Advertisement

ದೆಹಲಿ ಮಾದರಿಯಲ್ಲಿ ಸರ್ಕಾರಿ ಶಾಲಾಭಿವೃದ್ಧಿ

11:44 PM Feb 28, 2020 | Lakshmi GovindaRaj |

ಸಾಗರ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಿದ ಮಾದರಿಯಲ್ಲೇ ರಾಜ್ಯದ ಸರ್ಕಾರಿ ಶಾಲೆಗಳ ಉನ್ನತೀಕರಣಗೊಳಿಸಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶಕುಮಾರ್‌ ತಿಳಿಸಿದರು.

Advertisement

ತಾಲೂಕಿನ ಕೆಳದಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ಕೆಲವು ಶಿಕ್ಷಣ ತಜ್ಞರು ದೆಹಲಿ ಮಾದರಿಯಲ್ಲಿ ಸರ್ಕಾರಿ ಶಾಲೆಯನ್ನು ಸಜ್ಜುಗೊಳಿಸ ಬೇಕೆಂಬ ಅಭಿಪ್ರಾಯ ನೀಡಿದ್ದಾರೆ. ನಾನು ಕೇಳಿ ತಿಳಿದುಕೊಂಡ ಪ್ರಕಾರ ದೆಹಲಿಯಲ್ಲಿ ಸರ್ಕಾರಿ ಶಾಲೆಗಳನ್ನು ಅತ್ಯಂತ ಉತ್ಕೃಷ್ಟವಾಗಿ ಅಭಿವೃದ್ಧಿಪಡಿಸಲಾಗಿದೆ.

ಅಲ್ಲಿನ ಉಪ ಮುಖ್ಯಮಂತ್ರಿ ಮನೀಷ್‌ ಸಿಸೋಡಿಯಾ ಅಲ್ಲಿನ ಸರ್ಕಾರಿ ಶಾಲೆಗಳ ಕುರಿತು ಶಿಕ್ಷಾ ಎಂಬ ಪುಸ್ತಕ ಬರೆದಿದ್ದಾರೆ. ಈ ಪುಸ್ತಕಗಳಲ್ಲಿರುವ ಕೆಲವು ಅಂಶಗಳನ್ನು ಶಿಕ್ಷಣ ನೀತಿಯಲ್ಲಿ ಅಳವಡಿಸಿಕೊಳ್ಳುವ ಪ್ರಯತ್ನ ಮಾಡಲಾಗುತ್ತಿದೆ ಎಂದರು.

ದೆಹಲಿಯಲ್ಲಿ ಕೇವಲ 473 ಸರ್ಕಾರಿ ಶಾಲೆಗಳಿದ್ದರೆ ಕರ್ನಾಟಕದಲ್ಲಿ 53 ಸಾವಿರ ಸರ್ಕಾರಿ ಶಾಲೆಗಳಿವೆ. ಏಕಕಾಲದಲ್ಲಿ ಎಲ್ಲವನ್ನೂ ಬದಲಾಯಿಸಲು ಸಾಧ್ಯವಿಲ್ಲ. ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಪ್ರಾಶಸ್ತ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಹಂತಹಂತವಾಗಿ ರಾಜ್ಯದಲ್ಲಿ ಶೈಕ್ಷಣಿಕ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವ ಕೆಲಸ ಮಾಡಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next