Advertisement

ಠೇವಣಿ ಮೇಲಿನ ವಿಮೆ 1 ಲಕ್ಷ ರೂ.ಗಿಂತ ಹೆಚ್ಚಿಸಲು ಕೇಂದ್ರದ ಇಂಗಿತ

09:44 AM Nov 16, 2019 | Team Udayavani |

ನವದೆಹಲಿ: ಬಹು ರಾಜ್ಯಗಳಲ್ಲಿ ಕಾರ್ಯವೆಸಗುತ್ತಿರುವ ಸಹಕಾರ ಬ್ಯಾಂಕ್‌ಗಳ ಮೇಲೆ ನಿಯಂತ್ರಣ ಹೇರುವುದಕ್ಕಾಗಿ ಠೇವಣಿಗಳ ಮೇಲೆ ಇರುವ ವಿಮೆ ಮೊತ್ತವನ್ನು 1 ಲಕ್ಷ ರೂ.ಗಳಿಗಿಂತ ಹೆಚ್ಚು ಮಾಡುವುದರ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಶುಕ್ರವಾರ ನವದೆಹಲಿಯಲ್ಲಿ ಈ ಮಾಹಿತಿ ನೀಡಿದ್ದಾರೆ.

Advertisement

ಅದಕ್ಕೆ ಸಂಬಂಧಿಸಿದ ಮಸೂದೆಯನ್ನು ಸಂಸತ್‌ನ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಿ ಅನುಮೋದನೆ ಪಡೆದುಕೊಳ್ಳುವುದಾಗಿ ಹೇಳಿದ್ದಾರೆ. ಪಂಜಾಬ್‌ ಮತ್ತು ಮಹಾರಾಷ್ಟ್ರ ಸಹಕಾರ ಬ್ಯಾಂಕ್‌ನಲ್ಲಿ ಉಂಟಾಗಿದ್ದ ಹಗರಣದ ಹಿನ್ನೆಲೆಯಲ್ಲಿ ವಿತ್ತ ಸಚಿವರ ಘೋಷಣೆ ಮಹತ್ವ ಪಡೆದಿದೆ. . ಸದ್ಯ ಬ್ಯಾಂಕ್‌ಗಳಲ್ಲಿ ಇರಿಸಲಾಗಿರುವ ಠೇವಣಿಯ ಆಧಾರದಲ್ಲಿ 1 ಲಕ್ಷ ರೂ. ವಿಮೆ ನೀಡಲಾಗುತ್ತದೆ.

ವಿವಿಧ ರೀತಿಯ ಕಲ್ಯಾಣ ಕಾರ್ಯಕ್ರಮಗಳಿಗೆ ಸರ್ಕಾರ ವೆಚ್ಚ ಮಾಡುತ್ತಿರುವ ಮೊತ್ತವನ್ನು ಕಡಿತ ಮಾಡುವ ಉದ್ದೇಶ ಇಲ್ಲ ಎಂದು ಹೇಳಿದ್ದಾರೆ. ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳು ಅವುಗಳಿಗೆ ನೀಡಿದ ಮೊತ್ತವನ್ನು ಅದೇ ಉದ್ದೇಶಕ್ಕಾಗಿ ಬಳಕೆ ಮಾಡಬೇಕು ಎಂದು ಸಲಹೆ ಮಾಡಿದ್ದಾರೆ. ಯಾವುದೇ ದೂರಸಂಪರ್ಕ ಕಂಪನಿ ನಷ್ಟ ಅಥವಾ ಸಮಸ್ಯೆಗೆ ಒಳಗಾಗುವುದು ಸರ್ಕಾರಕ್ಕೆ ಬೇಕಾಗಿಲ್ಲ ಎಂದೂ ಅವರು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next