Advertisement

ಸರ್ಕಾರದಿಂದ ಕಾರ್ಮಿಕರ ಕಷ್ಟಕ್ಕೆ ನೆರವು

04:25 PM Jun 25, 2021 | Team Udayavani |

ಮುಧೋಳ: ಕೊರೊನಾ ಕಾಲದಲ್ಲಿ ಸಂಕಷ್ಟಕ್ಕೀಡಾಗಿರುವ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ನೆರವಾಗುವ ದೃಷ್ಟಿಯಿಂದ ಸರ್ಕಾರದ ವತಿಯಿಂದ ಆಹಾರಧಾನ್ಯಗಳ ಕಿಟ್‌ ವಿತರಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

Advertisement

ನಗರದ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಆಹಾರಧಾನ್ಯ ಕಿಟ್‌, ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್‌ ವಿತರಣೆ ಕಾರ್ಯಕ್ಕೆ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಲೂಕಿನಲ್ಲಿ ಒಟ್ಟು 7020 ನೋಂದಾಯಿತ ಕಟ್ಟಡ ಕಾರ್ಮಿಕರಿದ್ದು, ಅವರ ಪೈಕಿ ಮೊದಲ ಹಂತದ ಪ್ರಕ್ರಿಯಲ್ಲಿ 2500 ಕಾರ್ಮಿಕರಿಗೆ ಕಿಟ್‌ ವಿತರಿಸಲಾಗುತ್ತಿದೆ ಎಂದು ತಿಳಿಸಿದರು. ಕಿಟ್‌ನಲ್ಲಿ 5ಕೆ.ಜಿ. ಅಕ್ಕಿ, 1 ಕೆ.ಜಿ. ತೊಗರಿಬೇಳೆ, 1 ಲೀ. ಸೂರ್ಯಕಾಂತಿ ಎಣ್ಣೆ, 1 ಕೆ.ಜಿ. ರವಾ ಸೇರಿದಂತೆ ಇನ್ನು ಹಲವು ಅಗತ್ಯ ವಸ್ತುಗಳನ್ನು ಸೇರಿಸಲಾಗಿದೆ ಎಂದು ಹೇಳಿದರು.

ವಿದ್ಯಾರ್ಥಿಗಳಿಗೆ ಲಾಕ್‌ಡೌನ್‌ನಿಂದ ಹಾಗೂ ಮುಂದಿನ ದಿನಗಳಲ್ಲಿ ತೊಂದರೆಯಾಗದಿರಲಿ ಎನ್ನುವ ಉದ್ದೇಶದಿಂದ ಟ್ಯಾಬ್‌ ವಿತರಿಸಲಾಗುತ್ತಿದ್ದು, ವಿದ್ಯಾರ್ಥಿಗಳು ಅಧ್ಯಯನದ ಕಡೆಗೆ ಹೆಚ್ಚು ಗಮನ ನೀಡಬೇಕು ಎಂದು ಸಲಹೆ ನೀಡಿದರು. ಬಿಜೆಪಿ ಮುಖಂಡರಾದ ಕೆ.ಆರ್‌. ಮಾಚಪ್ಪನವರ, ಹನಮಂತ ತುಳಸಿಗೇರಿ, ನಾಗಪ್ಪ ಅಂಬಿ, ತಹಶೀಲ್ದಾರ್‌ ಸಂಗಮೇಶ ಬಾಡಗಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿ ಕಾರಿ ಕಿರಣ ಘೋರ್ಪಡೆ, ಲೋಕೋಪಯೋಗಿ ಇಲಾಖೆ ಎಇಇ ಸೋಮಶೇಖರ ಸಾವನ್‌, ಸಮಾಜಕಲ್ಯಾಣ ಇಲಾಖೆ ಅಧಿ ಕಾರಿ ಮೋಹನ ಕೋರಡ್ಡಿ, ತೋಟಗಾರಿಕೆ ಇಲಾಖೆ ಅಧಿಕಾರಿ ಮಹೇಶ ದಂಡನ್ನವರ, ಪಂಚಾಯತ್‌ ರಾಜ್‌ ಇಲಾಖೆ ಅಧಿ ಕಾರಿ ಎಲ್‌.ಎಸ್‌. ಜೋಗಿನ ಸೇರಿದಂತೆ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next