ಬೆಂಗಳೂರು: ದೇಶಕ್ಕಾಗಿ ವೀರ ಬಲಿದಾನ ಹೊಂದಿದ ಹುತಾತ್ಮ ಯೋಧರ ಕುಟುಂಬದೊಂದಿಗೆ ನಮ್ಮ ಸರ್ಕಾರವಿದೆ. ಅವರ ಕುಟುಂಬಕ್ಕೆ ಎಲ್ಲ ಸೌಲಭ್ಯ ಒದಗಿಸಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.
ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಬೆಂಗಳೂರಿನ ರಾಷ್ಟ್ರೀಯ ಸೈನಿಕ ಸ್ಮಾರಕದಲ್ಲಿ ಹುತಾತ್ಮ ಯೋಧರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.
ಭಾರತ ಮಾತೆಗಾಗಿ ಜೀವ ಸಮರ್ಪಿಸಿಕೊಂಡ ಯೋಧನಿಗೆ ಸದಾ ಕೃತಜ್ಞರಾಗಿದ್ದೇವೆ. ಕಾರ್ಗಿಲ್ ಅತ್ಯಂತ ದುರ್ಗಮ ಪ್ರದೇಶವಾಗಿತ್ತು.1999 ಮೇ 5 ರಿಂದ ಜುಲೈ 26 ವರಗೆ ಹೋರಾಟ ನಡೆಸಿ ಭಾರತಿಯ ಸೈನಿಕರು ಶತ್ರುಗಳನ್ನು ಹಿಮ್ಮೆಟ್ಟಿಸಿ ವಿಜಯಿಯಾದರು. ಇಡೀ ದೇಶ ರಕ್ಷಣೆ ಮಾಡಿದ ಯೋಧರ ಸಾಹಸಗಾತೆ ಯುವ ಪೀಳಿಗೆಗೆ ಎಂದಿಗೂ ಸ್ಪೂರ್ತಿಯಾಗಿದೆ ಎಂದರು.
ಇದನ್ನೂ ಓದಿ: ಭಾರತ ಸದಾ ಹೆಮ್ಮೆ ಪಡುವ ಕಾರ್ಗಿಲ್ ಕದನ ಕಲಿಗಳು: ಐವರು ವೀರ ಯೋಧರ ಪರಿಚಯ
ಪ್ರವಾಹ, ಭೂಕಂಪ, ಸುನಾಮಿಯಂತ ವಿಪತ್ತಿನಲ್ಲಿ ನಾಡಿನ ರಕ್ಷಣೆಗೆ ಧಾವಿಸುವ ಯೋದರ ಸಾಹಸ ಅನುಕರಣೀಯ. ಕಾರ್ಗಿಲ್ ಯುದ್ದದಲ್ಲಿ ಹುತಾತ್ಮರಾದ ಯೋಧರ ಕುಟುಂಬದೊಂದಿಗೆ ನಾವಿದ್ದೇವೆ. ಅವರ ನೆರವಿಗೆ ನಮ್ಮಸರ್ಕಾರ ಸದಾ ಬದ್ದ ಎಂದು ಹೇಳಿದರು.
ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸರ್ಕಾರದ ಮುಖ್ಯಕಾರ್ಯದರ್ಶಿ ಟಿ ಎಂ ವಿಜಯಭಾಸ್ಕರ್ ಇದ್ದರು