Advertisement

ಸರ್ಕಾರ ಸುಭದ್ರವಾಗಿದೆ: ಸಿದ್ದರಾಮಯ್ಯ

06:00 AM Jun 30, 2018 | Team Udayavani |

ಬೆಂಗಳೂರು: “ಸಮ್ಮಿಶ್ರ ಸರ್ಕಾರ ಸುಭದ್ರವಾಗಿ ರುತ್ತದೆ. ಇದರಲ್ಲಿ ಯಾವುದೇ ಅನುಮಾನ ಇಲ್ಲ’ ಎಂದು ಮಾಜಿ
ಮುಖ್ಯಮಂತ್ರಿ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ.

Advertisement

ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಸಮಿತಿ ಸಭೆಗೂ ಮೊದಲು ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷದ ಹಿರಿಯ ನಾಯಕರ ಸಭೆಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು.

“ಧರ್ಮಸ್ಥಳದ ಶಾಂತಿವನದಲ್ಲಿ ಲೋಕಾಭಿರಾಮ ವಾಗಿ ಮಾತನಾಡಿದ್ದನ್ನು ಯಾರೋ ವಿಡಿಯೋ ಮಾಡಿ ಮಾಧ್ಯಮಗಳಿಗೆ ನೀಡಿದ್ದಾರೆ. ಅದಕ್ಕೆ ಹಿಂದೆಯೂ ಇಲ್ಲ, ಮುಂದೆಯೂ ಇಲ್ಲ’ ಎಂದು ಹೇಳಿದರು.

“ನಾನು ಯಾವ ಉದ್ದೇಶದಿಂದ ಮಾತನಾಡಿದ್ದೇನೆ ಎಂದು ಯಾರಿಗೂ ಗೊತ್ತಿಲ್ಲ. ಆ ರೀತಿ ವಿಡಿಯೋ ಮಾಡಿಕೊಡುವುದು ನ್ಯಾಯಯುತವಾ? ಆ ವಿಡಿಯೋಗೂ ನನಗೂ ಯಾವುದೇ ಸಂಬಂಧ ಇಲ್ಲ’ ಎಂದು ಗರಂ ಆದರು.”ರಾಜ್ಯದಲ್ಲಿ ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬೇಕೆಂಬ ಕಾರಣದಿಂದ ಮೈತ್ರಿ ಮಾಡಿಕೊಂಡಿದ್ದೇವೆ. ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ. ಈ ಸರ್ಕಾರ ಸುಭದ್ರವಾಗಿದೆ. ಅದರಲ್ಲಿ ಯಾವುದೇ ಅನುಮಾನ ಬೇಡ’ ಎಂದು ಹೇಳಿದರು. ಇದಕ್ಕೂ ಮೊದಲು ಸಚಿವ ಕೆ.ಜೆ. ಜಾರ್ಜ್‌, ಶಾಸಕರಾದ ಎಂ.ಟಿ.ಬಿ. ನಾಗರಾಜ್‌, ರಾಘವೇಂದ್ರ ಹಿಟ್ನಾಳ್‌,ಭೀಮಾನಾಯ್ಕ, ಮಾಜಿ ಸಚಿವರಾದ ಎ.ಮಂಜು, ಚಲುವರಾಯಸ್ವಾಮಿ, ಎಚ್‌.ವೈ ಮೇಟಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚಿಸಿದರು.

ಸಿದ್ದರಾಮಯ್ಯ ಅವರು ಪ್ರಕೃತಿ ಚಿಕಿತ್ಸೆ ಪಡೆದುಕೊಂಡು ಬಂದಿದ್ದಾರೆ. ಅವರ ಆರೋಗ್ಯ ವಿಚಾರಿಸಲು ಬಂದಿದ್ದೆ.
ರೋಹಿಣಿ ಸಿಂಧೂರಿಯನ್ನು ಮತ್ತೆ ಹಾಸನ ಜಿಲ್ಲಾಧಿಕಾರಿಯಾಗಿ ವರ್ಗಾಯಿಸಿರುವುದಕ್ಕೆ ವಿರೋಧವಿಲ್ಲ. ವರ್ಗಾವಣೆ ಆಡಳಿತಾತ್ಮಕ ವಿಷಯ. ಅವರು ಒಳ್ಳೆ ಕೆಲಸ ಮಾಡಲಿ ಎಂದು ಹಾರೈಸುತ್ತೇನೆ.
– ಎ. ಮಂಜು, ಮಾಜಿ ಸಚಿವ

Advertisement

ನಾನು ಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿ. ನನಗೆ ನಿಗಮ ಮಂಡಳಿ ಬೇಡ. ಸಿದ್ದರಾಮಯ್ಯ ಅವರಿಗೂ ಮನವಿ
ಮಾಡಿದ್ದೇನೆ. ಆದರೆ, ಒಳಗೊಳಗೆ ಏನೇನು ಮಾಡುತ್ತಾರೋ ಗೊತ್ತಿಲ್ಲ. ರಾಜ್ಯ ಉಸ್ತುವಾರಿ ವೇಣುಗೋಪಾಲ್‌ ಬರುತ್ತಾರೆ,ಅವರನ್ನೂ ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ.
ಎಂ.ಟಿ.ಬಿ. ನಾಗರಾಜ್‌, ಹೊಸಕೋಟೆ ಶಾಸಕ

ಮೈತ್ರಿ ಸರ್ಕಾರದಲ್ಲಿ ಗೊಂದಲ ಇದೆ ಎನ್ನುವುದು ಸುಳ್ಳು. ಎಲ್ಲ ಗೊಂದಲಗಳ ನಿವಾರಣೆಗೆ ಕಾಂಗ್ರೆಸ್‌ ಹೈಕಮಾಂಡ್‌
ಇದೆ. ಸಮನ್ವಯ ಸಮಿತಿ ಇದೆ. ಎಲ್ಲಾ ಹಿರಿಯರು ಕುಳಿತು ಮಾತನಾಡುತ್ತಾರೆ.
– ಚೆಲುವರಾಯಸ್ವಾಮಿ, ಮಾಜಿ ಸಚಿವ

ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಮೂಲೆಗುಂಪು ಮಾಡುವ ಯಾವ ಪ್ರಕ್ರಿಯೆಯೂ ನಡೆಯುತ್ತಿಲ್ಲ. ಉಪಮುಖ್ಯಮಂತ್ರಿ ಪರಮೇಶ್ವರ್‌ ನಡೆಸಿದ ಸಭೆಯಲ್ಲಿ ಈ ಕುರಿತಂತೆ ಚರ್ಚೆ ಆಗಿದೆ ಎಂಬುದು ಶುದಟಛಿ ಸುಳ್ಳು. ಈ
ಸಭೆಯಲ್ಲಿ ನಾನೂ ಪಾಲ್ಗೊಂಡಿದ್ದೆ. ಸಮ್ಮಿಶ್ರ ಸರಕಾರ ಐದು ವರ್ಷ ಪೂರ್ಣಗೊಳಿಸಲಿದೆ.ಇದರಲ್ಲಿ ಯಾವುದೇ ಅನುಮಾನ ಬೇಡ.
– ಆರ್‌.ಶಂಕರ, ಸಚಿವ

ಸಮ್ಮಿಶ್ರ ಸರಕಾರದಲ್ಲಿ ಯಾವುದೇ ಅತಂತ್ರ ಸ್ಥಿತಿಯಿಲ್ಲ. ಸುಮ್ಮನೆ ಸುಳ್ಳು ಸುದ್ದಿ ಹರಡಿಸಿ ಜನರಲ್ಲಿ ಗೊಂದಲ ಸೃಷ್ಟಿಸಲಾಗುತ್ತಿದೆ. ಸಚಿವ ಸಂಪುಟದಲ್ಲಿ ನಿರ್ಧರಿಸಿದಂತೆ ಬಜೆಟ್‌ ಮಂಡಿಸಲಾಗುತ್ತಿದ್ದು, ರೈತರ ಸಾಲಮನ್ನಾ ಸೇರಿ
ಮಹತ್ವದ ನಿರ್ಧಾರ ಕೈಗೊಳ್ಳಲಾಗುವುದು. ಇದಕ್ಕೆ ಯಾರ ವಿರೋಧವೂ ಇಲ್ಲ.
– ವೆಂಕಟರಾವ ನಾಡಗೌಡ,
ಪಶುಸಂಗೋಪನೆ ಹಾಗೂ ಮೀನುಗಾರಿಕೆ ಸಚಿವ

Advertisement

Udayavani is now on Telegram. Click here to join our channel and stay updated with the latest news.

Next