ಹೊಸದಿಲ್ಲಿ: ಏರ್ ಇಂಡಿಯಾ ಷೇರು ಮಾರಾಟ ನಿರ್ಧಾರವನ್ನು ಸದ್ಯಕ್ಕೆ ಕೈಬಿಟ್ಟಿರುವ ಕೇಂದ್ರ ಸರಕಾರ, ವಿಮಾನಯಾನ ಸಂಸ್ಥೆಯ ಕಾರ್ಯನಿರ್ವಹಣೆಗೆ ಅಗತ್ಯವಿರುವ ಹಣಕಾಸು ನೆರವು ನೀಡುವುದಾಗಿ ಹೇಳಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಚುನಾವಣಾ ವರ್ಷವಾಗಿರುವ ಕಾರಣ ಸದ್ಯಕ್ಕೆ ಸರಕಾರಿ ಸ್ವಾಮ್ಯದ ಕಂಪೆನಿಯನ್ನು ಮಾರುವ ನಿರ್ಧಾರದಿಂದ ಹಿಂದೆ ಸರಿಯಲಾಗಿದೆ. ನಾವು ಸಂಸ್ಥೆಯ ಕಾರ್ಯಕ್ಷಮತೆಯನ್ನು ಸುಧಾರಿಸಲು ಯತ್ನಿಸುತ್ತೇವೆ ಎಂದು ಅವರು ಹೇಳಿದ್ದಾರೆ.
Advertisement