ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಇತ್ತೀಚಿಗೆ ಹೊರಡಿಸಿದ್ದ ಪರಿಷ್ಕೃತ ವೇಳಾಪಟ್ಟಿಯಂತೆ ಸೋಮವಾರ ಸರ್ಕಾರಿ ಪ್ರೌಢಶಾಲೆಯ ಹೆಚ್ಚುವರಿ ಶಿಕ್ಷಕರ ಪಟ್ಟಿ ಪ್ರಕಟವಾಗಬೇಕಿತ್ತು. ವರ್ಗಾವಣೆ ಸಾಫ್ಟ್ವೇರ್‌ನ ತಾಂತ್ರಿಕ ಸಮಸ್ಯೆಯಿಂದ ಹೆಚ್ಚುವರಿ ಶಿಕ್ಷಕರ ಪಟ್ಟಿ ಪ್ರಕಟವಾಗಿಲ್ಲ.
Advertisement
ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆ ನಡೆಯುತ್ತಿದೆ. ಅಲ್ಲೂ ಕೂಡ ತಾಂತ್ರಿಕ ದೋಷಗಳಿಂದಾಗಿ ಅಭ್ಯರ್ಥಿಗಳಿಗೆ ಸಮಸ್ಯೆಯಾಗುತ್ತಿದೆ. ಪ್ರೌಢಶಾಲಾ ವಿಭಾಗದ ಹೆಚ್ಚುವರಿ ಶಿಕ್ಷಕರ ಪಟ್ಟಿ ಪ್ರಕಟವಾಗದೇ ಇರುವುದರಿಂದ ವರ್ಗಾವಣೆಗೆ ಸಂಬಂಧಿಸಿದಂತೆ ಕೌನ್ಸೆಲಿಂಗ್ ಕೂಡ ವಿಳಂಬವಾಗುವ ಸಾಧ್ಯತೆ ಇದೆ ಎಂದು ಶಿಕ್ಷಕರು ಆರೋಪಿಸಿದ್ದಾರೆ.