ಡಿಯೋರಿಯಾ (ಉತ್ತರಪ್ರದೇಶ): ಇಲ್ಲಿನ ರೈಲು ನಿಲ್ದಾಣದಲ್ಲಿ ರೈಲ್ವೇ ಪೊಲೀಸ್ ಅಧಿಕಾರಿಯೊಬ್ಬರಿಗೆ ಇಬ್ಬರು ಯುವಕರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ನಡೆದಿದೆ.ಈ ವಿಡಿಯೋ ವೈರಲ್ ಆಗಿದೆ.
Advertisement
ಟಿಕೆಟ್ ಕೌಂಟರ್‌ನಲ್ಲಿ ಸರತಿಯ ಸಾಲಿನಲ್ಲಿ ನಿಲ್ಲಲು ಪೊಲೀಸ್ ಅಧಿಕಾರಿ ಸೂಚಿಸಿದಾಗ ಇಬ್ಬರು ಹಲ್ಲೆ ನಡೆಸಿದ್ದಾರೆ.
ಸಾವಿರಾರು ಪ್ರಯಾಣಿಕರು ನಿಲ್ದಾಣದಲ್ಲಿ ಇದ್ದ ವೇಳೆ ಒಬ್ಬರೇ ಇದ್ದ ಅಧಿಕಾರಿಯ ಮೇಲೆ ಹಲ್ಲೆ ನಡೆದಿದೆ. ಇಬ್ಬರು ಯುವಕರು ಅಧಿಕಾರಿಯನ್ನು ಎಳೆದಾಡಿ, ನೆಲಕ್ಕೆ ಕೆಡವಿ ಹಲ್ಲೆ ನಡೆಸಿದ್ದಾರೆ.
Related Articles
ಹಲ್ಲೆ ನಡೆಸಿದ ಇಬ್ಬರನ್ನು ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Advertisement