Advertisement

ಸರ್ಕಾರ ಟೇಕಾಫ್ ಆಗಿಲ್ಲ: ಸತೀಶ್‌ ಜಾರಕಿಹೊಳಿ

06:25 AM Nov 24, 2018 | |

ಬೆಂಗಳೂರು:ರಾಜ್ಯ ಸಮ್ಮಿಶ್ರ ಸರ್ಕಾರ ಇನ್ನೂ ಟೇಕಾಫ್ ಆಗಿಲ್ಲ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಶಾಸಕ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ.

Advertisement

ಸಂಪುಟ ವಿಸ್ತರಣೆ ಬೇಗ ಮಾಡಬೇಕು. ಸಂಪುಟ ವಿಸ್ತರಣೆ ವಿಳಂಬವಾದ ಬಗ್ಗೆ ಶಾಸಕರಲ್ಲಿ ತೀವ್ರ ಅಸಮಾಧಾನವಿದೆ ಎಂದು ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸರ್ಕಾರಕ್ಕೆ ಇನ್ನೂ ಟೇಕಾಫ್ ಆಗಿಲ್ಲ. ಸ್ವಲ್ಪ ಕಾಲಾವಕಾಶ ಬೇಕಿದೆ ಎಂದು ತಿಳಿಸಿದರು.

ಸಮ್ಮಿಶ್ರ ಸರ್ಕಾರದಲ್ಲಿ ಶಾಸಕರ ಕ್ಷೇತ್ರಗಳಿಗೆ ಅನುದಾನ ಸಮರ್ಪಕವಾಗಿ ಸಿಗುತ್ತಿಲ್ಲ. ಸಿದ್ದರಾಮಯ್ಯ ಸರ್ಕಾರದಲ್ಲಿ 40 ಕೋಟಿ ರೂ.ವರೆಗೂ ಅನುದಾನ ಸಿಗುತ್ತಿತ್ತು.  ಈಗ 10 ಕೋಟಿ ರೂ. ಸಿಗುತ್ತಿದೆ ಎಂದು ಹೇಳಿದರು.

ಸಹೋದರನಿಗೂ ಟಾಂಗ್‌
ಸಚಿವ ರಮೇಶ್‌ಜಾರಕಿಹೊಳಿ ಮಾಡಬೇಕಾದ ಕೆಲಸವನ್ನು ಡಿ.ಕೆ.ಶಿವಕುಮಾರ್‌ ಮಾಡಿದ್ದಾರೆ .  ಈ ಸಂದರ್ಭದಲ್ಲಿ ರಮೇಶ್‌ ಜಾರಕಿಹೊಳಿ ಬೆಳಗಾವಿಗೆ ಹೋಗಬೇಕಿತ್ತು, ಬೆಂಗಳೂರಿನಲ್ಲಿಯೇ ಇದ್ದಾರೆ ಎಂದು ಹೇಳಿ ಸತೀಶ್‌ ಜಾರಕಿಹೊಳಿ ಅಚ್ಚರಿ ಮೂಡಿಸಿದರು.

Advertisement

ಡಿ.ಕೆ.ಶಿವಕುಮಾರ್‌ ಹಾಗೂ ರಮೇಶ್‌ ಜಾರಕಿಹೊಳಿ 20 ವರ್ಷದ ಸ್ನೇಹಿತರು. ರಮೇಶ್‌ ಜಾರಕಿಹೊಳಿ ರಾಜೀನಾಮೆ ವಿಚಾರ ಪ್ರಸ್ತಾಪ ಆಯ್ತು, ಅಷ್ಟೇ ಬೇಗ ಮಾಯವಾ¿ಯ್ತು ಎಂದು ಹೇಳಿದ್ದಾರೆ.

ಸತೀಶ್‌ ಜಾರಕಿಹೊಳಿ ಹೇಳಿಕೆ ರಾಜಕೀಯ ವಲಯದಲ್ಲಿ ಹಲವು ಚರ್ಚೆಗೆ ಕಾರಣವಾಗಿದೆ.  ಸಮ್ಮಿಶ್ರ ಸರ್ಕಾರ ಟೇಕಾಫ್ ಆಗಿಲ್ಲ ಎಂದು ಹೇಳಿ, ಸಿದ್ದರಾಮಯ್ಯ ಸರ್ಕಾರದಲ್ಲಿ ಸಿಗುವಷ್ಟು ಅನುದಾನ ಶಾಸಕರ ಕ್ಷೇತ್ರಗಳಿಗೆ ಸಿಗುತ್ತಿಲ್ಲ ಎಂದು ಹೇಳಿರುವುದು. ಸಹೋದರ ರಮೇಶ್‌ ಜಾರಕಿಹೊಳಿ ಕಾರ್ಯವೈಖರಿ ಬಗ್ಗೆ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿರುವುದು ಕುತೂಹಲ ಮೂಡಿಸಿದೆ.

ಆಪರೇಷನ್‌ ಕಮಲ ಕಾರ್ಯಾಚರಣೆಗೆ ನಿರಂತರ ಪ್ರಯತ್ನ ಪಡುತ್ತಿರುವ ಬಿಜೆಪಿ ಸಂಪರ್ಕದಲ್ಲಿ ರಮೇಶ್‌ ಜಾರಕಿಹೊಳಿ ಇರುವುದು. ಮತ್ತೂಂದೆಡೆ ಸತೀಶ್‌ ಜಾರಕಿಹೊಳಿ  ಈ ರೀತಿಯ ಹೇಳಿಕೆ ನೀಡಿರುವ ಹಿಂದಿನ ಲೆಕ್ಕಾಚಾರ  ಏನು ಎಂಬುದು ಕಾದು ನೋಡಬೇಕಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next