Advertisement

Government Grant; ಕಂಬಳ ಅನುದಾನ: ನಿಯೋಗದಿಂದ ಸಿಎಂ ಭೇಟಿ

01:46 AM Jul 23, 2024 | Team Udayavani |

ಪಡುಬಿದ್ರಿ: ಅವಿಭಜಿತ ಜಿಲ್ಲೆಯಲ್ಲಿ ನಡೆಯುವ ಪ್ರತಿಯೊಂದು ಕಂಬಳಕ್ಕೂ ಸರಕಾರವು ಹಿಂದೆ ನೀಡುತ್ತಿದ್ದ ತಲಾ 5 ಲಕ್ಷ ರೂ. ಅನುದಾನವನ್ನು ಈ ವರ್ಷವೂ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ಡಾ| ದೇವಿಪ್ರಸಾದ್‌ಶೆಟ್ಟಿ ಬೆಳಪು ನೇತೃತ್ವದ ನಿಯೋಗವು ಜು. 22ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿಯನ್ನು ಸಲ್ಲಿಸಿತು. ನಿಯೋಗದಲ್ಲಿ ವಿಧಾನಪರಿಷತ್‌ ಸದಸ್ಯರಾದ ಮಂಜುನಾಥ ಭಂಡಾರಿ, ಐವನ್‌ ಡಿ’ ಸೋಜಾ, ಪುತ್ತೂರು ಶಾಸಕ ಅಶೋಕ್‌ ರೈ ಮುಂತಾದವರಿದ್ದರು.

Advertisement

ಪ್ರಸಕ್ತ ವರ್ಷದಲ್ಲಿ ಪಿಲಿಕುಳದಲ್ಲಿ ಸರಕಾರವೇ ದ. ಕ. ಜಿಲ್ಲಾಧಿಕಾರಿಯ ಅಧ್ಯಕ್ಷತೆಯಲ್ಲಿ ಕಂಬಳವನ್ನು ಆಯೋಜಿಸಿ, ಪ್ರವಾಸೋದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಾಲ್ಕು ದಿನಗಳ ಜಾನಪದ ಹಾಗೂ ಗ್ರಾಮೀಣ ಕ್ರೀಡೋತ್ಸವವನ್ನು ನಡೆಸುವಂತೆ ವಿಧಾನಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ ಸಲಹೆ ನೀಡಿದರು.

ಸಚಿವರಿಗೂ ಮನವಿ
ಇದೇ ವೇಳೆ ಸ್ಪೀಕರ್‌ ಯು. ಟಿ. ಖಾದರ್‌ ಅವರು ಪ್ರವಾಸೋದ್ಯಮ ಸಚಿವ ಎಚ್‌. ಕೆ. ಪಾಟೀಲ್‌ ಅವರನ್ನು ತನ್ನ ಕಚೇರಿಗೆ ಕರೆಸಿಕೊಂಡು ಶೀಘ್ರದಲ್ಲೇ ಕಂಬಳದ ಅನುದಾನ ಬಿಡುಗಡೆ ಮಾಡುವಂತೆ ಸೂಚಿಸಿದರು.

ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ಮುಚ್ಚಾರು ಕಲ್ಕುಡೆ ಲೋಕೇಶ್‌ ಶೆಟ್ಟಿ, ಮಾಜಿ ಅಧ್ಯಕ್ಷ ಪಿ. ಆರ್‌. ಶೆಟ್ಟಿ, ಕಂಬಳ ಸಮಿತಿಯ ಉಪಾಧ್ಯಕ್ಷರಾದ ನವೀನ್‌ಚಂದ್ರ ಆಳ್ವ, ಪ್ರಶಾಂತ್‌ ಕಾಜವ, ಮುನಿಯಾಲು ಉದಯ ಕುಮಾರ್‌ ಶೆಟ್ಟಿ ಮತ್ತಿತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next