Advertisement
ಪುತ್ತೂರು ಸರಕಾರಿ ಆಸ್ಪತ್ರೆಯ ಆವರಣದಲ್ಲಿ ಕ್ಯಾಂಪ್ಕೋ ಮತ್ತು ಎಸ್‌ಡಿಆರ್‌ಎಫ್ ನಿಧಿಯಿಂದ 1.84 ಕೋ. ರೂ. ವೆಚ್ಚದಲ್ಲಿ ನಿರ್ಮಿಸಲಾದ ಆಮ್ಲಜನಕ ಘಟಕದ ಲೋಕಾರ್ಪಣೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅವರು ವೀಡಿಯೋ ಸಂದೇಶ ನೀಡಿದರು. ಮುಂದಿನ ಮೂರು ವರ್ಷಗಳಲ್ಲಿ ಎಲ್ಲ 2,500 ಪಿಎಚ್‌ಸಿಗಳನ್ನು ಮೇಲ್ದರ್ಜೆಗೆ ಏರಿಸಲು ಚಿಂತನೆ ನಡೆಸಲಾಗಿದೆ ಎಂದರು.
ದ.ಕ. ಜಿಲ್ಲೆಯ ಪುತ್ತೂರಿಗೆ ಸರಕಾರಿ ಮೆಡಿಕಲ್ ಕಾಲೇಜು ಮಂಜೂರು ಮಾಡುವಂತೆ ಮನವಿ ಮಾಡಿದ ದ. ಕ. ಸಂಸದ ನಳಿನ್ ಕುಮಾರ್ ಕಟೀಲು ಅವರು ಸರಕಾರಿ ಆಸ್ಪತ್ರೆಗಳಲ್ಲಿ ಖಾಲಿ ಇರುವ ಹುದ್ದೆ ಭರ್ತಿಗೂ ಆದ್ಯತೆ ನೀಡಬೇಕು ಎಂದರು.
Related Articles
ಯಲ್ಲಿ 300 ಬೆಡ್‌ಗೆ ಏರಿಸುವ 189 ಕೋ.ರೂ ಯೋಜನೆಯ ಪ್ರಸ್ತಾವನೆಗೆ ಶೀಘ್ರ ಅನುಮೋದನೆ ನೀಡಬೇಕು ಎಂದರು.
Advertisement
ಇದನ್ನೂ ಓದಿ:ಅಂತಾರಾಷ್ಟ್ರೀಯ ಹಾಕಿ ಪ್ರಶಸ್ತಿ ಬಾಚಿಕೊಂಡ ಭಾರತೀಯರು
ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ಕ್ಯಾಂಪ್ಕೋ ಆಡಳಿತ ನಿರ್ದೇಶಕ ಕೃಷ್ಣ ಕುಮಾರ್, ನಗರಸಭೆ ಅಧ್ಯಕ್ಷ ಕೆ. ಜೀವಂಧರ್ ಜೈನ್, ಪುಡಾ ಅಧ್ಯಕ್ಷಭಾಮಿ ಅಶೋಕ್ ಶೆಣೈ, ಜಿಲ್ಲಾಆರೋಗ್ಯಾಧಿಕಾರಿ ಡಾ| ಕಿಶೋರ್‌ಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ| ದೀಪಕ್ ರೈ, ತಹಶೀಲ್ದಾರ್ ರಮೇಶ್, ಇಒ ನವೀನ್ ಭಂಡಾರಿ ಉಪಸ್ಥಿತರಿದ್ದರು. ಆಡಳಿತ ವೈದ್ಯಾಧಿಕಾರಿ ಡಾ| ಆಶಾ ಜ್ಯೋತಿ ಸ್ವಾಗತಿಸಿ,ವೈದ್ಯ ಡಾ| ಜಯದೀಪ್ ವಂದಿಸಿದರು. ಜಯರಾಮ ಸುವರ್ಣ ನಿರೂಪಿಸಿದರು. 250 ಆಮ್ಲಜನಕ ಘಟಕ
ಸರಕಾರವು ರಾಜ್ಯಾದ್ಯಂತ 250 ಆಮ್ಲಜನಕ ಘಟಕ ನಿರ್ಮಾಣಕ್ಕೆ ಯೋಜನೆರೂಪಿಸಿದೆ. 130 ಘಟಕ ಖಾಸಗಿಯಾಗಿ ಉಳಿದವು ಸರಕಾರಿ ಮತ್ತು ಸಾರ್ವಜನಿಕ ದೇಣಿಗೆಯ ಮೂಲಕ ನಿರ್ಮಾಣಗೊಳ್ಳಲಿವೆ. ಈಗಾಗಲೇ 110 ಘಟಕ ನಿರ್ಮಾಣ ಪ್ರಗತಿ ಯಲ್ಲಿದ್ದು 25 ಘಟಕ ಕಾರ್ಯಾ ರಂಭಕ್ಕೆ ಸಿದ್ಧಗೊಂಡಿವೆ. ಈ ತಿಂಗಳಿನಲ್ಲಿ ಎಲ್ಲ ಘಟಕಗಳ ನಿರ್ಮಾಣ ಪೂರ್ಣಗೊಳಿಸಲು ಸೂಚನೆ ನೀಡ ಲಾಗಿದೆ. ಇದರಿಂದ 250 ಮೆಟ್ರಿಕ್ ಟನ್ ಆಮ್ಲಜನಕ ಹೆಚ್ಚುವರಿ ಯಾಗಿ ದೊರೆಯಲಿದೆ. ಭವಿಷ್ಯದ ಹಿತದೃಷ್ಟಿಯಿಂದ ಎಲ್ಲ ಆಸ್ಪತ್ರೆಗಳಲ್ಲಿ ಆಮ್ಲಜನಕ ಘಟಕ ಸ್ಥಾಪನೆಗೆ ಆದೇಶ ನೀಡಲಾಗಿದೆ ಎಂದು ಆರೋಗ್ಯ ಸಚಿವರು ಹೇಳಿದರು.