ಬೆಂಗಳೂರು: ನೂತನ ಸರಕಾರದಲ್ಲಿ ಐಎಎಸ್, ಐಪಿಎಸ್ ಅಧಿಕಾರಿಗಳ ವರ್ಗಾವರ್ಗಿ ಮುಂದುವರಿದಿದ್ದು, ಗುರುವಾರ ಮತ್ತೆ ನಾಲ್ವರು ಐಎಎಸ್ ಅಧಿಕಾರಿಗಳು ಹಾಗೂ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ.
ಬೆಂಗಳೂರು ಜಲಮಂಡಳಿ ಅಧ್ಯಕ್ಷ ಎನ್. ಜಯ ರಾಮ್ ಅವರನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿ ಯಾಗಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಪ್ರಧಾನ ಕಾರ್ಯ ದರ್ಶಿಯಾಗಿದ್ದ ರಾಜೇಂದ್ರ ಕುಮಾರ್ ಕಟಾರಿಯಾ ಅವರನ್ನು ಕಂದಾಯ ಇಲಾಖೆಗೆ ವರ್ಗಾಯಿಸಲಾಗಿದೆ.
ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ ಅವರನ್ನು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ (ಕೆಪಿಟಿಸಿಎಲ್) ವ್ಯವಸ್ಥಾಪಕ ನಿರ್ದೇಶಕರನ್ನಾಗಿ, ಕೆಪಿಟಿಸಿಎಲ್ ಎಂ.ಡಿ ಆಗಿದ್ದ ಡಾ| ಎನ್.ಮಂಜುಳಾ ಅವರನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಹಿರಿಯ ನಾಗರಿಕರ ಮತ್ತು ಅಂಗವಿಕಲರ ಸಬಲೀಕರಣ ಇಲಾಖೆ ಕಾರ್ಯದರ್ಶಿಯಾಗಿ, ಕೃಷಿ ಇಲಾಖೆ ಆಯುಕ್ತರಾಗಿದ್ದ ಬಿ. ಶರತ್ ಅವರನ್ನು ಬೆಂಗ ಳೂರು ಜಲಮಂಡಳಿ ವ್ಯವಸ್ಥಾ ಪಕ ನಿರ್ದೇಶಕ ಹುದ್ದೆಗೆ ನೇಮಿಸಲಾಗಿದೆ.
ವೈಟ್‌ಫೀಲ್ಡ್ ಡಿಸಿಪಿಯಾಗಿದ್ದ ಧರ್ಮೇಂದ್ರ ಕುಮಾರ್ ಮೀನಾ ಅವರನ್ನು ವಿಧಿವಿಜ್ಞಾನ ಪ್ರಯೋಗಾಲಯದ ಎಸ್ಪಿ ಯಾಗಿ ವರ್ಗಾಯಿಸಲಾಗಿದೆ. ಚುನಾವಣೆ ವೇಳೆ ವರ್ಗಾ ವಣೆಗೊಂಡು ಹುದ್ದೆ ನಿರೀಕ್ಷೆಯ ಲ್ಲಿದ್ದ ಎಸ್.ಗಿರೀಶ್ ಅವರನ್ನು ವೈಟ್‌ಫೀಲ್ಡ್ ಡಿಸಿಪಿಯಾಗಿ ವರ್ಗಾಯಿಸಲಾಗಿದೆ.