Advertisement
ವಾಣಿಜ್ಯ ತೆರಿಗೆ ಇಲಾಖೆ ಬೆಂಗಳೂರು ಜಂಟಿ ಆಯುಕ್ತರ ಮೇಲೆ ಕಳೆದ ತಿಂಗಳಷ್ಟೇ ಲೋಕಾಯುಕ್ತ ದಾಳಿ ನಡೆಸಿದ್ದರು. ಅವರ ವಿರುದ್ಧ ಅಕ್ರಮ ಆಸ್ತಿ ಪ್ರಕರಣ ಕೂಡ ದಾಖಲಾಗಿತ್ತು. ಅಕ್ರಮ ಆಸ್ತಿ ಹೊಂದಿದ ಆರೋಪದ ಹಿನ್ನೆಲೆಯಲ್ಲಿ ಸರಕಾರಕ್ಕೆ ಲೋಕಾಯುಕ್ತ ವರದಿ ನೀಡಿದೆ. ಅದರಂತೆ ಕ್ರಮ ಕೈಗೊಳ್ಳುವ ಮೊದಲು ಅವರಿಗೆ ಸರಕಾರ “ಭಡ್ತಿ’ ನೀಡಲು ಮುಂದಾಗಿದೆ. ಇದು ಸ್ವತಃ ಇಲಾಖೆಯಲ್ಲಿ ಹುಬ್ಬೇರಿಸುವಂತೆ ಮಾಡಿದೆ.
Related Articles
ಡಿಪಿಸಿಯಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಯ ಹೆಸರು ಉಲ್ಲೇಖೀಸಿದ್ದೂ ನಿಜ ಹಾಗೂ ಅವರ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದೂ ನಿಜ. ಈ ಬಗ್ಗೆ ಪರಿಶೀಲಿಸುವಂತೆ ಇಲಾಖೆಯಿಂದ ಸರಕಾರಕ್ಕೆ ಪತ್ರ ಹೋಗಿದೆ. ಆದರೆ ಸರಕಾರದ ಮಟ್ಟದಲ್ಲಿ ಇನ್ನೂ ಯಾವುದೇ ತೀರ್ಮಾನ ಆಗಿಲ್ಲ. ಏನಾದರೂ ನಿರ್ಧಾರ ಕೈಗೊಳ್ಳಬಹುದು ಎಂದು ಹಿರಿಯ ಅಧಿಕಾರಿಯೊಬ್ಬರು ಉದಯವಾಣಿ’ಗೆ ಮಾಹಿತಿ ನೀಡಿದರು.
Advertisement
ಅಧಿಕಾರಿಗಳು ನಿರಾತಂಕಒಬ್ಬ ಅಧಿಕಾರಿಗಾಗಿ ಲೋಕಾಯುಕ್ತ ದಾಳಿಗೊಳಗಾದ ವಿವಿಧ ಇಲಾಖೆಯ ಉಳಿದ 11 ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಇದರಿಂದ ಆ ಅಧಿಕಾರಿಗಳೂ ನಿರಾತಂಕವಾಗಿದ್ದಾರೆ. ಒಟ್ಟಾರೆ 12 ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಈ ಪೈಕಿ ವಾಣಿಜ್ಯ ತೆರಿಗೆ ಅಧಿಕಾರಿಗೆ ಮೊದಲು ಭಡ್ತಿ ನೀಡಬೇಕೋ ಅಥವಾ ಕ್ರಮ ಕೈಗೊಳ್ಳಬೇಕೋ ಎಂಬ ಜಿಜ್ಞಾಸೆ ನಡೆದಿದೆ. ಇದು ನಿರ್ಧಾರ ಆಗುವವರೆಗೂ ಉಳಿದವರ ವಿರುದ್ಧವೂ ಕ್ರಮ ಕೈಗೊಳ್ಳುವಂತಿಲ್ಲ. ಹಾಗಾಗಿ, ಅವರೆಲ್ಲ ನಿರಾತಂಕವಾಗಿ ಅಧಿಕಾರ ಅನುಭವಿಸುತ್ತಿದ್ದಾರೆ.