Advertisement
ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ತಾಲೂಕಿನ ಆದಿನಾರಾಯಣ ಹೊಸಹಳ್ಳಿ, ಕೊಡಿಹಳ್ಳಿ ಕೊನಘಟ್ಟ ಗ್ರಾಮದ 1,034 ಎಕರೆ ಕೃಷಿ ಜಮೀನಲ್ಲಿ ಕೈಗಾರಿಕಾ ವಲಯಕ್ಕಾಗಿ ಭೂಸ್ವಾಧೀನ ಮಾಡಲು ಸರ್ಕಾರ ಮುಂದಾಗಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಪಿ) ಕೊನಘಟ್ಟದ ಗ್ರಾಮದ ಹನುಮಂತಗೌಡರವರಿಗೆ ಭೂಸ್ವಾಧೀನ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ನೋಟಿಸ್ ನೀಡಿತ್ತು.
Related Articles
Advertisement
ಸರ್ಕಾರಕ್ಕೆ ವರದಿ ಸಲ್ಲಿಸುವೆ: ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್ ಮೋಹನ ಕುಮಾರಿ ಮಾತನಾಡಿ, ಭೂಸ್ವಾಧೀನದ ಕಾರಣಕ್ಕಾಗಿ ರೈತ ಹನುಮಂತಗೌಡ ಆತ್ಮಹತ್ಯೆ ಮಾಡಿಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ, ಮೃತ ರೈತನಿಗೆ ಪರಿಹಾರ ನೀಡುವಂತೆ ಸರ್ಕಾರಕ್ಕೆ ವರದಿ ನೀಡುವುದಾಗಿ ತಿಳಿಸಿದರು.
ಭೂಸ್ವಾಧೀನ ಆತಂಕ: ರೈತ ಆತ್ಮಹತ್ಯೆದೊಡ್ಡಬಳ್ಳಾಪುರ: ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಕೈಗಾರಿಕಾ ಪ್ರದೇಶಕ್ಕೆ ಭೂ ಸ್ವಾಧೀನ ಮಾಡಿಕೊಳ್ಳಲು ನೋಟಿಸ್ ಬಂದ ಹಿನ್ನೆಲೆ, ಆತಂಕಕ್ಕೆ ಒಳಗಾದ ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕು ಕೊನಘಟ್ಟ ಗ್ರಾಮದಲ್ಲಿ ನಡೆದಿದೆ. ಮೃತ ರೈತ ಹನುಮಂತೇಗೌಡ(65) ಹೊಲದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿ ಕೊಂಡಿದ್ದಾನೆ. ಈತನಿಗೆ ಮಡದಿ ಮತ್ತು ನಾಲ್ಕು ಮಕ್ಕಳಿದ್ದಾರೆ. ಕೊನಘಟ್ಟದಲ್ಲಿ 2.5 ಎಕರೆ ಜಮೀನನ್ನು ಹೊಂದಿದ್ದ ಹನು ಮಂತೇಗೌಡನಿಗೆ, ಕೈಗಾರಿಕಾ ಪ್ರದೇಶ ನಿರ್ಮಾಣ ಪ್ರಕ್ರಿಯೆಗೆ ಸ್ವಾಧೀನಪಡಿಸಿ ಕೊಳ್ಳಲು ಅಷ್ಟು ಜಮೀನಿಗೆ ನೋಟಿಸ್ ನೀಡಿದ್ದರಿಂದ ಆತಂಕಗೊಂಡು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.