Advertisement

ಎನ್.ಆರ್.ಸಿ.ಯನ್ನು ಕೈಬಿಡುವ ಪ್ರಶ್ನೆಯೇ ಇಲ್ಲ: ಸಚಿವ ಬೊಮ್ಮಾಯಿ ಸ್ಪಷ್ಟನೆ

07:26 AM Oct 23, 2019 | Hari Prasad |

ಬೆಂಗಳೂರು: ನಾಗರಿಕರ ರಾಷ್ಟ್ರೀಯ ನೋಂದಣಿ (NRC) ಪ್ರಕ್ರಿಯೆಯನ್ನು ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ರಾಜ್ಯದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡುತ್ತಾ ಸಚಿವ ಬೊಮ್ಮಾಯಿ ಅವರು ಈ ಮಾಹಿತಿಯನ್ನು ನೀಡಿದ್ದಾರೆ.

Advertisement

ಎನ್.ಆರ್.ಸಿ. ನೀತಿಯನ್ನು ಭಾರತ ಸರ್ಕಾರ ನಿರ್ಧಾರ ಮಾಡುತ್ತೆ. ನಾವೀಗ ಸಧ್ಯಕ್ಕೆ ರಾಜ್ಯದಲ್ಲಿ ಮಾಹಿತಿ ಸಂಗ್ರಹ ಕಾರ್ಯವನ್ನು ಮಾಡುತ್ತಿದ್ದೇವೆ ಬಳಿಕ ಈ ಮಾಹಿತಿಯನ್ನು ಕೇಂದ್ರದ ಗೃಹ ಸಚಿವಾಲಯಕ್ಕೆ ಕಳಿಸಲಿದ್ದೇವೆ ಅಲ್ಲಿ ಕೇಂದ್ರ ಗೃಹ ಸಚಿವರು ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ ಎಂದು ಸಚಿವ ಬೊಮ್ಮಾಯಿ ಅವರು ಮಾಹಿತಿ ನೀಡಿದರು.

ಡಿಟೆನ್ಷನ್ ಸೆಂಟರ್ ಬೇರೆಯದ್ದೇ ವಿಚಾರವಾಗಿದೆ. ವಿದೇಶಿ ಪ್ರಜೆಗಳಲ್ಲಿ ಯಾರ ಪಾಸ್ ಪೋರ್ಟ್ ಅವಧಿ ಮುಗಿದ ಬಳಿಕವೂ ಇಲ್ಲಿ ಇರುತ್ತಾರೋ, ಮತ್ತು ಸೂಕ್ತ ದಾಖಲಾತಿಗಳಿಲ್ಲದೆ ಉಳಿದುಕೊಳ್ಳುವವರನ್ನು ಗುರುತಿಸಿ ಅವರನ್ನು ಡಿಟೆನ್ಷನ್ ಕೇಂದ್ರಕ್ಕೆ ಕಳುಹಿಸಲಾಗುತ್ತದೆ. ಬಳಿಕ ಅವರನ್ನು ದೆಹಲಿ ರಾಯಭಾರ ಕಛೇರಿಗೆ ಕಳುಹಿಸಲಾಗುತ್ತದೆ ಮತ್ತು ಅಲ್ಲಿಂದ ಅವರನ್ನು ಅವರ ದೇಶಗಳಿಗೆ ಕಳುಹಿಸಿಕೊಡುವ ವ್ಯವಸ್ಥೆಯನ್ನು ಮಾಡಲಾಗುವುದು ಎಂಬ ಮಾಹಿತಿಯನ್ನು ಸಚಿವ ಬೊಮ್ಮಾಯಿ ಅವರು ನೀಡಿದರು.

ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಸ್ಪೋಟ ಪ್ರಕರಣ ತನಿಖೆ ಪ್ರಗತಿಯಲ್ಲಿ
ಈ ಘಟನೆಗೆ ಸಂಬಂಧಿಸಿದಂತೆ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಯುತ್ತಿದೆ. ಆಂದ್ರ ಪ್ರದೇಶ ಹಾಗೂ ಮಹಾರಾಷ್ಟ್ರ ಪೋಲಿಸ್ ಜೊತೆಗೆ ನಮ್ಮ ಪೊಲೀಸರು ಸಂಪರ್ಕದಲ್ಲಿದ್ದಾರೆ ಎಂಬ ಮಾಹಿತಿಯನ್ನು ಗೃಹ ಸಚಿವರು ನೀಡಿದರು. ಘಟನೆಗೆ ಸಂಬಂಧಿಸಿದಂತೆ ಇದುವರೆಗೆ ಯಾರನ್ನೂ ಬಂಧಿಸಿಲ್ಲ ಎಂದೂ ಸಚಿವ ಬೊಮ್ಮಾಯಿ ಅವರು ಹೇಳಿದರು. ಆದರೆ ತನಿಖೆ ಪೂರ್ಣಗೊಳ್ಳುವವರೆಗೆ ಯಾವ ಮಾಹಿತಿಯನ್ನೂ ಬಹಿರಂಗಪಡಿಸುವುದಿಲ್ಲ ಎಂದು ಗೃಹ ಸಚಿವರು ಇದೇ ಸಂದರ್ಭದಲ್ಲಿ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next