Advertisement

ಸದೃಢ ಸಮಾಜಕ್ಕೆ ಸರ್ಕಾರಿ ಶಾಲೆ ಕೊಡುಗೆ ಅಪಾರ

03:54 PM Jun 05, 2017 | Team Udayavani |

ಕಲಘಟಗಿ: ಸಮಾಜದಲ್ಲಿ ಸಾಮಾಜಿಕ ನ್ಯಾಯದೊಂದಿಗೆ ಬದುಕಬೇಕೆಂಬ ಮನೋಭಾವನೆ ಬೀಜವನ್ನು ಮಕ್ಕಳಲ್ಲಿ ಬಿತ್ತಿ ಸದೃಢ ಸಮಾಜ ನಿರ್ಮಿಸುವಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳ ಕೊಡುಗೆ ಅಪಾರವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೆ. ಮರಿಗೌಡರ ಅಭಿಪ್ರಾಯಪಟ್ಟರು. 

Advertisement

ಪಟ್ಟಣದ ಸರ್ಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸರ್ಕಾರಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಲ್ಲಿ ಜಾತಿ, ಧರ್ಮ, ಬಡವ-ಬಲ್ಲಿದ, ಮೇಲು-ಕೀಳು ಎಂಬ ಭೇದಭಾವವಿಲ್ಲದೇ ಒಂದೇ ಕುಟುಂಬದ ಸದಸ್ಯರಂತೆ ಆಟ-ಪಾಠಗಳಲ್ಲಿ ತೊಡಗಿಸಿಕೊಳ್ಳುತ್ತಾರೆ.

ತಾಲೂಕಿನ ಯಾವುದೇ ಮಗು ಶಿಕ್ಷಣ ವಂಚಿತವಾಗದಂತೆ ಕ್ರಮ ಜರುಗಿಸಲು ಪಾಲಕರು, ಚುನಾಯಿತ ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಸಹಕರಿಸಬೇಕೆಂದು ವಿನಂತಿಸಿದರು. ತಾಲೂಕಿನಾದ್ಯಂತ ಎಲ್ಲ ಶಾಲೆಗಳು ಈಗಾಗಲೇ ಪ್ರಾರಂಭವಾಗಿದ್ದು, ವಿದ್ಯಾರ್ಥಿಗಳಿಗೆ ಪಠ್ಯ-ಪುಸ್ತಕ ಹಾಗೂ ಸಮವಸ್ತ್ರಗಳನ್ನು ವಿತರಿಸಲಾಗಿದೆ.

ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದು ತಾಲೂಕಿನ ಹಿರಿಮೆ ಹೆಚ್ಚಿಸಿದ್ದಾರೆ. ಪ್ರಸಕ್ತ ಸಾಲಿನಲ್ಲಿ ಶಿಕ್ಷಕ ವೃಂದ ಇನ್ನೂ ಹೆಚ್ಚಿನ ಪರಿಶ್ರಮ ವಹಿಸಬೇಕಿದೆ. ಎಲ್ಲ ಶಾಲೆಗಳಲ್ಲಿ ಪ್ರತಿಶತ ನೂರರಷ್ಟು ಫಲಿತಾಂಶ ನೀಡಲು ಪ್ರಯತ್ನಿಸಬೇಕು ಎಂದರು. 

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕನ್ನಡ, ಇಂಗ್ಲಿಷ್‌ ಹಾಗೂ ಉರ್ದು ಮಾಧ್ಯಮಗಳಲ್ಲಿ ತಾಲೂಕಿಗೆ ಅತಿ ಹೆಚ್ಚು ಅಂಕಗಳನ್ನು ಪಡೆದು ಪ್ರಥಮ ಮೂರು ಸ್ಥಾನ ಗಳಿಸಿದ 12 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಶಾಲಾ ಪ್ರಾರಂಭೋತ್ಸವದ ಅಕ್ಷರ ಪಲ್ಲಕ್ಕಿ ಮೆರವಣಿಗೆಗೆ ತಾಪಂ ಉಪಾಧ್ಯಕ್ಷ ಚಂದ್ರಗೌಡ ಪಾಟೀಲ ಹಾಗೂ ಪಪಂ ಅಧ್ಯಕ್ಷ ಬೂದಪ್ಪ ಹುರಕಡ್ಲಿ ಚಾಲನೆ ನೀಡಿದರು. ಅಕ್ಷರ ಪಲ್ಲಕ್ಕಿ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.

Advertisement

ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ರಾಜು ವಾಲಿಕಾರ ಕಾರ್ಯಕ್ರಮ ಉದ್ಘಾಟಿಸಿದರು. ಮಹಾವೀರ ಹಂಚಿನಾಳ, ಸಿ.ಸಿ.ಅಳಗೋಡಿ, ಎಸ್‌.ಎಂ. ಮಕ್ಕಣ್ಣವರ, ಐ.ವಿ. ಜವಳಿ, ಎಸ್‌ .ಎ. ಮಣಕೂರ, ಕೆ.ವೈ. ಗಂಜಿಗಟ್ಟಿ, ಜೆ.ಎಸ್‌. ಪಾಟೀಲ, ಶ್ರೀಧರ ಪಾಟೀಲಕುಲಕರ್ಣಿ, ಶಶಿಕಲಾ ರಾಠೊಡ, ಎಂ.ಪಿ. ದೊಡ್ಡಮನಿ, ಎಂ.ವೈ. ಅಂಚಟಗೇರಿ, ಎಲ್‌.ಸಿ. ಹೊಸಮನಿ, ಎಸ್‌.ಎ. ಚಿಕ್ಕನರ್ತಿ, ವಿಜಯಕುಮಾರ ಕುಲಕರ್ಣಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next