Advertisement

ಸಣ್ಣ ಉಳಿತಾಯ ಯೋಜನೆ ಗಳ ಬಡ್ಡಿ ದರ ಯಥಾಸ್ಥಿತಿ

07:55 AM Oct 01, 2017 | Team Udayavani |

ಹೊಸದಿಲ್ಲಿ: ಭಾರತೀಯ ರಿಸರ್ವ್‌ ಬ್ಯಾಂಕ್‌ನ ಹಣಕಾಸು ನೀತಿ ಪರಾಮರ್ಶೆಗೆ ಕೆಲವೇ ದಿನಗಳು ಬಾಕಿಯಿರುವಂತೆಯೇ ಪಿಪಿಎಫ್, ಕಿಸಾನ್‌ ವಿಕಾಸ ಪತ್ರ, ಸುಕನ್ಯಾ ಸಮೃದ್ಧಿಯಂಥ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರವನ್ನು ಯಥಾಸ್ಥಿತಿಯಲ್ಲಿರಿಸಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ. 

Advertisement

ಅಕ್ಟೋಬರ್‌-ಡಿಸೆಂಬರ್‌ ತ್ತೈಮಾಸಿಕ ಅವಧಿಯಲ್ಲಿ ಬಡ್ಡಿ ದರದಲ್ಲಿ ಯಾವ ಬದಲಾವಣೆಯೂ ಇಲ್ಲ ಎಂದು ವಿತ್ತ ಸಚಿವಾಲಯ ಸ್ಪಷ್ಟಪಡಿಸಿದೆ. ಕಳೆದ ವರ್ಷದ ಎಪ್ರಿಲ್‌ನಿಂದ ಪ್ರತಿ ತ್ತೈಮಾಸಿಕ ಅವಧಿಗೊಮ್ಮೆ ಎಲ್ಲ ಉಳಿತಾಯ ಯೋಜನೆಗಳ ಬಡ್ಡಿ ದರದಲ್ಲಿ ಬದಲಾವಣೆ ಮಾಡಲಾಗುತ್ತಿತ್ತು. ಆದರೆ, ಈ ಬಾರಿ ಇದನ್ನು ಯಥಾಸ್ಥಿತಿಯಲ್ಲಿರಿಸಲಾಗಿದೆ. ಅ.4ರಂದು ಆರ್‌ಬಿಐ ಹಣಕಾಸು ನೀತಿ ಪರಾಮರ್ಶೆ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next