Advertisement
ರವಿವಾರ ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಡೆಂಗ್ಯೂ ಜ್ವರ ಬಂದು ಪ್ರತಿನಿತ್ಯ ಜನ ಸಾಯುತ್ತಿದ್ದಾರೆ. ತುಮಕೂರಿನಲ್ಲಿ ಕಾಲರಾದಿಂದ ಮೃತಪಟ್ಟಿದ್ದಾರೆ. ಹಲವಾರು ಕಾಯಿಲೆಗಳು ಜನರ ಪ್ರಾಣ ತೆಗೆದುಕೊಳ್ಳುತ್ತಿದೆ. ಬೆಲೆ ಏರಿಕೆ ಮಾಡಲು ಇವರ ಬಳಿ ಐಡಿಯಾಗಳಿವೆ. ರಕ್ತ ಪರೀಕ್ಷೆ ಮಾಡಲು 600-800 ರೂ. ಆಗುತ್ತದೆ. ಅದನ್ನು ಕೊಡುವ ಯೋಗ್ಯತೆ ಇಲ್ಲ ಎಂದು ಕಿಡಿಕಾರಿದರು.
ರಾಜ್ಯದಲ್ಲಿ ದಿನನಿತ್ಯ ಬೆಲೆ ಏರಿಕೆಯಿಂದ ಬಡವರು ಬದುಕುವಂತಹ ಸ್ಥಿತಿಯಲ್ಲೇ ಇಲ್ಲ. ಪೆಟ್ರೋಲ್, ಡೀಸೆಲ್ ದರ ಏರಿಕೆಯಿಂದ ತರಕಾರಿಯಿಂದ ಹಿಡಿದು ಪ್ರತಿಯೊಂದರ ದರ ಏರಿಕೆ ಆಗಿದೆ. ಹಾಲಿನ ದರವನ್ನೂ ಜಾಸ್ತಿ ಮಾಡಿದ್ದಾರೆ. ಸದ್ಯದಲ್ಲೇ ಅಬಕಾರಿ ದರ ಮತ್ತು ಬಸ್ ಪ್ರಯಾಣ ದರ ಹೆಚ್ಚಿಸುವುದಕ್ಕೂ ಯೋಜನೆ ಸಿದ್ಧ ಮಾಡಿಕೊಟ್ಟುಕೊಂಡಿದ್ದಾರೆ ಎಂದು ಅಶೋಕ್ ಹೇಳಿದರು.