಗಳ ಮೇಲೆ ದಬ್ಬಾಳಿಕೆ ಹೆಚ್ಚುತ್ತದೆ. ಬಹುಸಂಖ್ಯಾಕರ ಹಬ್ಬ ಹರಿದಿನಗಳನ್ನೂ ನೆಮ್ಮದಿಯಾಗಿ ಆಚರಿಸುವಂತಿಲ್ಲ ಎಂದರು. ಗಣೇಶೋತ್ಸವದ ಮೆರವಣಿಗೆ ಮೇಲೆ ಕಲ್ಲು ತೂರಾಟ, ಪೆಟ್ರೋಲ್ ಬಾಂಬ್ ಎಸೆಯಲಾಗುತ್ತಿದೆ. ದೇಶದ್ರೋಹಿ ಶಕ್ತಿಗಳನ್ನು ಮಟ್ಟ ಹಾಕುವಲ್ಲಿ ಸರಕಾರ ವಿಫಲವಾಗಿದೆ ಎಂದರು.
ತುಮಕೂರು ವಿಶ್ವವಿದ್ಯಾನಿಲಯದ ಕುಲಸಚಿವರಿಗೆ ಅಲ್ಲಿನ ಪೊಲೀಸರು ವಿದ್ಯಾರ್ಥಿಗಳನ್ನು ಗಣಪತಿ ವಿಸರ್ಜನೆಗೆ ಕಳುಹಿಸಬೇಡಿ ಎಂದು ಪತ್ರ ಬರೆಯುತ್ತಾರೆ. ಈ ರೀತಿಯ ನಡವಳಿಕೆ ಹಿಂದೆ ಯಾವ ಸರಕಾರದ ಅವಧಿಯಲ್ಲಿಯೂ ಆಗಿಲ್ಲ. ಹಿಂದೂಗಳಿಗೆ ಹಬ್ಬಗಳ ಆಚರಣೆಯಲ್ಲಿ ಭಾಗವಹಿಸಬಾರದು ಎಂದು ಪತ್ರ ಬರೆದ ಪೊಲೀಸರ ಮೇಲೆ ಕ್ರಮ ಕೈಗೊಳ್ಳಬೇಕು. ಕುಲಸಚಿವರು ಹೊರಡಿಸಿರುವ ಸುತ್ತೋಲೆ ಯನ್ನು ಹಿಂಪಡೆಯಬೇಕೆಂದು ವಿಜಯೇಂದ್ರ ಆಗ್ರಹಿಸಿದರು.
Related Articles
– ಪ್ರಹ್ಲಾದ್ ಜೋಶಿ, ಕೇಂದ್ರ ಸಚಿವ’
Advertisement
ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಿದವರನ್ನು ಗುಂಡಿಕ್ಕಿ ಕೊಲ್ಲಿಹೊನ್ನಾಳಿ: ಹಿಂದೂ ಯುವಕರು ಗಣೇಶನ ಮೆರವಣಿಗೆ ಮಾಡಿಕೊಂಡು ಹೋಗುವಾಗ ಕಲ್ಲು ತೂರಿದ ದುಷ್ಕರ್ಮಿಗಳಿಗೆ ಗುಂಡು ಹೊಡೆಯಿರಿ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಆಗ್ರಹಿಸಿದರು. ಸುದ್ದಿಗಾರರ ಜತೆ ಮಾತನಾಡಿ, ವಿಧಾನ ಸೌಧದಲ್ಲೇ ಪಾಕಿಸ್ಥಾನ್ ಜಿಂದಾಬಾದ್ ಎಂದವರನ್ನು ಬಂಧಿ ಸದೆ ಗಣೇಶ ಉತ್ಸವ ಮಾಡುತ್ತಿರುವ ಹಿಂದೂ ಯುವಕರ ಮೇಲೆ ಪ್ರಕರಣಗಳನ್ನು ದಾಖಲಿಸುತ್ತಿರುವವರಿಗೆ ನಾಚಿಕೆಯಾಗಬೇಕು. ತತ್‌ಕ್ಷಣ ಅಮಾಯಕ ಹಿಂದೂ ಯುವಕರ ಮೇಲೆ ಹಾಕಿರುವ ಪ್ರಕರಣಗಳನ್ನು ಹಿಂಪಡೆದು ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಕಾಂಗ್ರೆಸ್ ಸರಕಾರದ ವಿರುದ್ಧ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.