Advertisement
2018ರಲ್ಲಿಯೇ ಇಂತಹದ್ದೊಂದು ಆದೇಶ ಹೊರಡಿಸಲಾಗಿದ್ದರೂ ಇದರ ಪಾಲನೆ ಆಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾನಿಲಯಗಳು ಮತ್ತು ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಏರ್ಪಡಿಸಲ್ಪಡುವ ಸಭೆ-ಸಮಾರಂಭಗಳಲ್ಲಿ ಏಕಬಳಕೆಯ ಪ್ಲಾಸ್ಟಿಕ್ ಬಾಟಲ್‌ನ ನೀರಿನ ಬಳಕೆ/ಸರಬರಾಜು ಮಾಡುವುದನ್ನು ನಿಲ್ಲಿಸಬೇಕು ಎಂದು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಆದೇಶಿಸಿದ್ದಾರೆ. ಸಭೆ-ಸಮಾರಂಭಗಳಲ್ಲಿ ಕುಡಿಯುವ ನೀರನ್ನು ಸಂದರ್ಭಾನುಸಾರ ಶುಚಿತ್ವ ರೀತಿಯಲ್ಲಿ ಗ್ಲಾಸ್, ಸ್ಟೀಲ…, ಪೇಪರ್ ಮತ್ತಿತರ ಪ್ಲಾಸ್ಟಿಕ್ ಅಲ್ಲದ ಲೋಟಗಳಲ್ಲಿ ಸರಬರಾಜು ಮಾಡಲು ಕ್ರಮ ವಹಿಸಬೇಕು. ಜತೆಗೆ ಸಾಮೂಹಿಕ ಕುಡಿಯುವ ನೀರು ವಿತರಣಾ ವ್ಯವಸ್ಥೆಯನ್ನು ಮಾಡಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ. Advertisement
Karnataka: ಸರಕಾರಿ ಕಾರ್ಯಕ್ರಮ; ಪ್ಲಾಸ್ಟಿಕ್ ಬಾಟಲ್, ಲೋಟ ನಿಷೇಧ
12:50 AM Sep 21, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.