Advertisement
ಹಿರಿಯ ಸಾಹಿತಿ ಡಾ| ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿ ನೀಡಿರುವ ವರದಿಯ ಶಿಫಾರಸುಗಳು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಿದ್ಧಪಡಿಸಿದ್ದ ಕೆಲವು ಅಂಶಗಳನ್ನು ಸೇರಿಸಿ ಸಾಂಸ್ಕೃತಿಕ ನೀತಿ ಸಿದ್ಧಪಡಿಸ ಲಾಗಿದ್ದು, ಸೋಮವಾರ ನಡೆಯಲಿರುವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
Related Articles
Advertisement
44 ಅಂಶಗಳ ಶಿಫಾರಸುಕನ್ನಡ ಭಾಷೆ ಮತ್ತು ಸ್ಥಳೀಯ ಸಂಸ್ಕೃತಿ ಕುರಿತು ಸರಕಾರ ತನ್ನ ಬದ್ಧತೆ ಪ್ರದರ್ಶಿಸಲು ಅನುಕೂಲವಾಗುವಂತೆ ಸಮಿತಿ 44 ಪ್ರಮುಖ ಅಂಶಗಳನ್ನು ಶಿಫಾರಸು ಮಾಡಿತ್ತು. ಸಾಂಸ್ಕೃತಿಕ ಉನ್ನತಿಗೆ ನೆರವಾಗಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯನ್ನು ವಿಕೇಂದ್ರೀಕರಣಗೊಳಿಸಬೇಕು. ಪ್ರತಿ ಕಂದಾಯ ವಿಭಾಗಕ್ಕೂ (ನಾಲ್ಕು ವಿಭಾಗ) ಪ್ರತ್ಯೇಕವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಿ ಸ್ಥಾಪಿಸಬೇಕು ಎಂಬ ಅಂಶವೂ ಈ ಶಿಫಾರಸಿನಲ್ಲಿ ಸೇರಿತ್ತು. ಇದಲ್ಲದೆ ಬುಡಕಟ್ಟು ಸಮುದಾಯದ ಸಂಸ್ಕೃತಿಯ ಅಭಿವೃದ್ಧಿಗೆ ಪ್ರತ್ಯೇಕ ವಿಶ್ವವಿದ್ಯಾಲಯ ಸ್ಥಾಪನೆ, ಸುಗಮ ಸಂಗೀತ ಕ್ಷೇತ್ರಕ್ಕೆಂದೇ ಪ್ರತ್ಯೇಕ ಅಕಾಡೆಮಿ ಸ್ಥಾಪನೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಲೋಕಕ್ಕೆ ಸಂಬಂಧಿಸಿದಂತೆ ಇರುವ ಅಕಾಡೆಮಿ ಮತ್ತು ಪ್ರಾಧಿಕಾರಗಳಿಗೆ ಅಧ್ಯಕ್ಷರನ್ನು ಆಯ್ಕೆ ಮಾಡಲು ಅಧಿಕಾರಯುತ ಮತ್ತು ಸರಕಾರದ ಮಧ್ಯಪ್ರವೇಶಕ್ಕೆ ಅವಕಾಶವಾಗದ ವಿಶೇಷ ತಜ್ಞರ ಸಮಿತಿ ರಚನೆ, ಕಲಾವಿದರ ಮಕ್ಕಳಿಗೆ ಉನ್ನತ ಶಿಕ್ಷಣದಲ್ಲಿ ಸಾಂಸ್ಕೃತಿಕ ಒಳಮೀಸಲಾತಿ ಕಲ್ಪಿಸುವುದು, ಪ್ರೌಢಶಾಲಾ ಮಟ್ಟದಲ್ಲಿ ರಾಜ್ಯದ ಸಾಂಸ್ಕೃತಿಕ ಲೋಕದ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸಲು ಪ್ರೌಢಶಾಲೆಗಳಲ್ಲಿ ಪ್ರತ್ಯೇಕವಾಗಿ ಸಾಂಸ್ಕೃತಿಕ ಅಧ್ಯಾಪಕರ ನೇಮಕ, ಜಿಲ್ಲೆಗೊಂದು ಕಲಾಗ್ರಾಮ ಮತ್ತು ಚಿತ್ರಕಲಾ ಗ್ಯಾಲರಿ ಸ್ಥಾಪನೆ ಇತ್ಯಾದಿ ಈ ವರದಿಯಲ್ಲಿತ್ತು. ಇವೆಲ್ಲದರ ಜತೆಗೆ ಸಾಂಸ್ಕೃತಿಕ ಕಾರ್ಯ ಕ್ರಮಗಳಿಗೆ ರಾಜಕಾರಣಿಗಳನ್ನು ಆಹ್ವಾನಿಸ ಬೇಕು ಎಂಬ ಶಿಷ್ಟಾಚಾರದಿಂದ ವಿನಾಯಿತಿ ನೀಡಬೇಕು ಎಂದು ಹೇಳಿತ್ತು. ಬಜೆಟ್‌ನಲ್ಲಿ ಘೋಷಣೆ ಹುಸಿಯಾಯ್ತು
ಬರಗೂರು ನೇತೃತ್ವದ ಸಮಿತಿ ಸಿದ್ಧಪಡಿಸಿದ ಸಾಂಸ್ಕೃತಿಕ ನೀತಿ ಶಿಫಾರಸುಗಳಲ್ಲಿ ಕೆಲವು ಬದಲಾವಣೆಗಳಾಗಬೇಕು ಎಂಬ ಕೂಗು ಕೇಳಿಬಂದಿದ್ದರಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇನ್ನಷ್ಟು ಅಂಶಗಳನ್ನು ಸೇರಿಸಿ 2015ರ ಜನವರಿ ವೇಳೆಗೆ ಸಾಂಸ್ಕೃತಿಕ ನೀತಿ ಸಿದ್ಧಪಡಿಸಿತ್ತು. ಆದರೆ ಕೆಲವು ಅಂಶಗಳು ವೆಚ್ಚದಾಯಕ ಎಂಬ ಕಾರಣಕ್ಕೆ ಆರ್ಥಿಕ ಇಲಾಖೆ ಆಕ್ಷೇಪ ವ್ಯಕ್ತಪಡಿಸಿತ್ತು. ಈ ಹಿನ್ನೆಲೆಯಲ್ಲಿ ಪರಿಷ್ಕರಿಸಲಾಯಿತು. 2016ರ ಜನವರಿಯಲ್ಲೇ ಇದಕ್ಕೆ ಮುಖ್ಯಮಂತ್ರಿ ಒಪ್ಪಿಗೆ ನೀಡಿದ್ದರಿಂದ ಕಳೆದ ವರ್ಷದ ಬಜೆಟ್‌ನಲ್ಲೇ ಘೋಷಣೆಯಾಗುವ ನಿರೀಕ್ಷೆ ಇತ್ತು, ಆದರೆ ಆಗಲಿಲ್ಲ. 2017-18ನೇ ಸಾಲಿನ ಬಜೆಟ್‌ನಲ್ಲೂ ಈ ಬಗ್ಗೆ ಪ್ರಸ್ತಾವವಾಗಿರಲಿಲ್ಲ. ಪ್ರಮುಖ ಶಿಫಾರಸುಗಳು
– ಸಾಂಸ್ಕೃತಿಕ ಉನ್ನತಿಗೆ ನೆರವಾಗಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯನ್ನು ವಿಕೇಂದ್ರೀಕರಣಗೊಳಿಸಿ ಪ್ರತಿ ಕಂದಾಯ ವಿಭಾಗಕ್ಕೂ (ನಾಲ್ಕು ವಿಭಾಗ) ಪ್ರತ್ಯೇಕವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಿ ಸ್ಥಾಪಿಸಬೇಕು.
– ಸರಕಾರದ ವತಿಯಿಂದ ನಡೆಸುವುದೂ ಸಹಿತ ಎಲ್ಲ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ರಾಜಕಾರಣಿಗಳನ್ನು ಆಹ್ವಾನಿಸಬೇಕು ಎಂಬ ಶಿಷ್ಟಾಚಾರದಿಂದ ವಿನಾಯಿತಿ ನೀಡಬೇಕು.
– ಬುಡಕಟ್ಟು ಸಮುದಾಯದ ಸಂಸ್ಕೃತಿಯ ಅಭಿವೃದ್ಧಿಗೆ ಪ್ರತ್ಯೇಕ ವಿಶ್ವವಿದ್ಯಾಲಯ ಸ್ಥಾಪನೆ ಮಾಡಬೇಕು ಹಾಗೂ ಸುಗಮ ಸಂಗೀತ ಕ್ಷೇತ್ರಕ್ಕೆಂದೇ ಪ್ರತ್ಯೇಕ ಅಕಾಡೆಮಿ ರಚನೆ ಮಾಡಬೇಕು.
– ಸಾಹಿತ್ಯ ಮತ್ತು ಸಾಂಸ್ಕೃತಿಕ ಲೋಕಕ್ಕೆ ಸಂಬಂಧಿಸಿದಂತೆ ಇರುವ ಅಕಾಡೆಮಿ ಮತ್ತು ಪ್ರಾಧಿಕಾರಗಳಿಗೆ ಅಧ್ಯಕ್ಷರನ್ನು ಆಯ್ಕೆ ಮಾಡಲು ಸರಕಾರ ಮಧ್ಯಪ್ರವೇಶಿದಂತೆ ವಿಶೇಷ ತಜ್ಞರ ಸಮಿತಿ ರಚಿಸಬೇಕು.
– ಪ್ರೌಢಶಾಲಾ ಮಟ್ಟದಲ್ಲಿ ರಾಜ್ಯದ ಸಾಂಸ್ಕೃತಿಕ ಲೋಕದ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸಲು ಪ್ರತ್ಯೇಕವಾಗಿ ಸಾಂಸ್ಕೃತಿಕ ಅಧ್ಯಾಪಕರ ನೇಮಕ, ಜಿಲ್ಲೆಗೊಂದು ಕಲಾಗ್ರಾಮ ಮತ್ತು ಚಿತ್ರಕಲಾ ಗ್ಯಾಲರಿ ಸ್ಥಾಪನೆ. – ಪ್ರದೀಪ್ ಕುಮಾರ್ ಎಂ.