ಚಂಡೀಗಢ್: ಅಪ್ರಾಪ್ತ ವಿದ್ಯಾರ್ಥಿಗಳಿಗೆ ತನ್ನ ಮೊಬೈಲ್ ಫೋನ್ ಮೂಲಕ ಅಶ್ಲೀಲ ವಿಡಿಯೋವನ್ನು ತೋರಿಸಿದ ಆರೋಪದ ಮೇಲೆ ಸರಕಾರಿ ಶಾಲಾ ಶಿಕ್ಷಕನ ವಿರುದ್ಧ ಹರ್ಯಾಣ ಪೊಲೀಸರು ದೂರು ದಾಖಲಿಸಿರುವ ಘಟನೆ ನಡೆದಿದೆ.
ಇದನ್ನೂ ಓದಿ:APL-BPL ಅಂತೇನಿಲ್ಲ, ರಾಜ್ಯಾದ್ಯಂತ ಸರ್ಕಾರಿ ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ಘೋಷಣೆ
ಪೊಲೀಸ್ ಅಧಿಕಾರಿಗಳು ನೀಡಿರುವ ಮಾಹಿತಿಯಂತೆ, ಆರೋಪಿ ಅಂಬಾಲಾದ ನರೈನ್ ಗಢ್ ನಿವಾಸಿ ಬಂಟ್ ಸಿಂಗ್ ಎಂಬಾತ ಪಂಚಕುಲದ ಸರಕಾರಿ ಶಾಲೆಯಲ್ಲಿ ಶಿಕ್ಷಕನಾಗಿ ( ಪಂಜಾಬಿ ಭಾಷೆಯ ಪಠ್ಯ ಬೋಧಕ) ಕಾರ್ಯನಿರ್ವಹಿಸುತ್ತಿರುವುದಾಗಿ ವರದಿ ವಿವರಿಸಿದೆ.
ಚಾಕೋಲೇಟ್ ನೀಡುವುದಾಗಿ ಆಮಿಷವೊಡ್ಡಿ ವಿದ್ಯಾರ್ಥಿನಿಯರಿಗೆ ಮೊಬೈಲ್ ಫೋನ್ ಮೂಲಕ ಅಶ್ಲೀಲ ವಿಡಿಯೋವನ್ನು ತೋರಿಸುತ್ತಿರುವುದಾಗಿ ವಿದ್ಯಾರ್ಥಿಗಳು ಆರೋಪಿಸಿದ್ದರು.
Related Articles
ಸೋಮವಾರ (ಮೇ 28) ಸಿಂಗ್ ಆರೋಪವನ್ನು ಮುಖ್ಯೋಪಾಧ್ಯಾಯರು ಮುಚ್ಚಿ ಹಾಕಲು ಯತ್ನಿಸುತ್ತಿರುವುದಾಗಿ ಆರೋಪಿಸಿ ವಿದ್ಯಾರ್ಥಿನಿಯರ ಪೋಷಕರು ಪ್ರತಿಭಟನೆ ನಡೆಸಿದ್ದರು.
ಪ್ರತಿಭಟನಾ ನಿರತ ಪೋಷಕರು ಈ ಸಂದರ್ಭದಲ್ಲಿ ಸಿಂಗ್ ಕೊರಳಿಗೆ ಚಪ್ಪಲಿ ಹಾರ ಹಾಕಿ ಥಳಿಸಿದ್ದರು. ನಂತರ ಆತ ಶಾಲಾ ಆವರಣದಿಂದ ಪರಾರಿಯಾಗಿರುವುದಾಗಿ ವರದಿ ತಿಳಿಸಿದೆ.
ಪ್ರತಿಭಟನೆಯ ನಂತರ ಪೊಲೀಸರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಶಿಕ್ಷಕ ಸಿಂಗ್ ವಿರುದ್ಧ ದೂರು ದಾಖಲಿಸಿದ್ದರು. ಪೊಲೀಸ್ ಮೂಲಗಳ ಪ್ರಕಾರ, ಸಿಂಗ್ ಪತ್ನಿ ಮತ್ತು ಮಗಳು ವಿದ್ಯಾರ್ಥಿನಿಯರ ಮನೆಗೆ ತೆರಳಿ ದೂರನ್ನು ವಾಪಸ್ ಪಡೆಯುವಂತೆ ಮನವಿ ಮಾಡಿಕೊಂಡಿದ್ದರು ಎಂದು ತಿಳಿಸಿದೆ.
ಘಟನೆಗೆ ಸಂಬಂಧಿಸಿದಂತೆ ದೂರನ್ನು ಆಧರಿಸಿ ವಿದ್ಯಾರ್ಥಿನಿಯರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ. ಶಿಕ್ಷಕ ಸಿಂಗ್ ಪರಾರಿಯಾಗಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.