ಶಿವಮೊಗ್ಗ: ಪಾರಂಪರಿಕ ಕಟ್ಟಡಗಳಲ್ಲಿ ಆಯುಧ ಪೂಜೆ ಸಂದರ್ಭದಲ್ಲಿ ಅರಿಶಿಣ-ಕುಂಕುಮ ಬಳಸಬಾರದು ಎಂದ ರಾಜ್ಯ ಸರ್ಕಾರ ಸುತ್ತೋಲೆ ವಿಚಾರಕ್ಕೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದು, ರಾಸಾಯನಿಕ ಪದಾರ್ಥ ಇರುವ ಅರಿಶಿಣ – ಕುಂಕುಮ ಬಳಸಬಾರದು ಎಂದು ಸುತ್ತೋಲೆ ಹೊರಡಿಸಿದೆ. ರಾಜ್ಯ ಸರ್ಕಾರ ಬಹಳ ಜಾಣತನದಿಂದ ಸುತ್ತೋಲೆ ಹೊರಡಿಸಿದೆ. ರಾಜ್ಯ ಸರ್ಕಾರ ಹಿಂದೂಗಳ ವಿರುದ್ಧ ಏನೇನು ಮಾಡಬೇಕೋ ಅವೆಲ್ಲವೂ ಮಾಡುತ್ತಿದೆ ಎಂದರು.
ಸರ್ಕಾರ ಬೀಳಿಸುವ ಬಿಜೆಪಿ ಪ್ರಯತ್ನ ಮಾಡುತ್ತಿದೆ ಎಂದು ಡಿಕೆಶಿ ಹೇಳಿಕೆಗೆ ತಿರುಗೇಟು ನೀಡಿದ್ದು, ಯಾಕೆ ಕಾಂಗ್ರೆಸ್ ಸರ್ಕಾರ ಬೀಳಿಸಬಾರದು? ಬಿಜೆಪಿ ಸರ್ಕಾರ ಯಾಕೆ ಬರಬಾರದು? ಡಿಕೆ ಶಿವಕುಮಾರ್ ಬೆಳಗಾವಿಗೆ ಹೋದರೆ ಒಬ್ಬ ಶಾಸಕ ಇಲ್ಲ ಎಂದಾದರೆ ಏನು ಮೆಸೆಜ್ ಹೋಗುತ್ತದೆ. ಕಾಂಗ್ರೆಸ್ ಸರ್ಕಾರ ಬೇಡ ಎಂದು ಅವರ ಶಾಸಕರೆ ತೀರ್ಮಾನ ಮಾಡಿದ್ದಾರೆ. ರಾಜ್ಯದ ಜನರು ಕಾಂಗ್ರೆಸ್ ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದಾರೆ. ಸತೀಶ್ ಜಾರಕಿಹೊಳಿ ಶಾಸಕರನ್ನು ಫಾರೀನ್ ಗಾದರೂ ಕರೆದುಕೊಂಡು ಹೋಗಲಿ, ಎಲ್ಲಿಗಾದರೂ ಕರೆದುಕೊಂಡು ಹೋಗಲಿ. ಒಟ್ಟಾರೆ ಅವರೆಲ್ಲರೂ ಈ ಸರ್ಕಾರದ ವಿರುದ್ಧ ತಿರುಗಿ ಬಿದ್ದಿರುವುದು ನಿಜ ಎಂದರು.
ಇದನ್ನೂ ಓದಿ:‘ಹಾಲಿಂದು ಹಾಲಿಗೆ, ನೀರಿಂದು ನೀರಿಗೆ’: ಡಿಕೆಶಿ ಸಿಬಿಐ ತನಿಖೆಗೆ ಸಿಟಿ ರವಿ ಪ್ರತಿಕ್ರಿಯೆ
ಡಿಕೆ ಶಿವಕುಮಾರ್ ಎಷ್ಟರಮಟ್ಟಿಗೆ ಅಕ್ರಮವಾಗಿ ಹಣ ಸಂಪಾದನೆ ಮಾಡಿದ್ದಾರೆಂದು ಎಲ್ಲರಿಗೂ ಗೊತ್ತಿದೆ. ಇದೇ ಕೇಸ್ ವಿಚಾರಕ್ಕೆ ಜೈಲಲ್ಲಿದ್ದರು ಜೈಲಲ್ಲಿ ಇರಲಿಲ್ವಾ ಅವರು, ಈಗ ಜಾಮೀನಿನಲ್ಲಿದ್ದಾರೆ. ಬರೆದಿಟ್ಟುಕೊಳ್ಳಿ ಇವತ್ತಲ್ಲ ನಾಳೆ ಡಿಕೆ ಶಿವಕುಮಾರ್ ಮತ್ತೆ ಜೈಲಿಗೆ ಹೋಗಲಿದ್ದಾರೆ. ಕೇಸ್ ನಿಂದಲೇ ಖುಲಾಸೆಯಾದಂತೆ ಜೈಲಿನಿಂದ ಹೊರ ಬಂದಾಗ ವರ್ತಿಸಿದ್ದರು. ಡಿ.ಕೆ.ಶಿ. ಭಂಡತನದಿಂದ ವರ್ತಿಸುತ್ತಿದ್ದಾರೆ. ನನ್ನ ಕೇಸು ಕೋರ್ಟಿನಲ್ಲಿದೆ ಎಂದು ಸೌಜನ್ಯದಿಂದ ಇರಲು ಬರುವುದಿಲ್ಲವೆ ಎಂದು ಹೇಳಿದರು.
ಜೈಲಿನಿಂದ ಹೊರಬಂದಾಗ ವಿರೋಚಿತವಾಗಿ ಮೆರವಣಿಗೆ ನಡೆಸಿದ್ದರು. ಈಗ ಸಿಬಿಐ ಮತ್ತೆ ತನಿಖೆ ನಡೆಸಲಿದೆ. ಡಿ.ಕೆ. ಶಿವಕುಮಾರ್ ಭಂಡತನದಿಂದ ವರ್ತಿಸುತ್ತಿದ್ದಾರೆ. ಅಕ್ರಮ ಹಣ ಸಿಕ್ಕಾಗ ತನಿಖೆ ಮಾಡುತ್ತೆವೆಂದು ಹೇಳಬೇಕು. ಆದರೆ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಏನು ಬೇಕಾದರೂ ಉತ್ತರ ಕೊಡುತ್ತಾರೆ ಎಂದು ಈಶ್ವರಪ್ಪ ಹೇಳಿದರು.