Advertisement

ವಿಳಂಬ ಸಾಲ ಮರುಪಾವತಿಗೆ ಅನುಮತಿ?

11:23 AM Mar 22, 2020 | Hari Prasad |

ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳಿಗೆ ನೆರವು ನೀಡುವ ಬಗ್ಗೆ ಕೇಂದ್ರ ಸರಕಾರ ಚಿಂತನೆ ನಡೆಸಿದೆ. ವಿಶೇಷವಾಗಿ ಸಾಲ ಮರು ಪಾವತಿಯನ್ನು ವಿಳಂಬವಾಗಿ ಮಾಡುವುದರ ಬಗ್ಗೆ ಅನುಮತಿ ನೀಡುವ ಬಗ್ಗೆ ಚಿಂತನೆ ನಡೆಸಿದೆ.ಈ ಬಗ್ಗೆ ಶುಕ್ರವಾರ ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಚರ್ಚಿಸಲಾಗಿದೆ. ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ದಿಮೆ ಖಾತೆ ಸಚಿವಾಲಯದ ಅಧಿಕಾರಿಗಳು ವಿತ್ತ ಸಚಿವಾಲಯದ ಅಧಿಕಾರಿಗಳ ಜತೆ ಮಾತುಕತೆ ನಡೆಸಿದ್ದಾರೆ.

Advertisement

ವಿತ್ತ ಸಚಿವರಿಂದ ಪರಿಶೀಲನೆ: ಮಾರಕ ಸೋಂಕಿನ ಹಿನ್ನೆಲೆಯಲ್ಲಿ ದೇಶದ ಸದ್ಯದ ಅರ್ಥ ವ್ಯವಸ್ಥೆಯ ಪರಿಶೀಲನೆಯನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ನಡೆಸಿದ್ದಾರೆ. ನಾಗರಿಕ ವಿಮಾನಯಾನ ಸಚಿವಾಲಯ, ಪಶುಸಂಗೋಪನೆ, ಪ್ರವಾಸೋದ್ಯಮ, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯೋಗ ಖಾತೆ ಸಚಿವಾಲಯಗಳ ಹಿರಿಯ ಅಧಿಕಾರಿಗಳು ಅದರಲ್ಲಿ ಭಾಗವಹಿಸಿದ್ದರು. ವಿತ್ತ ಸಚಿವಾಲಯ ಶನಿವಾರ ಆಂತರಿಕವಾಗಿ ಮತ್ತೂಂದು ಪರಿಶೀಲನಾ ಸಭೆ ನಡೆಸಲಿದೆ.

Advertisement

Udayavani is now on Telegram. Click here to join our channel and stay updated with the latest news.

Next