Advertisement
ತಾಂತ್ರಿಕ ಸಲಹಾ ಸಮಿತಿ ಹಂತ ಹಂತವಾಗಿ ಶಾಲೆ ಆರಂಭಿಸಲು ಸೂಚಿಸಿದರೆ ಶಾಲಾರಂಭಕ್ಕೆ ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ ಎಂದು ಸಚಿವರು ತಿಳಿಸಿದರು.
ಮುಖ್ಯಮಂತ್ರಿಗಳು ಸಭೆಗೆ ಸಮಯ ಕೊಟ್ಟ ಕೂಡಲೇ, ತಜ್ಞರಿಂದ ಅಭಿಪ್ರಾಯ ಪಡೆಯುತ್ತೇವೆ.ಆ ನಂತರ ಶಾಲೆ ಆರಂಭಿಸುವ ಬಗ್ಗೆ ಅಂತಿಮ ನಿರ್ಧಾರ ಮಾಡುತ್ತೇವೆ ಎಂದರು. ಈಗಾಗಲೇ ಶಾಲೆ ಆರಂಭಕ್ಕೆ ಶಿಕ್ಷಣ ಇಲಾಖೆ ಎಲ್ಲಾ ರೀತಿಯ ಸಿದ್ದತೆ ನಡೆಸಿದೆ ಎಂದು ತಿಳಿಸಿದರು.