Advertisement
ಯುಪಿಎಸ್ ಕೆಟ್ಟು ತಿಂಗಳು ಕಳೆದರೂ ದುರಸ್ತಿಯಾಗಿಲ್ಲ. ಆದಿವಾಸಿ ತುಂಬು ಗರ್ಭಿಣಿಯೊಬ್ಬರು ತುರ್ತು ಚಿಕಿತ್ಸೆಗೆ ಹೋದಾಗ ಆಸ್ಪತ್ರೆ ಸಿಬ್ಬಂದಿ ಆಕೆಯನ್ನು ವಾಪಸ್ ಕಳುಹಿಸಿದ್ದಾರೆ. ವಾರದ ಹಿಂದಷ್ಟೇ ಹೆರಿಗೆ ನೋವಿನಿಂದ ಬಳಲುತ್ತಿದ್ದ ಆದಿವಾಸಿ ಮಹಿಳೆ ತನ್ನ ಪೋಷಕರೊಂದಿಗೆ ರಾತ್ರಿ ವೇಳೆ ಆಸ್ಪತ್ರೆಗೆ ಆಗಮಿಸಿದ್ದಾರೆ.
Related Articles
Advertisement
ಇಂತಹ ಪರಿಸ್ಥಿತಿಯಲ್ಲಿ ರೋಗಿಗಳು ತುರ್ತು ಚಿಕಿತ್ಸೆಗೆ ಆಸ್ಪತ್ರೆಗೆ ಬಂದರೆ ಅವರನ್ನು ದೇವರೇ ಕಾಪಾಡಬೇಕಿದೆ. ಎಚ್.ಡಿ.ಕೋಟೆ ತಾಲೂಕಿನ ಇತರೆ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹೋಲಿಕೆ ಮಾಡಿದಾಗ ಅಣ್ಣೂರು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ 34,800 ಜನಸಂಖ್ಯೆ ಇದೆ..
ಅದರಲ್ಲೂ ಹಾಡಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇವೆ. ಪ್ರತಿ 10 ಸಾವಿರ ಜನಸಂಖ್ಯೆಗೆ ಅನುಗುಣವಾಗಿ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರ ಇರಬೇಕು ಎಂಬ ನಿಯಮ ಇದೆ. ಆದರೆ, ಅಣ್ಣೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 35 ಸಾವಿರ ಜನಸಂಖ್ಯೆ ಹೊಂದಿದ್ದರೂ ಸಮರ್ಪಕ ವ್ಯವಸ್ಥೆಯೇ ಇಲ್ಲವಾಗಿದೆ. ಈ ಭಾಗದಲ್ಲಿ ಜನರಲ್ಲಿ ರಾತ್ರಿ ಆರೋಗ್ಯ ವ್ಯತ್ಯಯವಾದರೆ ಈ ಆಸ್ಪತ್ರೆಯಲ್ಲಿ ಚಿಕಿತ್ಸೆಯೇ ಸಿಗುವುದಿಲ್ಲ. ಹೀಗಾಗಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ತುರ್ತು ಕ್ರಮ ಕೈಗೊಂಡು ಆಸ್ಪತ್ರೆಗೆ ಯುಪಿಎಸ್ ದುರಸ್ತಿ ಮಾಡಿಸಿ, ಸಕಾಲದಲ್ಲಿ ಸಮರ್ಪಕ ಚಿಕಿತ್ಸೆ ಸಿಗುವಂತೆ ಮಾಡಬೇಕಿದೆ.
“ತಾಲೂಕಿನ ಅಣ್ಣೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಹೆಚ್ಚಿನ ಸಂಖ್ಯೆಯಲ್ಲಿ ಹಾಡಿಗಳು ಸೇರಿವೆ. ಪ್ರಾಥಮಿಕ ಆರೋಗ್ಯ ಕೇಂದ್ರದ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದುಕೊಂಡು ತಕ್ಷಣದಲ್ಲೇ ವಿದ್ಯುತ್ ಸಮಸ್ಯೆ ಸರಿಪಡಿಸಲಾಗುವುದು.” – ಡಾ| ರವಿಕುಮಾರ್ ತಾಲೂಕು ಆರೋಗ್ಯಾಧಿಕಾರಿ
– ಎಚ್.ಬಿ.ಬಸವರಾಜು