Advertisement

ತೈಲಗಳ ಅಬಕಾರಿ ಸುಂಕ ಇಳಿಕೆ ಸಾಧ್ಯವಿಲ್ಲ

07:35 AM Sep 05, 2018 | Karthik A |

ಹೊಸದಿಲ್ಲಿ: ಪೆಟ್ರೋಲ್‌-ಡೀಸೆಲ್‌ ಮೇಲಿನ ಅಬಕಾರಿ ಸುಂಕವನ್ನು ಇಳಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ದಿನೇ ದಿನೆ ಏರುತ್ತಿರುವ ತೈಲ ಬೆಲೆಯನ್ನು ನಿಯಂತ್ರಿಸಲು ಅಬಕಾರಿ ಸುಂಕ ಇಳಿಸಬೇಕೆಂದು ಕೇಳಿಬಂದಿರುವ ಆಗ್ರಹಕ್ಕೆ ಕೇಂದ್ರ ಈ ರೀತಿ ಉತ್ತರಿಸಿದೆ. ಇತ್ತೀಚೆಗಷ್ಟೇ, ಪೆಟ್ರೋಲ್‌, ಡೀಸೆಲ್‌ಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವುದಿಲ್ಲ ಎಂದು ಕೇಂದ್ರ ಸ್ಪಷ್ಟನೆ ನೀಡಿತ್ತು.

Advertisement

ಅಬಕಾರಿ ಸುಂಕದ ವಿನಾಯ್ತಿ ಸಾಧ್ಯ ಏಕಿಲ್ಲ ಎಂಬ ಬಗ್ಗೆ ಮಾಹಿತಿ ನೀಡಿರುವ ಕೇಂದ್ರದ ಹಿರಿಯ ಅಧಿಕಾರಿಯೊಬ್ಬರು, ಡಾಲರ್‌ ವಿರುದ್ಧ ರೂಪಾಯಿ ಮೌಲ್ಯ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಉಂಟಾಗುತ್ತಿರುವ ಹಣದುಬ್ಬರದಿಂದ ಆರ್ಥಿಕ ಬೆಳವಣಿಗೆಯ ಗುರಿ ಹುಸಿಯಾಗದಂತೆ ನೋಡಿಕೊಳ್ಳಬೇಕಿದೆ. ಹಾಗಾಗಿ, ತೈಲಗಳ ಮೇಲಿನ ಅಬಕಾರಿ ಸುಂಕ ಕೈಬಿಡಲು ಸಾಧ್ಯವಿಲ್ಲ ಎಂದಿದ್ದಾರೆ. ಮಂಗಳವಾರ, ಡಾಲರ್‌ ವಿರುದ್ಧ ರೂಪಾಯಿ ಮೌಲ್ಯ 71.54ಕ್ಕೆ ಕುಸಿದಿದ್ದರಿಂದಾಗಿ ಪೆಟ್ರೋಲ್‌, ಡೀಸೆಲ್‌ ಬೆಲೆ ಮತ್ತಷ್ಟು ಹೆಚ್ಚಿದ್ದರಿಂದ ಅಬಕಾರಿ ಸುಂಕ ಕೈಬಿಡುವ ಕೂಗು ಕೇಳಿ ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next