Advertisement

ದೇವಸ್ಥಾನ ಅಭಿವೃದ್ಧಿಗೆ ವಿಶೇಷ ಒತ್ತು ನೀಡಿದ ಸರಕಾರ: ಸಚಿವೆ ಶಶಿಕಲಾ ಜೊಲ್ಲೆ

07:36 PM Jul 11, 2022 | Team Udayavani |

ಬೆಂಗಳೂರು: ರಾಜ್ಯದ ದೇವಸ್ಥಾನಗಳ ಅಭಿವೃದ್ಧಿಗೆ ಇಂದಿನ ಬಿಜೆಪಿ ಸರಕಾರವು ಅತಿ ಹೆಚ್ಚು ಅನುದಾನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಡುಗಡೆ ಮಾಡಿದ್ದಾರೆ ಎಂದು ಮುಜರಾಯಿ, ಹಜ್‌ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, 2022-23ನೇ ಸಾಲಿನ ಬಜೆಟ್‌ನಲ್ಲಿ ರಾಜ್ಯದ ವಿವಿಧ ದೇವಸ್ಥಾನ, ಮಠಗಳು ಹಾಗೂ ಹೊರ ರಾಜ್ಯದಲ್ಲಿರುವ ಕರ್ನಾಟಕದ ಛತ್ರಗಳ ಅಭಿವೃದ್ಧಿಗಾಗಿ ಒಟ್ಟು 421 ಕೋಟಿ ರೂ. ಅನುದಾನ ಒದಗಿಸಲಾಗಿದೆ ಎಂದು ಹೇಳಿದರು.

ವಿಧಾನಸಭಾ ಕ್ಷೇತ್ರವಾರು ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ ಇದುವರೆಗೆ ಒಟ್ಟು 272 ಕೋಟಿ ರೂ.ಗಳ ವಿಶೇಷ ಅನುದಾನ ಒದಗಿಸಿದ್ದು, ಅದರಲ್ಲಿ ಶೇ.50ರಷ್ಟು ಬಿಡುಗಡೆ ಮಾಡಲಾಗಿದೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ ಒಟ್ಟು ರೂ. 693 ಕೋಟಿ ರೂ.ಗಳಷ್ಟು ಅನುದಾನ ನೀಡಲಾಗಿದೆ ಎಂದು ತಿಳಿಸಿದರು.

ಕಳೆದೊಂದು ವರ್ಷದಲ್ಲಿ ಮುಜರಾಯಿ ಇಲಾಖೆ ವತಿಯಿಂದ ಹಲವಾರು ನೂತನ ಯೋಜನೆಗಳನ್ನು ಘೋಷಿಸಿ ಅನುಷ್ಠಾನಗೊಳಿಸಲಾಗುತ್ತಿದೆ. ದೈವ ಸಂಕಲ್ಪ, ಸಮಗ್ರ ದೇಗುಲ ನಿರ್ವಹಣೆ ವ್ಯವಸ್ಥೆ ಅಳವಡಿಕೆ, ಕಾಯಕಲ್ಪ, ಕಾಶಿ ಯಾತ್ರೆಗೆ ಸಹಾಯಧನ, ಕಾಶಿಗೆ ಭಾರತ್‌ ಗೌರವ್‌ ಯೋಜನೆ ಮೂಲಕ ರೈಲು, ಇಲಾಖೆಯ ನೌಕರರು ಹಾಗೂ ಅರ್ಚಕರಿಗೆ ವಿಮಾ ಸೌಲಭ್ಯ, ತಸ್ತೀಕ್‌ ಹಣ ಹೆಚ್ಚಳದಂಥ ಯೋಜನೆ ಜಾರಿಗೊಳಿಸಲಾಗಿದೆ ಎಂದು ವಿವರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next