Advertisement
ಹಳೆಯಂಗಡಿಯ ಮೂಲ್ಕಿ ಕಾಂಗ್ರೆಸ್ ಬ್ಲಾಕ್ ಕಚೇರಿಗೆ ಭೇಟಿ ನೀಡಿದ ಅವರು ಮಾಧ್ಯಮದೊಂದಿಗೆ ಮಾತನಾಡಿದರು. ಜನರೊಂದಿಗೆ ನಿರಂತರವಾಗಿ ಸಂಪರ್ಕ ಇರುವುದರಿಂದ ಕಾಂಗ್ರೆಸ್‌ಗೆ ಉತ್ತಮ ಭವಿಷ್ಯವಿದೆ ಎಂದರು. ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಧನಂಜಯ ಮಟ್ಟು ಮಾತನಾಡಿ, ಪ್ರತೀ ಬ್ಲಾಕ್ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಿದ್ದೇವೆ ಎಂದರು.
ಕೆಪಿಸಿಸಿ ಸದಸ್ಯ ಎಚ್. ವಸಂತ ಬೆರ್ನಾರ್ಡ್ ಮಾತನಾಡಿ, ಗ್ರಾಮೀಣ ಮಟ್ಟದಲ್ಲಿ ರಾಜ್ಯ ಸರಕಾರದ ಯೋಜನೆಗಳು ಅನುಷ್ಠಾನಗೊಳಿಸಲು ಗ್ರಾಮ ಪಂಚಾಯತ್ ಜನಪ್ರತಿನಿಧಿಗಳು ಮುತುವರ್ಜಿ ವಹಿಸಿದ್ದಾರೆ. ಪ್ರತಿಯೊಂದು ಬ್ಲಾಕ್‌ನಿಂದಲೂ ಈ ಬಗ್ಗೆ ನಿಗಾವಹಿಸಲಾಗಿದೆ ಎಂದರು. ಮೂಲ್ಕಿ ಬ್ಲಾಕ್ ಮಹಿಳಾ ಕಾಂಗ್ರೆಸ್‌ನ ಅಧ್ಯಕ್ಷೆ ಪದ್ಮಾವತಿ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ಹಕೀಂ ಮೂಲ್ಕಿ, ಎಪಿಎಂಸಿ ಅಧ್ಯಕ್ಷ ಪ್ರಮೋದ್ ಕುಮಾರ್, ಮೂಲ್ಕಿ ನಗರ ಪಂಚಾಯತ್ ಸದಸ್ಯರಾದ ಯೋಗೀಶ್ ಕೋಟ್ಯಾನ್, ಪುತ್ತುಬಾವಾ, ವಿಮಲಾ ಪೂಜಾರಿ, ಅಶೋಕ್ ಪೂಜಾರ್, ಕಲಾವತಿ, ಹಳೆಯಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಲಜಾ, ಸದಸ್ಯರಾದ ಅಬ್ದುಲ್ ಖಾದರ್, ಅಬ್ದುಲ್ ಅಜೀಜ್, ಪಡುಪಣಂಬೂರು ಗಾಮ ಪಂಚಾಯತ್ ಸದಸ್ಯ ಉಮೇಶ್ ಪೂಜಾರಿ, ಪಡುಪಣಂಬೂರು ಗ್ರಾಮ ಸಮಿತಿಯ ಅಧ್ಯಕ್ಷೆ ಸವಿತಾ ಶರತ್ ಬೆಳ್ಳಾಯರು, ಕಿನ್ನಿಗೋಳಿ ಗ್ರಾಮ ಪಂಚಾಯ ತ್ ಮಾಜಿ ಅಧ್ಯಕ್ಷ ಚಂದ್ರಶೇಖರ, ಶಂಕರ ಶೆಟ್ಟಿ ಚೇಳಾಯಿರು, ಹಳೆಯಂಗಡಿ ರಿಕ್ಷಾ ಯೂನಿಯನ್ ಅಧ್ಯಕ್ಷ ಚಂದ್ರಶೇಖರ ಕದಿಕೆ ಮೊದಲಾದವರು ಉಪಸ್ಥಿತರಿದ್ದರು. ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ.ಎಂ.ಆಸಿಫ್ ಅವರು ಕಾರ್ಯಕ್ರಮ ನಿರೂಪಿಸಿದರು ಹಳೆಯಂಗಡಿ ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಡಾ.ರಾಜಶೇಖರ್ ಕೋಟ್ಯಾನ್ ಭೇಟಿ ನೀಡಿ ಪಕ್ಷದ ಚಟುವಟಿಕೆಯ ಬಗ್ಗೆ ಚರ್ಚೆ ನಡೆಸಿದರು.