Advertisement
ಆಸ್ಪತ್ರೆಗೆ ಧಾವಿಸಿದ ವೇದಿಕೆಯ ಅಧ್ಯಕ್ಷ ರವಿ ಶೆಟ್ಟಿ ನೇತೃತ್ವದ ವೇದಿಕೆಯ ಸದಸ್ಯರು ಭೇಟಿ ನೀಡಿ ಅಲ್ಲಿ ರೋಗಿಗಳಿಗೆ ನೀಡುತ್ತಿರುವ ಔಷಧೋಪಚಾರಗಳ ಬಗ್ಗೆ ಮಾಹಿತಿ ಪಡೆದು ಕೆಲವು ರೋಗಿಗಳಿಂದ ಬಂದ ದೂರಿನ ವಿಚಾರವನ್ನು ತೆಗೆದುಕೊಂಡು ವೈದ್ಯರನ್ನು ತರಾಟೆಗೆ ತೆಗೆದುಕೊಂಡರು.
Related Articles
Advertisement
ಪೊಲೀಸರೊಂದಿಗೆ ಮಾತಿನ ಚಕಮಕಿ: ತತ್‌ಕ್ಷಣ ಆಸ್ಪತ್ರೆಗೆ ಆಗಮಿಸಿದ ವೃತ್ತ ನಿರೀಕ್ಷಕ ಮಂಜಪ್ಪ ಹಾಗೂ ಠಾಣಾಧಿಕಾರಿ ನಾಸಿರ್ ಹುಸೇನ್ ಅವರೊಂದಿಗೆ ಮಾತಿನ ಚಕಮಕಿ ನಡೆಸಿದ ವೇದಿಕೆಯ ಸದಸ್ಯರು ಇಲ್ಲಿನ ಆಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ ತಿಳಿಸಿದರು.ಇದೇ ಸಮಯದಲ್ಲಿ ಸ್ಪಂದನೆ ನೀಡಿ ಮಾಹಿತಿ ನೀಡಬೇಕಾದ ವೈದ್ಯರೊಬ್ಬರು ನಿರ್ಲಕ್ಷ ತೋರಿ ಅಸಭ್ಯವಾಗಿ ವರ್ತಿಸಿದ್ದಾರೆ ಅವರು ತತ್‌ಕ್ಷಣ ಕ್ಷಮೆ ಕೇಳಬೇಕು ಎಂದು ಧರಣಿ ಕೂರಿದ ವೇದಿಕೆಯ ಸದಸ್ಯರು ವೈದ್ಯರ ವಿರುದ್ಧ ಘೋಷಣೆಯನ್ನು ಕೂಗಿದರು. ಪರಿಸ್ಥಿತಿ ವಿಕೋಪಕ್ಕೆ ತೆರಳುತ್ತಿರುವ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳು ಪ್ರತಿಭಟನಕಾರರಿಗೆ ಎಚ್ಚರಿಕೆಯನ್ನು ನೀಡಿದರಲ್ಲದೇ ಎಲ್ಲರನ್ನು ಚದುರಿಸಿ ಪರಿಸ್ಥಿತಿಯನ್ನು ಶಾಂತಗೊಳಿಸಿದರು. ಅವ್ಯವಸ್ಥೆ ಸರಿಯಾಗಲಿ
ಕೊನೆಯಲ್ಲಿ ಮಾತನಾಡಿದ ಕರ್ನಾಟಕ ಕಾರ್ಮಿಕ ವೇದಿಕೆ ಅಧ್ಯಕ್ಷ ರವಿ ಶೆಟ್ಟಿ ಅವರು ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿರುವ ಅವ್ಯವಸ್ಥೆಗಳು ಸರಿ ಯಾಗಬೇಕು. ಆಸ್ಪತ್ರೆಯಲ್ಲಿ ಲಭ್ಯರಿರುವ ವೈದ್ಯರು, ಇಲ್ಲಿರುವ ಸೌಲಭ್ಯಗಳು, ಸ್ಲಾÂನಿಂಗ್ ಹಾಗೂ ಇತರ ವ್ಯವಸ್ಥೆಗಳ ಬಗ್ಗೆ ರೋಗಿಗಳಿಗೆ ಸ್ಪಷ್ಟ ಮಾಹಿತಿ ನೀಡಬೇಕು. ಇಲ್ಲಿನ ಕುಡಿಯುವ ನೀರು, ಸ್ವತ್ಛತೆಯ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು. ಈ ಎಲ್ಲ ವ್ಯವಸ್ಥೆಗಳು ಒಂದು ವಾರದಲ್ಲಿ ಆಗದೇ ಹೋದಲ್ಲಿ ಕರ್ನಾಟಕ ಕಾರ್ಮಿಕ ವೇದಿಕೆಯೊಂದಿಗೆ ಜಿಲ್ಲೆಯ ಇತರ ಸಂಘಟನೆಯೊಂದಿಗೆ ಕೂಡಿಕೊಂಡು ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.