Advertisement

ಸರ್ಕಾರಿ ಆಸ್ಪತ್ರೆ ಸೀಲ್‌ಡೌನ್‌

05:36 AM Jul 10, 2020 | Lakshmi GovindaRaj |

ಯಳಂದೂರು: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಗಂಟಲು ದ್ರವ ಪರೀಕ್ಷೆ ಮಾಡುತ್ತಿದ್ದ ಆಸ್ಪತ್ರೆ ಸಿಬ್ಬಂದಿಗೆ ಸೋಂಕು ಖಚಿತವಾದ ಹಿನ್ನೆಲೆಯಲ್ಲಿ ಆಸ್ಪತ್ರೆಯನ್ನು ಗುರುವಾರ ಸೀಲ್‌ಡೌನ್‌ ಮಾಡಲಾಗಿದೆ. ಇಲ್ಲಿನ ಲ್ಯಾಬ್‌ನಲ್ಲಿ  ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಅನಾರೋಗ್ಯ ಕಾಡಿತ್ತು. ಈ ಹಿನ್ನೆಲೆಯಲ್ಲಿ ರಜೆಯಲ್ಲಿದ್ದರು. ಇವರಿಗೆ ಕೋವಿಡ್‌ 19 ದೃಢವಾಗಿದೆ.

Advertisement

ಈ ವಿಷಯ ತಿಳಿಯುತ್ತಿದ್ದಂತೆಯೇ ಇಲ್ಲಿನ ಲ್ಯಾಬ್‌ ಸೇರಿದಂತೆ ಆಸ್ಪತ್ರೆ, ಆರೋಗ್ಯ ಇಲಾಖೆ ಕಚೇರಿ, ವೈದ್ಯರ  ವಸತಿ ಗೃಹಗಳಿಗೆ ಔಷಧಿ ಸಿಂಪಡಿಸಲಾಗಿದೆ. ಅಲ್ಲದೇ, ಆಸ್ಪತ್ರೆ ವೈದ್ಯರು, ನರ್ಸ್‌ಗಳು, ಸಿಬ್ಬಂದಿ ಸ್ವಯಂ ಪ್ರೇರಿತರಾಗಿ ತಮ್ಮ ಗಂಟಲು ದ್ರವವನ್ನು ಪರೀಕ್ಷೆಗೆ ನೀಡಿದ್ದಾರೆ. ಆಸ್ಪತ್ರೆಗೆ ಬರುತ್ತಿದ್ದ ರೋಗಿಗಳು ಮತ್ತು ಸಾರ್ವಜನಿಕರಿಗೆ  ಆತಂಕ ಉಂಟಾಗಿದೆ.

ಮತ್ತೆ ಕೋವಿಡ್‌ 19 ದೃಢ: ಜು.3ರಂದು ಪಟ್ಟಣದ ಆಶ್ರಯ ಬಡಾವಣೆ ನಿವಾಸಿಗೆ ಮೊದಲ ಸೋಂಕು ಕಾಣಿಸಿಕೊಂಡಿತ್ತು. ಈಗ ಶಿಕ್ಷಕಿಯಾಗಿರುವ ಇವರ ಮಡದಿ ಹಾಗೂ ಒಬ್ಬ ಹೆಣ್ಣು ಮಗುವಿಗೂ ಕೋವಿಡ್‌ 19 ದೃಢಪಟ್ಟಿದೆ. ಅಲ್ಲದೆ,  ತಾಲೂಕಿನ ಯರಗಂಬಳ್ಳಿ ಗ್ರಾಮದ ಯುವಕನಿಗೂ ಕೋವಿಡ್‌ 19 ದೃಢಪಟ್ಟಿದ್ದು, ಈತ ಬೆಂಗಳೂರಿನಿಂದ ತನ್ನ ಸ್ವಗ್ರಾಮಕ್ಕೆ ಬಂದಿದ್ದ ಎನ್ನಲಾಗಿದೆ.

ಒಟ್ಟು ತಾಲೂಕಿನಲ್ಲಿ ಗುರುವಾರ ಒಂದೇ ದಿನ 4 ಪ್ರಕರಣಗಳು ಪಾಸಿಟಿವ್‌ ಬಂದಿದೆ.  ಇದರಿಂದ ಸಾರ್ವಜನಿಕರು ಆತಂಕದಲ್ಲಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಯರಗಂಬಳ್ಳಿ ಗ್ರಾಮದ ಲಿಂಗಾಯಿತರ ಬೀದಿಯನ್ನು ಕಂಟೈನ್ಮೆಂಟ್‌ ಝೋನ್‌ಗಳಾಗಿ ಪರಿವರ್ತಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next