ನವ ದೆಹಲಿ : ಕೋವಿಡ್ ಸೋಂಕಿನ ರೂಪಾಂತರಿ ಅಲೆ ದೇಶದಲ್ಲಿ ಹೆಚ್ಚಳವಾಗುತ್ತಿದ್ದರೂ, ದೇಶದಾದ್ಯಂತ ಮತ್ತೆ ಲಾಕ್ ಡೌನ್ ಮಾಡುವ ಯೋಜನೆ ಸರ್ಕಾರದ ಮುಂದಿಲ್ಲ ಎಂದು ಹಣಕಾಸು ಸವಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಲಾಕ್ ಡೌನ್ ಮಾಡುವ ಯಾವ ಯೋಜನೆಯೂ ನಮ್ಮ ಮುಂದಿಲ್ಲ, ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ಲಾಕ್ ಡೌನ್ ಹೊರತಾಗಿ ಕಂಟೈನ್ ಮೆಂಟ್ ಜೋನ್ ಅಥವಾ ವಲಯವನ್ನಾಗಿ ಪರಿವರ್ತಿಸಿ ಅಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಓದಿ : ಆಕಸ್ಮಾತ್ ನಾನು ಕೊರೊನಾದಿಂದ ಸತ್ತೋದ್ರೆ ನೀವೇ ಕಾರಣ : Guru Prasad
ಸೂಕ್ಷ್ಮ ಸಣ್ಣ ಹಾಗೂ ಮಧ್ಯಮ ಉದ್ದಿಮೆಗಳ ಸಂಸ್ಥೆಗಳ ಒಕ್ಕೂಟದ (FISME) ಅಧ್ಯಕ್ಷ ಅನಿಮೇಶ್ ಸಕ್ಸೇನಾ ಅವರೊಂದಿಗೆ ಮಾತನಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರಾಷ್ಟ್ರಾಧ್ಯಂತ ಮತ್ತೆ ಲಾಕ್ ಡೌನ್ ಹೇರುವ ಮಾತೇ ಇಲ್ಲ. ದೇಶದಾದ್ಯಂತ ಏರಿಕೆಯಾಗುತ್ತಿರುವ ಕೋವಿಡ್ ಸೋಂಕನ್ನು ನಿವಾರಿಸುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅವರು ಉದ್ಯಮ ಕ್ಷೇತ್ರಕ್ಕೆ ಭರವಸೆ ನೀಡಿದ್ದಾರೆ.
ಇನ್ನು, ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಈಗಾಗಲೇ ದೇಶದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಅಧಿಕಾರಿಗಳೊಂದಿಗೆ ಮಾತನಾಡಿದ್ದಾರೆ. ಆಯಾಯ ರಾಜ್ಯಗಳ ಕೋವಿಡ್ ಪರಿಸ್ಥಿತಿಯನ್ನು ಅವಲೋಕಿಸಿ ವೈದ್ಯಕೀಯ ಸೌಲಭ್ಯ ಹಾಗೂ ಇತರ ಸೌಕರ್ಯಗಳ ಬಗ್ಗೆ ಪರಿಶೀಲಿಸಿದ್ದಾರೆ ಎಂದು ನಿರ್ಮಲಾ ಸೀತಾರಾಮನ್ ಹೇಳಿರುವುದಾಗಿ ಅನಿಮೇಶ್ ಸಕ್ಸೇನಾ ತಿಳಿಸಿದ್ದಾರೆ.
ದೇಶದಾದ್ಯಂತ ಸಾರಿಗೆ ವ್ಯವಸ್ಥೆಯನ್ನು ಕೂಡು ಸ್ಥಗಿತಗೊಳಿಸುವುದಿಲ್ಲವೆಂದು ಸೀತಾರಾಮನ್ ಹೇಳಿರುವುದಾಗಿ ಉನ್ನತ ಸುದ್ದಿ ಮೂಲಗಳು ತಿಳಿಸಿವೆ.
ಓದಿ : ಕೋವಿಡ್ ಆತಂಕ : ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 1000 ಅಂಕ ಕುಸಿತ, ಹೂಡಿಕೆದಾರರಿಗೆ ನಷ್ಟ