Advertisement
ಚಳ್ಳಕೆರೆ ತಾಲೂಕು ಪರಶುರಾಂಪುರ ಹೋಬಳಿಯ ಗ್ರಾಮಗಳ 52 ಮಹಿಳೆಯರಿಗೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸಂತಾನಹರಣ ಚಿಕಿತ್ಸೆ ಮಾಡಲಾಯಿತು. ದಿನವೊಂದಕ್ಕೆ ಗರಿಷ್ಠ 30 ಸಂತಾನಹರಣ ಚಿಕಿತ್ಸೆ ಮಾಡಲು ಅವಕಾಶವಿದೆ. ಆದರೆ ನಿಯಮ ಮೀರಿ ಶಸ್ತ್ರಚಿಕಿತ್ಸೆಮಾಡಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ತಿಂಗಳಲ್ಲಿ ಒಂದು ದಿನ ಸಂತಾನಹರಣ ಚಿಕಿತ್ಸೆ ಮಾಡಲಾಗುತ್ತಿದೆ. ಅದರಂತೆ ಮಂಗಳವಾರ ಪಗಡಲಬಂಡೆ, ಕೊರ್ಲಕುಂಟೆ, ಸಿದ್ದೇಶ್ವರನದುರ್ಗ, ಕ್ಯಾದಿಗುಂಟೆ ಮತ್ತು ಪಕ್ಕದ ಆಂಧ್ರಪ್ರದೇಶದ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹಾಸಿಗೆ, ಮೂಲ ಸೌಲಭ್ಯ ಇದೆಯೋ ಇಲ್ಲವೋ ಎಂಬುದನ್ನೂ ಗಮನಿಸದೆ ವೈದ್ಯರು ಆಗಮಿಸಿದ್ದ ಎಲ್ಲ 52 ಮಹಿಳೆಯರಿಗೂ ಶಸ್ತ್ರಚಿಕಿತ್ಸೆ ಮಾಡಿ ಕೈತೊಳೆದುಕೊಂಡಿದ್ದಾರೆ. ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮಹಿಳೆಯರನ್ನು ಆರೋಗ್ಯ ಕೇಂದ್ರದ ನೆಲದ
ಮಲಗಿಸಿದ್ದು ಕರುಳು ಹಿಂಡುವಂತಿತ್ತು.